Asianet Suvarna News Asianet Suvarna News

ಚುನಾವಣಾ ಕಣದಿಂದ ಹಿಂದೆ ಸರಿದ ಮತ್ತೊಬ್ಬ ಬಿಜೆಪಿ ಸಚಿವೆ!

ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ ಬಿಜೆಪಿಯ ಮತ್ತೊಬ್ಬ ಸಚಿವೆ

jayant sinha gets bjp ticket for hazaribagh uma bharati made party vp
Author
Bangalore, First Published Mar 24, 2019, 9:42 AM IST

ನವದೆಹಲಿ[ಮಾ.24]: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್‌ನಲ್ಲಿ ಕುಡಿಯುವ ನೀರು ಹಾಗೂ ನೈರ್ಮಲೀಕರಣ ಸಚಿವೆ ಉಮಾ ಭಾರತಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ ಘೋಷಣೆ ಮಾಡಿದೆ.

4 ದಾಖಲೆವೀರ ಸಂಸದರು ಈ ಬಾರಿ ಸಂಸತ್ತಿಗೆ ಇಲ್ಲ

ಶನಿವಾರ ಮಾತನಾಡಿದ ಕೇಂದ್ರ ಸಚಿವ ಜೆ.ಪಿ. ನಡ್ಡಾ, ‘ಉಮಾ ಭಾರತಿ ಅವರನ್ನು ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ, ಅವರು ತಮ್ಮ ಸಂಸ್ಥೆಯತ್ತ ಗಮನ ನೀಡಬೇಕಿರುವ ಕಾರಣದಿಂದ ಚುನಾವಣೆಗೆ ಸ್ಪರ್ಧಿಸದಿರುವ ನಿರ್ಧಾರ ಕೈಗೊಂಡಿದ್ದಾರೆ,’ ಎಂದು ತಿಳಿಸಿದರು.

jayant sinha gets bjp ticket for hazaribagh uma bharati made party vp

2014ರಲ್ಲಿ ಉಮಾ ಭಾರತಿ ಅವರು ಉತ್ತರ ಪ್ರದೇಶದ ಝಾನ್ಸಿ ಕ್ಷೇತ್ರದಿಂದ ಸಂತ್ತಿಗೆ ಆಯ್ಕೆಯಾಗಿದ್ದರು. ಇತ್ತೀಚೆಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಘೋಷಿಸಿದ್ದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

Follow Us:
Download App:
  • android
  • ios