Asianet Suvarna News Asianet Suvarna News

ಕೊಹ್ಲಿ, ಪಾಟೀದಾರ್ ಭರ್ಜರಿ ಫಿಫ್ಟಿ, ಪಂದ್ಯ ಗೆಲ್ಲಲು ಪಂಜಾಬ್‌ಗೆ 242 ಗುರಿ

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಟಾಸ್ ಸೋತು ಬ್ಯಾಟ್ ಮಾಡಲಿಳಿದ ಆರ್‌ಸಿಬಿ ತಂಡವು ಆರಂಭದಲ್ಲೇ ನಾಯಕ ಫಾಫ್ ಡು ಪ್ಲೆಸಿಸ್(9) ಹಾಗೂ ವಿಲ್ ಜ್ಯಾಕ್ಸ್(12) ವಿಕೆಟ್‌ ಕಳೆದುಕೊಂಡಿತು. ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಕೊಡಗಿನ ಕುವರ ವಿದ್ವತ್ ಕಾವೇರಪ್ಪ ಈ ಇಬ್ಬರು ಬ್ಯಾಟರ್‌ಗಳನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು

Royal Challengers Bengaluru set 242 runs target to Punjab Kings kvn
Author
First Published May 9, 2024, 9:52 PM IST

ಧರ್ಮಶಾಲಾ(ಮೇ.09): ವಿರಾಟ್ ಕೊಹ್ಲಿ ಶತಕವಂಚಿತ ಬ್ಯಾಟಿಂಗ್ ಹಾಗೂ ರಜತ್ ಪಾಟೀದಾರ್ ಸ್ಪೋಟಕ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್‌ನಲ್ಲಿ 7 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿದ್ದು, ಪಂಜಾಬ್ ಕಿಂಗ್ಸ್‌ಗೆ ಕಠಿಣ ಗುರಿ ನೀಡಿದೆ.

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಟಾಸ್ ಸೋತು ಬ್ಯಾಟ್ ಮಾಡಲಿಳಿದ ಆರ್‌ಸಿಬಿ ತಂಡವು ಆರಂಭದಲ್ಲೇ ನಾಯಕ ಫಾಫ್ ಡು ಪ್ಲೆಸಿಸ್(9) ಹಾಗೂ ವಿಲ್ ಜ್ಯಾಕ್ಸ್(12) ವಿಕೆಟ್‌ ಕಳೆದುಕೊಂಡಿತು. ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಕೊಡಗಿನ ಕುವರ ವಿದ್ವತ್ ಕಾವೇರಪ್ಪ ಈ ಇಬ್ಬರು ಬ್ಯಾಟರ್‌ಗಳನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಈ ವೇಳೆಗೆ 4.4 ಓವರ್‌ಗಳಲ್ಲಿ ಆರ್‌ಸಿಬಿ ಸ್ಕೋರ್ ಎರಡು ವಿಕೆಟ್ ನಷ್ಟಕ್ಕೆ 43 ರನ್.

ರಜತ್-ಕೊಹ್ಲಿ ಜುಗಲ್ಬಂದಿ: ಪವರ್‌ ಪ್ಲೇನೊಳಗೆ ಎರಡು ಪ್ರಮುಖ ವಿಕಟ್ ಕಳೆದುಕೊಂಡ ಆರ್‌ಸಿಬಿ ತಂಡಕ್ಕೆ ಮೂರನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿರಾಟ್ ಕೊಹ್ಲಿ ಆಸರೆಯಾದರು. ಆರಂಭದಿಂದಲೇ ಪಂಜಾಬ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ರಜತ್ ಪಾಟೀದಾರ್ ಕೇವಲ 21 ಎಸೆತಗಳನ್ನು ಎದುರಿಸಿ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 4ನೇ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಮೂರನೇ ವಿಕೆಟ್‌ಗೆ ಕೊಹ್ಲಿ-ಪಾಟೀದಾರ್ ಜೋಡಿ ಕೇವಲ 32 ಎಸೆತಗಳನ್ನು ಎದುರಿಸಿ 76 ರನ್‌ಗಳ ಜತೆಯಾಟವಾಡಿತು. ಅಂತಿಮವಾಗಿ ಪಾಟೀದಾರ್ 23 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 55 ರನ್ ಬಾರಿಸಿ ಸ್ಯಾಮ್ ಕರ್ರನ್‌ಗೆ ವಿಕೆಟ್ ಒಪ್ಪಿಸಿದರು. ಮೊದಲ 10 ಓವರ್ ಅಂತ್ಯಕ್ಕೆ ಆರ್‌ಸಿಬಿ 3 ವಿಕೆಟ್ ಕಳೆದುಕೊಂಡು 119 ರನ್ ಬಾರಿಸಿತು.

ಪಂಜಾಬ್ ಎದುರು ಪಾಟೀದಾರ್ ಅಬ್ಬರ; ಪಂದ್ಯಕ್ಕೆ ಮಳೆ ಅಡ್ಡಿ, ತಾತ್ಕಾಲಿಕ ಸ್ಥಗಿತ

ಮತ್ತೆ ಅಬ್ಬರಿಸಿದ ಕೊಹ್ಲಿ: ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ, ಅನಾಯಾಸವಾಗಿ ರನ್ ಗಳಿಸಿದರು. ಪಂಜಾಬ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಕೊಹ್ಲಿ ಕೇವಲ 47 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 92 ರನ್ ಬಾರಿಸಿ ಆರ್ಶದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಈ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ 600+ ರನ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಇದರ ಜತೆ ಪಂಜಾಬ್ ಎದುರು 1000 ರನ್ ಸಿಡಿಸಿದ ಸಾಧನೆಯನ್ನು ಕೊಹ್ಲಿ ಮಾಡಿದರು.

ಇನ್ನು ಕೊಹ್ಲಿಗೆ ಉತ್ತಮ ಸಾಥ್ ನೀಡಿದ ಕ್ಯಾಮರೋನ್ ಗ್ರೀನ್ 5ನೇ ವಿಕೆಟ್‌ಗೆ 46 ಎಸೆತಗಳನ್ನು ಎದುರಿಸಿ 92 ರನ್‌ಗಳ ಜತೆಯಾಟ ನಿಭಾಯಿಸಿದರು. ಗ್ರೀನ್ 27 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 46 ರನ್ ಬಾರಿಸಿ ಕೊನೆಯವರಾಗಿ ಹರ್ಷಲ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.

ಪಂಜಾಬ್ ಕಿಂಗ್ಸ್ ಪರ ಹರ್ಷಲ್ ಪಟೇಲ್ 3 ವಿಕೆಟ್ ಪಡೆದರೆ, ವಿದ್ವತ್ ಕಾವೇರಪ್ಪ 2, ಆರ್ಶದೀಪ್ ಸಿಂಗ್ ಮತ್ತು ಸ್ಯಾಮ್ ಕರ್ರನ್ ತಲಾ ಒಂದೊಂದು ವಿಕೆಟ್ ಪಡೆದರು.

Follow Us:
Download App:
  • android
  • ios