Asianet Suvarna News Asianet Suvarna News

Karnataka SSLC Result 2024 : ಮೇ.9ರಂದೇ 10ನೇ ತರಗತಿ ಫಲಿತಾಂಶ, ಬೆಳಗ್ಗೆ10.30ಕ್ಕೆ ಪ್ರಕಟ

ಎಂಟೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಯುತ್ತಿರುವ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 9ರಂದು ಹೊರಬೀಳಲಿದೆ.

karnataka sslc examination results 2024  Date and Time Announced gow
Author
First Published May 8, 2024, 4:04 PM IST

ಬೆಂಗಳೂರು (ಮೇ.8): ಎಂಟೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಯುತ್ತಿರುವ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 9ರಂದು ಹೊರಬೀಳಲಿದೆ. ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಾಳೆ ಬೆಳಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ಕರೆದಿದೆ. ಈ ಬಗ್ಗೆ  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ ಮಂಜುಶ್ರೀ ಮಾಹಿತಿ ನೀಡಿದ್ದಾರೆ.

ಪರೀಕ್ಷೆ ಕಟ್ಟುನಿಟ್ಟು: ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ?

ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ  ಪೂರ್ಣಗೊಂಡು, ವಿದ್ಯಾರ್ಥಿಗಳು ಪಡೆದಿರುವ ಅಂಕಗಳ ಗಣಕೀಕರಣ ಪ್ರಕ್ರಿಯೆ ಕೂಡ ಮುಕ್ತಾಯವಾಗಿದೆ.  ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರವರೆಗೆ 2750 ಕೇಂದ್ರಗಳಲ್ಲಿ ನಡೆದಿತ್ತು. ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

NEET ಪರೀಕ್ಷೆ ವೇಳೆ ಅಗತ್ಯ ವಿದ್ಯಾರ್ಥಿಗಳಿಗೆ ಡೈಪರ್ ಧರಿಸಲು, ಬದಲಿಸಲು ಕೋರ್ಟ್ ಅನುಮತಿ!

ಪರೀಕ್ಷೆ ಬರೆದ ಅಭ್ಯರ್ಥಿಗಳು  http://karresults.nic.in ವೆಬ್​​ಸೈಟ್​ನಲ್ಲಿ ಬೆಳಗ್ಗೆ 10:30ರ ನಂತರ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ. ಈ ಬಾರಿ ಎಸ್​​ ಎಸ್​ ಎಲ್​ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಆಗಿದ್ದಾರೆ. 

Follow Us:
Download App:
  • android
  • ios