Asianet Suvarna News Asianet Suvarna News

ಕೊರೋನಾ ಸೋಂಕು ಹರಡದಿರಲು ವಿಚಾರಣಾಧೀನ ಕೈದಿಗಳ ಬಿಡುಗಡೆ

ವಿಚಾರಣಾಧೀನ ಕೈದಿಗಳ ಬಿಡುಗಡೆ| ಸುಪ್ರೀಂಕೋರ್ಟ್‌ ಆದೇಶದ ಮೇರೆಗೆ ಹಾವೇರಿ ಜಿಲ್ಲಾ ಕಾರಾಗೃಹದಲ್ಲಿದ್ದ 21 ವಿಚಾರಣಾಧೀನ ಕೈದಿಗಳು ರಿಲೀಸ್|  ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಈ ಕ್ರಮ|

Release of Prisoners due to Coronavirus in Haveri District
Author
Bengaluru, First Published Apr 1, 2020, 8:57 AM IST

ಹಾವೇರಿ(ಏ.01): ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಸುಪ್ರೀಂಕೋರ್ಟ್‌ ಆದೇಶದ ಮೇರೆಗೆ ಇಲ್ಲಿಯ ಜಿಲ್ಲಾ ಕಾರಾಗೃಹದಲ್ಲಿದ್ದ 21 ವಿಚಾರಣಾಧೀನ ಕೈದಿಗಳನ್ನು ಸೋಮವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್‌ ನ್ಯಾಯಾಧೀಶರಾದ ರೇಣುಕಾದೇವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿಯಲ್ಲಿ ಕೈಗೊಂಡ ತೀರ್ಮಾನದಂತೆ ಮೊದಲ ಬಾರಿಗೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 7 ವರ್ಷದೊಳಗಿನ ಶಿಕ್ಷೆಗೆ ಗುರಿಯಾಗಿರುವ 21 ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. 

ಭಾರತ್‌ ಲಾಕ್‌ಡೌನ್: 'ಅನಗತ್ಯ ವಾಹನಗಳನ್ನ ಮುಲಾಜಿಲ್ಲದೆ ಸೀಜ್‌ ಮಾಡಿ'

ಸುಪ್ರೀಂಕೋರ್ಟ್‌ ಆದೇಶದಂತೆ ನಡೆದ ಜಿಲ್ಲಾಮಟ್ಟದ ಸಭೆಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀವಿದ್ಯಾ, ಎಸ್ಪಿ ಕೆ.ಜಿ. ದೇವರಾಜ, ಜಿಲ್ಲಾ ಕಾರಾಗೃಹ ಅಧೀಕ್ಷಕ ತಿಮ್ಮಣ್ಣ ಭಜಂತ್ರಿ ಇತರರು ಇದ್ದರು.
 

Follow Us:
Download App:
  • android
  • ios