Asianet Suvarna News Asianet Suvarna News

ಎಲ್ಲ ಕನ್ನಡ ಶಾಲೆಗಳಿಗೂ ಬಿಸಿಯೂಟ, ಸಮವಸ್ತ್ರ: ಸಚಿವ ಸುರೇಶ ಕುಮಾರ

ಅನುದಾನರಹಿತ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆ| ಮಧ್ಯಾಹ್ನದ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರವನ್ನು ಸರ್ಕಾರಿ ಕನ್ನಡ ಶಾಲೆಗಳಿಗೆ ಮಾತ್ರ ನಿಗದಿಗೊಳಿಸಲಾಗಿತ್ತು| ಆದರೆ ಕೆಲವರು ರಾಜ್ಯದ ಎಲ್ಲ ಶಾಲೆಗಳ ಮಕ್ಕಳನ್ನು ಸರ್ಕಾರ ಒಂದೇ ದೃಷ್ಟಿ ನೋಡಿ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು|

Mid Day Meal, Uniform for All Kannada Medium Schools
Author
Bengaluru, First Published Oct 24, 2019, 10:34 AM IST

ಬೆಳಗಾವಿ[ಅ.24]: ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ಅನುದಾನರಹಿತ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ವಿಸ್ತರಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ ಅವರು ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ವಿವಿಧ ಬೇಡಿಕೆ ಈಡೇರಿಕೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ ಮತ್ತು ಮಾಧ್ಯಮಿಕ ಶಾಲಾ, ಕಾಲೇಜುಗಳ ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಧ್ಯಾಹ್ನದ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರವನ್ನು ಸರ್ಕಾರಿ ಕನ್ನಡ ಶಾಲೆಗಳಿಗೆ ಮಾತ್ರ ನಿಗದಿಗೊಳಿಸಲಾಗಿತ್ತು. ಆದರೆ ಕೆಲವರು ರಾಜ್ಯದ ಎಲ್ಲ ಶಾಲೆಗಳ ಮಕ್ಕಳನ್ನು ಸರ್ಕಾರ ಒಂದೇ ದೃಷ್ಟಿ ನೋಡಿ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.  ಜತೆಗೆ ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಲಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳ ಜತೆಗೆ ಅನುದಾನರಹಿತ ಶಾಲೆಗಳ ಮಕ್ಕಳಿಗೂ ಬಿಸಿಯೂಟ ವಿತರಣೆಗೆ ಸಂಪುಟ ಸಭೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅನುದಾನರಹಿತ ಶಾಲೆಯ ಮಕ್ಕಳಿಗೂ ಸಮವಸ್ತ್ರ ವಿತರಿಸುವ ಮೂಲಕ ಕನ್ನಡ ಶಾಲೆಗಳನ್ನು ಬೆಳೆಸಲಾಗುವುದು ಎನ್ನುವ ಮೂಲಕ ಸಚಿವರು ಕನ್ನಡ ಪ್ರೇಮ ಮೆರೆದಿದ್ದಾರೆ.

Follow Us:
Download App:
  • android
  • ios