Asianet Suvarna News Asianet Suvarna News

ಕಾಂಗ್ರೆಸ್‌ನಿಂದ ಆಮೀರ್‌ ಖಾನ್ ಹೆಸರು ದುರ್ಬಳಕೆ: ಡೀಪ್‌ಫೇಕ್‌ ವಿರುದ್ಧ ನಟನಿಂದ ದೂರು- ಎಫ್‌ಐಆರ್‌

ಬಾಲಿವುಡ್‌ ನಟ ಆಮೀರ್‌ ಖಾನ್‌ ಅವರ ಹೆಸರನ್ನು ಕಾಂಗ್ರೆಸ್‌ ದುರ್ಬಳಕೆ ಮಾಡಿಕೊಂಡಿರುವುದಾಗಿ ಆರೋಪಿಸಿ ಕಾಂಗ್ರೆಸ್‌ ವಿರುದ್ಧ ದೂರು ದಾಖಲು ಮಾಡಲಾಗಿದೆ. ಏನಿದು ಪ್ರಕರಣ? 
 

Aamir Khan Lodges FIR After His Deepfake Video Promoting Political Party Goes Viral suc
Author
First Published Apr 18, 2024, 1:02 PM IST

ಡೀಪ್‌ಫೇಕ್‌ ವಿಡಿಯೋ ಕೆಲವು ತಿಂಗಳುಗಳಿಂದ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಯಾರದ್ದೋ ಮುಖಕ್ಕೆ, ಯಾರದ್ದೋ ದೇಹ ಬಳಸಿ ಇದಾಗಲೇ ಹಲವಾರು ಚಿತ್ರ ತಾರೆಯರ ಡೀಪ್‌ಫೇಕ್‌ ವಿಡಿಯೋ ಸೃಷ್ಟಿ ಮಾಡಲಾಗಿದೆ. ಆದರೆ ಮುಖ, ದೇಹ ಮಾತ್ರವಲ್ಲದೇ ಈ ತಂತ್ರಜ್ಞಾನವನ್ನು ಬೇರೆ ರೀತಿಯಲ್ಲಿಯೂ ಬಳಸಿಕೊಳ್ಳಲಾಗುತ್ತಿದೆ. ಇದೀಗ ಇದರ ವಿರುದ್ಧ ಬಾಲಿವುಡ್‌ ನಟ ಆಮೀರ್‌ ಖಾನ್‌ ಸಮರ ಸಾರಿದ್ದಾರೆ. ಅಷ್ಟಕ್ಕೂ ಅವರು ಈ ರೀತಿ ಸಮರ ಸಾರಿರುವುದು ಕಾಂಗ್ರೆಸ್‌ ವಿರುದ್ಧ!

ಹೌದು. ತಮ್ಮ ಪ್ರಸಿದ್ಧ ಷೋ ಒಂದನ್ನು ಬಳಸಿಕೊಂಡು ಕಾಂಗ್ರೆಸ್‌ ಡೀಪ್‌ಫೇಕ್‌ ಮಾಡಿದೆ ಎನ್ನುವುದು ಆಮೀರ್‌ ಖಾನ್‌ ಅವರ ಆರೋಪ. ಆಮಿರ್ ಖಾನ್ ಅವರು ಈ ಹಿಂದೆ 'ಸತ್ಯಮೇವ ಜಯತೇ' ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಪಕ್ಷವು  ಬಿಜೆಪಿ ವಿರುದ್ಧ ಜಾಹೀರಾತು ಮಾಡಿದೆ. ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್‌,  ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾನದಲ್ಲಿ ಹರಿಬಿಟ್ಟಿದೆ ಎಂದು ಆಮೀರ್‌ ಖಾನ್‌ ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ  ಆಮೀರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಯಲ್ಲಿ  ದೂರು ದಾಖಲು ಮಾಡಿದ್ದಾರೆ. 

ಮತ್ತೊಮ್ಮೆ ರಶ್ಮಿಕಾ ಡೀಪ್​ಫೇಕ್​ ವಿಡಿಯೋ: ವಿರೋಧಿಸೋ ಬದ್ಲು ನೆಟ್ಟಿಗರು ಹೀಗೆಲ್ಲಾ ಹೇಳೋದಾ?

ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದು, ಇವರ ದೂರಿನ ಅನ್ವಯ  ಎಫ್‌ಐಆರ್ ಕೂಡ ದಾಖಲಾಗಿದೆ.  ಈ ಕುರಿತು ಮಾಹಿತಿ ನೀಡಿರುವ ಆಮೀರ್‌ ಖಾನ್ ಅವರ ವಕ್ತಾರ, ಆಮೀರ್‌ ಅವರು ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು  ಟೀಕೆ ಮಾಡಿದ್ದಿಲ್ಲ. ಈ ಮೊದಲು  ಹಲವು ಚುನಾವಣೆಗಳಲ್ಲಿ ಜಾಗೃತಿ ಅಭಿಯಾನಗಳ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಆದರೆ ಕಾಂಗ್ರೆಸ್‌ ಈ ರೀತಿಯಾಗಿ ತಮ್ಮ ಇಮೇಜನ್ನು ಹಾಳು ಮಾಡುತ್ತಿದೆ ಎಂದಿದ್ದಾರೆ.  ಇದೊಂದು ನಕಲಿ ವಿಡಿಯೋ ಮತ್ತು ಸುಳ್ಳು ಮಾಹಿತಿಯಾಗಿದೆ. ಈ ಹಿನ್ನೆಲೆ ಸೈಬರ್ ಕ್ರೈಂ ಸೆಲ್‌ನಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ವಕ್ತಾರ ಹೇಳಿದ್ದಾರೆ.

 

ಅಂದಹಾಗೆ, ಕೆಲ ತಿಂಗಳ ಹಿಂದೆ, ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್​ ವಿಡಿಯೋ ದೇಶಾದ್ಯಂತ ಭಾರಿ ಹಲ್​ಚಲ್​ ಸೃಷ್ಟಿಸಿತ್ತು. ಯಾರದ್ದೋ ದೇಹಕ್ಕೆ ಇನ್ನಾದರೋ ಮುಖ ಹಾಕಿ ಮೀಮ್ಸ್​ ಮಾಡುವುದು ಮಾಮೂಲು. ಆದರೆ, ಅಶ್ಲೀಲ ಎನ್ನುವ ವಿಡಿಯೋ ಒಂದಕ್ಕೆ ಇನ್ನೊಬ್ಬರ ಮುಖವನ್ನು ಹಾಕಿ ವಿಡಿಯೋ ಮಾಡುವ ಭಯಾನಕ ತಂತ್ರ ಈ ಡೀಪ್​ ಫೇಕ್​. ಇದಾಗಲೇ ಕೆಲವರಿಗೆ ಈ ಕೆಟ್ಟ ಅನುಭವವಾಗಿದ್ದರೂ, ನಟಿ ರಶ್ಮಿಕಾ ಮಂದಣ್ಣ ಅವರ ಪ್ರಕರಣದಿಂದಾಗಿ ಇದು ಭಾರಿ ಸುದ್ದಿಗೆ ಗ್ರಾಸವಾಯಿತು.   ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI) ಬಳಸಿ ಇದನ್ನುಮಾಡಲಾಗಿದೆ.  ಕಪ್ಪು ಬಟ್ಟೆ ಧರಿಸಿದ ಮಹಿಳೆಯೊಬ್ಬರು ಲಿಫ್ಟ್‌ಗೆ ಪ್ರವೇಶಿಸುತ್ತಿರುವ ದೃಶ್ಯ ವೈರಲ್ ಆಗಿದೆ. ಮಹಿಳೆಯ ಮುಖವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದು ನಟಿ ರಶ್ಮಿಕಾ ಮಂದನಾ ಅವರ ಮುಖವನ್ನು ಹೋಲುತ್ತದೆ. ವೀಡಿಯೋ ಆನ್‌ಲೈನ್‌ನಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. ನಟಿಯೊಬ್ಬಳು ಈ ರೀತಿ ಡ್ರೆಸ್​ ಹಾಕಿದರೆ ಅದೇನು ದೊಡ್ಡ ವಿಷಯವೇ ಅಲ್ಲ. ಈ ರೀತಿ ದೇಹ ಪ್ರದರ್ಶನ ಮಾಡುವುದು ಸರ್ವೇ ಸಾಮಾನ್ಯ ಎನಿಸಿದೆ. ಆದರೆ ಸಾಮಾನ್ಯ ಮಹಿಳೆಯರ ವಿಷಯದಲ್ಲಿಯೂ ಹೀಗೆಯೇ ಆದರೆ ಮಾನ ಮರ್ಯಾದೆಗೆ ಅಂಜುವವರು ಯಾವ ಹಂತಕ್ಕಾದರೂ ಹೋಗಬಹುದು ಎಂಬ ಬಗ್ಗೆ ಈ ವಿಷಯ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರೂ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.  

​ಕಿರಿಕ್​ ಬ್ಯೂಟಿ ರಶ್ಮಿಕಾ ಜೊತೆ ವಿಜಯ್​ ದೇವರಕೊಂಡ ಮದ್ವೆ ಫಿಕ್ಸ್​? ನಟ ಕೊಟ್ಟ ಹಿಂಟ್​ ಏನು?

Follow Us:
Download App:
  • android
  • ios