Asianet Suvarna News Asianet Suvarna News

'ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೂ ನನಗೆ ಯಾವುದೇ ಸಂಬಂಧವಿಲ್ಲ'

ರಾಜು ಕಾಗೆ ಪಕ್ಷ ಬಿಡುವುದಿಲ್ಲ. ನಮ್ಮೊಂದಿಗೆ ಇರಲಿದ್ದಾರೆ ಎಂಬ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆಯನ್ನು ಮಾಜಿ ನಿರಾಕರಿಸಿದ ಶಾಸಕ ರಾಜು ಕಾಗೆ| ಪಕ್ಷದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ| ಪಕ್ಷವನ್ನು ಸಂಘಟಿಸಿದ್ದೇನೆ. ಹೀಗಾಗಿ, ನಿಗಮ ಮಂಡಳಿಯನ್ನು ಒಪ್ಪುವ ಮಾತೇ ಇಲ್ಲ| ತಾವು ನಿಗಮ ಮಂಡಳಿ ಸ್ಥಾನ ತಿರಸ್ಕರಿಸಿಲ್ಲ| ಕಾಡಾ ಬದಲಿಗೆ ರಾಜ್ಯ ಮಟ್ಟದಲ್ಲಿ ಕೆಲಸ ಮಾಡಲು ಬೇರೆ ನಿಗಮಕ್ಕೆ ಮನವಿ ಮಾಡಿದ್ದಾರೆ| 

EX MLA Raju Kage Talked About DCM Laxman Savadi
Author
Bengaluru, First Published Oct 14, 2019, 2:48 PM IST

ಕಾಗವಾಡ(ಅ.14): ರಾಜು ಕಾಗೆ ಪಕ್ಷ ಬಿಡುವುದಿಲ್ಲ. ನಮ್ಮೊಂದಿಗೆ ಇರಲಿದ್ದಾರೆ ಎಂಬ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಹೇಳಿಕೆಯನ್ನು ಮಾಜಿ ಶಾಸಕ ರಾಜು ಕಾಗೆ ನಿರಾಕರಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಕ್ಷದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಪಕ್ಷವನ್ನು ಸಂಘಟಿಸಿದ್ದೇನೆ. ಹೀಗಾಗಿ, ನಿಗಮ ಮಂಡಳಿಯನ್ನು ಒಪ್ಪುವ ಮಾತೇ ಇಲ್ಲ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ತಾವು ನಿಗಮ ಮಂಡಳಿ ಸ್ಥಾನ ತಿರಸ್ಕರಿಸಿಲ್ಲ. ಕಾಡಾ ಬದಲಿಗೆ ರಾಜ್ಯ ಮಟ್ಟದಲ್ಲಿ ಕೆಲಸ ಮಾಡಲು ಬೇರೆ ನಿಗಮಕ್ಕೆ ಮನವಿ ಮಾಡಿದ್ದಾರೆ. ನಮ್ಮೊಂದಿಗೆ ಇರಲಿದ್ದಾರೆ ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ಕೊಟ್ಟಿದ್ದಾರೆ. ಆದರೆ, ಇದಕ್ಕೂ ನನಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಮುಂಬರುವ ಉಪಚುನಾವಣೆಯಲ್ಲಿ ಕಾಗವಾಡ ವಿಧಾನಸಭಾ ಮತಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವುದು ಖಚಿತ. ನನ್ನೊಂದಿಗೆ 60 ಸಾವಿರ ಕಾರ್ಯಕರ್ತರಿದ್ದು, ಕ್ಷೇತ್ರದ ಜನ, ಕಾರ್ಯಕರ್ತರು ಸ್ಪರ್ಧಿಸಬೇಕೆಂಬ ಇಚ್ಛೆ ಹೊಂದಿದ್ದಾರೆ. ಹೀಗಾಗಿ, ಸ್ಪರ್ಧೆ ಮಾಡುವುದು ಶತಸಿದ್ಧ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ರಾಜು ಕಾಗೆ ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರ ನೀಡಿರುವ ಕಾಡಾ ಅಧ್ಯಕ್ಷಗಿರಿ ಒಪ್ಪಿಕೊಳ್ಳುವ ಮಾತೇ ಇಲ್ಲ. ಉಪ ಚುನಾವಣೆಗೆ ಸ್ಪರ್ಧಿಸುತ್ತೇನೆ. ಕ್ಷೇತ್ರದ ಜನರ ಹಾಗೂ ಕಾರ್ಯಕರ್ತರ ಆಶೀರ್ವಾದ ಇದೆ. ಕಾರ್ಯಕರ್ತರು ಇಂತಹ ಹೇಳಿಕೆಗಳಿಂದ ಗೊಂದಲಕ್ಕೆ ಒಳಗಾಗಬಾರದು ಎಂದು ರಾಜು ಕಾಗೆ ಮನವಿ ಮಾಡಿದ್ದಾರೆ.
 

Follow Us:
Download App:
  • android
  • ios