Asianet Suvarna News Asianet Suvarna News

ಮಂಗಳೂರು: ಜಿಲ್ಲಾ ಹೆದ್ದಾರಿ ತಕ್ಷಣ ದುರಸ್ತಿಗೆ ನಳಿನ್‌ ಸೂಚನೆ

ಜಿಲ್ಲೆಯಲ್ಲಿ ಹೆದ್ದಾರಿ ಹೊಂಡಗಳನ್ನು ತಕ್ಷಣ ದುರಸ್ತಿಗೊಳಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ಬಿ.ಸಿ.ರೋಡ್‌ನಿಂದ ಸುರತ್ಕಲ್‌ವರೆಗಿನ ರಾಷ್ಟ್ರೀಯ ಹೆದ್ದಾರಿ ಗುಂಡಿಮಯವಾಗಿದ್ದು, ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಮಳೆ ಕಡಿಮೆಯಾದರೂ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದಿದ್ದಾರೆ.

highways to be repaired soon says mp nalin kumar
Author
Bangalore, First Published Oct 17, 2019, 9:52 AM IST

ಮಂಗಳೂರು(ಅ.17): ದ.ಕ. ಜಿಲ್ಲೆಯಲ್ಲಿ ಮಳೆ ಹಾಗೂ ಇತರ ಕಾರಣದಿಂದ ಹೊಂಡಗಳಾಗಿರುವ ಹೆದ್ದಾರಿಯನ್ನು ತಕ್ಷಣವೇ ದುರಸ್ತಿ ಮಾಡಬೇಕು ಹಾಗೂ ಈ ಕುರಿತ ಪ್ರಗತಿ ಪರಿಶೀಲನೆಯನ್ನು ಹೆದ್ದಾರಿ ಅಧಿಕಾರಿಗಳು ದ.ಕ. ಜಿಲ್ಲಾಧಿಕಾರಿಯವರಿಗೆ ನೀಡಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ಇಲಾಖೆಗಳ ರಸ್ತೆ ದುರಸ್ತಿ ಕುರಿತು ಸಂಬಂಧಪಟ್ಟಇಲಾಖೆ ಅಧಿಕಾರಿಗಳ ಜೊತೆ ಸಂಸದರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.

ಕೊರಗಜ್ಜ ಕಟ್ಟೆ ಪ್ರಕರಣ: ಪರ - ವಿರೋಧದ ಕೂಗು

ಬಿ.ಸಿ.ರೋಡ್‌ನಿಂದ ಸುರತ್ಕಲ್‌ವರೆಗಿನ ರಾಷ್ಟ್ರೀಯ ಹೆದ್ದಾರಿ ಗುಂಡಿಮಯವಾಗಿದ್ದು, ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಮಳೆ ಕಡಿಮೆಯಾದರೂ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟುಸಮಯ ಬೇಕು ಎಂದು ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದರು. ಪ್ರತಿಕ್ರಿಯಿಸಿದ ಅಧಿಕಾರಿಗಳು, ಮಂಗಳೂರು-ಸುರತ್ಕಲ್‌ ಹೆದ್ದಾರಿಯಲ್ಲಿ ಮುಂದಿನ 10 ದಿನಗಳೊಳಗಾಗಿ ಮತ್ತು ಬಿ.ಸಿ.ರೋಡ್‌ನಿಂದ ಮಂಗಳೂರುವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ತಿಂಗಳ ಅಂತ್ಯದೊಳಗೆ ಗುಂಡಿ ಮುಚ್ಚಲಾಗುತ್ತದೆ ಎಂದಿದ್ದಾರೆ.

ಪಂಪ್‌ವೆಲ್‌, ಮೂಲ್ಕಿ, ಉಳ್ಳಾಲ ಸವೀರ್‍ಸ್‌ ರಸ್ತೆ ಗುಂಡಿ ಬಿದ್ದಿದ್ದು, ವಾಹನ ಸಂಚಾರ ಕಷ್ಟವಾಗುತ್ತದೆ. ಆ ಪ್ರದೇಶಗಳಲ್ಲಿ ಪ್ರತೀ ದಿನ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ಒಂದು ವೇಳೆ ರಸ್ತೆಯಲ್ಲಿನ ಗುಂಡಿಯಿಂದ ವಾಹನ ಸವಾರರು ಅಪಘಾತಕ್ಕೆ ಒಳಗಾದರೆ ನಿಮ್ಮ ಮೇಲೆ ಕ್ರಿಮಿನಲ್‌ ಕೇಸ್‌ ಎದುರಿಸಬೇಕಾಗುತ್ತದೆ ಎಂದು ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಇನ್ನೆರಡು ದಿನಗಳೊಳಗಾಗಿ ಕೆಲಸ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ

ಬಿ.ಸಿ.ರೋಡ್‌, ಕಲ್ಲಡ್ಕ, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಗುಂಡಿ ಬಿದ್ದಿದ್ದು, ಸರಿಯಾದ ರೀತಿಯಲ್ಲಿ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿಲ್ಲ ಎಂದು ಸಂಸದರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಎಲ್‌ಆ್ಯಂಡ್‌ಟಿ ಅಧಿಕಾರಿಗಳು, ರೆಖ್ಯ-ಗುಂಡ್ಯ-ಉಪ್ಪಿನಂಗಡಿವರೆಗಿನ ಹೆದ್ದಾರಿಗಳಲ್ಲಿ ಗುಂಡಿಮುಚ್ಚುವ ಕೆಲಸ ನಡೆದಿದೆ. ಬಿ.ಸಿ. ರೋಡ್‌-ಮಾಣಿ ನಡುವೆ ವಾಹನ ಸಂಚಾರ ಹೆಚ್ಚಾಗಿರುವುದರಿಂದ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ.

ಕೊರಗಜ್ಜ ಕಟ್ಟೆ ಪ್ರಕರಣ: ಪರ - ವಿರೋಧದ ಕೂಗು

ಬಿ.ಸಿ. ರೋಡ್‌ ಸುಂದರೀಕರಣ ಯೋಜನೆಗೆ ಅ.21ರಂದು ಚಾಲನೆ ದೊರೆಯಲಿದೆ. ಬಿ.ಸಿ. ರೋಡ್‌ ಸುತ್ತಮುತ್ತಲಿನ ಪ್ರದೇಶಕ್ಕೆ ಸಿ.ಸಿ. ಕ್ಯಾಮರಾ ಅಳವಡಿಸುವಿಕೆ, ಬಸ್‌ ನಿಲ್ದಾಣದ ಬಳಿ ವೃತ್ತ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಅಂದು ಶಿಲಾನ್ಯಾಸ ನಡೆಸಲಾಗುವುದು ಎಂದು ನಳಿನ್‌ ಕುಮಾರ್‌ ಹೇಳಿದರು.

ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್‌, ದ.ಕ.ಜಿ.ಪಂ. ಸಿಇಒ ಡಾ ಆರ್‌. ಸೆಲ್ವಮಣಿ, ದ.ಕ. ಎಸ್‌ಪಿ ಲಕ್ಷ್ಮೇಪ್ರಸಾದ್‌ ಇದ್ದರು.

ಪಂಪ್‌ವೆಲ್‌ ಮೇಲ್ಸೇತುವೆಗೆ ಕೊನೆ ಗಡುವು !

ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಸಂಸದ ನಳಿನ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು. ಗಡುವು ನೀಡಿ ಸಾಕಾಗಿ ಹೋಗಿದೆ. ನವಯುಗ ಸಂಸ್ಥೆಗೆ ಇದೀಗ ಕೊನೆಯ ಗಡುವು ನೀಡಲಾಗುವುದು. ಈ ವರ್ಷಾಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಜನವರಿಯಲ್ಲಿ ಮೇಲ್ಸೇತುವೆ ಉದ್ಘಾಟನೆಗೆ ವ್ಯವಸ್ಥೆ ಮಾಡಬೇಕು ಎಂದು ನಳಿನ್‌ ಕುಮಾರ್‌ ಎಚ್ಚರಿಸಿದ್ದಾರೆ.

ಕಸ ವಿಲೇವಾರಿಗೂ ಇನ್ಮುಂದೆ ಗುಡ್ ಬೈ; ಮನೆ ಕಸ ಸಂಗ್ರಹಕ್ಕೂ ಟ್ರ್ಯಾಕಿಂಗ್ ಸಿಸ್ಟಂ!

Follow Us:
Download App:
  • android
  • ios