Asianet Suvarna News Asianet Suvarna News

ಗೌಡರ ಕೋಟೆಯಲ್ಲಿ ಕಮಲ ಅಭ್ಯರ್ಥಿ ಎ. ಮಂಜುಗೆ ಅಗ್ನಿ ಪರೀಕ್ಷೆ!

ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ

Contestants in Hassan Loksabha Fray
Author
Bangalore, First Published Mar 25, 2019, 5:00 PM IST

ಹಾಸನ[ಮಾ.25]: ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಏರ್ಪಟ್ಟಿರುವುದರಿಂದ ಮೊದಲ ಬಾರಿ ಕಣ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಸ್ಪರ್ಧೆಗೆ ಸಜ್ಜಾಗಿದೆ.

ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್‌ನಿಂದ ಆಮದಾಗಿರುವ ಎ.ಮಂಜು ಬಿಜೆಪಿಯಿಂದ ಸತ್ವ ಪರೀಕ್ಷೆಗೆ ಮುಂದಾಗಿದ್ದಾರೆ. ಮಂಜು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನ ಬಲ ಮತ್ತು ಪಕ್ಷದ ಸಾಂಪ್ರದಾಯಿಕ ಮತಗಳು ಶ್ರೀ ರಕ್ಷೆಯಾಗಲಿವೆ.

ಪ್ರಜ್ವಲ್‌ಗೆ ಅವರ ತಾತ ದೇವೇಗೌಡರ ವರ್ಚಸ್ಸು ಮತ್ತು ತಂದೆ ರೇವಣ್ಣನವರ ಅಭಿವೃದ್ಧಿ ಕೆಲಸಗಳು ಮತ ತರಬಹುದು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

Follow Us:
Download App:
  • android
  • ios