ದೆಹಲಿ ಬಿಜೆಪಿ ಮೊದಲ ಪಟ್ಟಿಯಲ್ಲಿ ಕೇಜ್ರಿವಾಲ್ ವಿರುದ್ಧ ಅಭ್ಯರ್ಥಿ ಇಲ್ಲ!
ದೆಹಲಿ ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ| ಮೊದಲ ಪಟ್ಟಿ ಬಿಡುಗಡೆ ಮಾಡಿದ ದೆಹಲಿ ಬಿಜೆಪಿ ಅಧ್ಯಕ್ಷ| ಪ್ರಮುಖ ಬಿಜೆಪಿ ನಾಯಕರಿಗೆ ಟಿಕೆಟ್ ಘೋಷಿಸಿದ ಮನೋಜ್ ತಿವಾರಿ| ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಭ್ಯರ್ಥಿ ಘೋಷಣೆ ಬಾಕಿ|
ನವದೆಹಲಿ(ಜ.17): ಫೆಬ್ರವರಿ 8ರಂದು ನಡೆಯುವ ದೆಹಲಿ ವಿಧಾನಸಭೆ ಚುನಾವಣೆಗೆ, ಬಿಜೆಪಿ ತನ್ನ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಇಂದು 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎಎಪಿ ಮಾಜಿ ಶಾಸಕ ಕಪಿಲ್ ಮಿಶ್ರಾ, 11 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ನಾಲ್ವರು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.
ಇನ್ನು ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.
ದೆಹಲಿ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್: ಒಂದೇ ಹಂತದಲ್ಲಿ ಎಲೆಕ್ಷನ್
ಶೀಘ್ರದಲ್ಲೇ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಭ್ಯರ್ಥಿ ಘೋಷಿಸುವುದಾಗಿ ಮನೋಜ್ ತಿವಾರಿ ಸ್ಪಷ್ಟಪಡಿಸಿದ್ದಾರೆ.
ಹಾಲಿ ಶಾಸಕ ವಿಜೇಂದರ್ ಗುಪ್ತಾ, ಮಾಜಿ ಮೇಯರ್ ಗಳಾದ ರವೀಂದರ್ ಗುಪ್ತಾ ಹಾಗೂ ಯೋಗೇಂದರ್ ಚಾಂಡೋಲಿಯಾ ಮೊದಲ ಪಟ್ಟಿಯಲ್ಲಿ ಟಿಕೆಟ್ ಪಡೆದ ಪ್ರಮುಖರು.
ದೆಹಲಿ ವಿಧಾನಸಭೆ 70 ಸದಸ್ಯ ಬಲ ಹೊಂದಿದ್ದು, ಆಡಳಿತರೂಢ ಆಮ್ ಆದ್ಮಿ ಪಕ್ಷ ಎಲ್ಲಾ 70 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದೆ. ಇದೇ ಫೆ.8ರಂದು ಚುನಾವಣೆ ನಡೆಯಲಿದೆ.