Asianet Suvarna News Asianet Suvarna News

ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ


ಇಡೀ ಕಾಂಗ್ರೆಸ್‌ ಪಕ್ಷವನ್ನು ಜನಾಂಗೀಯ ದ್ವೇಷದ ಹೇಳಿಕೆಯ ಕೆಸರಿನಲ್ಲಿ ದೂಡಿದ ಬೆನ್ನಲ್ಲಿಯೇ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಕುಟುಂಬದ ಆಪ್ತ ಸ್ಯಾಮ್‌ ಪಿತ್ರೋಡಾ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
 

Congress overseas unit chief Sam Pitroda Quits After Landing Congress In New Mess san
Author
First Published May 8, 2024, 7:43 PM IST

ನವದೆಹಲಿ (ಮೇ.8):  ತಮ್ಮ ಇತ್ತೀಚಿನ ಹೇಳಿಕೆಗಳು ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲಿಯೇ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌  ಪಕ್ಷದ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು ಈ ಕುರಿತಾಗಿ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಮೂಲಕ ತಿಳಿಇದ್ದಾರೆ. "ಶ್ರೀ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ವಂತ ಇಚ್ಛೆಯಿಂದ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಅವರ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ" ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ. ಏಳು ಹಂತಗಳ ಚುನಾವಣೆಯ ನಡುವೆ ಅವರು ನೀಡಿದ ಹೇಳಿಕೆ ಇಂದು ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಯಿತು. ಇದರ ಬೆನ್ನಲ್ಲಿಯೇ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರ ಮಾಡಿದ್ದಾರೆ. ಅವರ ಹೇಳಿಕೆಯನ್ನು ಜನಾಂಗೀಯ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು, ಕಾಂಗ್ರೆಸ್ ಒಡೆದು ಆಳುವ ಅಭ್ಯಾಸಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ದಿ ಸ್ಟೇಟ್ಸ್‌ಮನ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಸ್ಯಾಮ್‌ ಪಿತ್ರೋಡಾ ಅವರು ಭಾರತವನ್ನು "ವೈವಿಧ್ಯಮಯ ದೇಶ" ಎಂದು ಹೇಳಿದ್ದರು. ಅಲ್ಲಿ ಪೂರ್ವದ ಜನರು ಚೀನಿಯರಂತೆ ಕಾಣುತ್ತಾರೆ, ಪಶ್ಚಿಮದ ಜನರು ಅರಬ್ಬರಂತೆ ಕಾಣುತ್ತಾರೆ, ಉತ್ತರದ ಜನರು ಬಹುಶಃ ಬಿಳಿಯರಂತೆ ಮತ್ತು ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ ಎಂದು ಹೇಳಿದ್ದರು. ಪಿತ್ರೋಡಾ ಅವರು ಈ ಹಿಂದೆ ಹೇಳಿದ್ದ ಉತ್ತರಾಧಿಕಾರ ತೆರಿಗೆ ವಿಚಾರ ಕಾಂಗ್ರೆಸ್‌ ಹಾಗೂ ಅವರ ಮೈತ್ರಿಯಾದ ಎಂಕೆ ಸ್ಟ್ಯಾಲಿನ್‌ ನೇತೃಯ್ವದ ಡಿಎಂಕೆಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಬೆಂಕಿಯುಂಡೆಯಾಗಿ ಕಾಣುತ್ತಿರುವ ನಡುವೆ ಸ್ಯಾಮ್‌ ಪಿತ್ರೋಡಾ ಅವರ ಮತ್ತೊಂದು ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಸ್ಯಾಮ್ ಪಿತ್ರೋಡಾರಿಂದ ಮತ್ತೊಂದು ವಿವಾದ : ದಕ್ಷಿಣ ಭಾರತೀಯರ ಆಫ್ರಿಕನರಿಗೆ ಹೋಲಿಸಿದ ಕಾಂಗ್ರೆಸ್ ನಾಯಕ

ಸ್ಯಾಮ್‌ ಪಿತ್ರೋಡಾ ಅವರು ಮಾತುಗಳು ವಿವಾದವಾಗುವ ಲಕ್ಷಣ ಕಂಡ ಬೆನ್ನಲ್ಲಿಯೇ ಕಾಂಗ್ರೆಸ್‌ ಈ ಹೇಳಿಕೆಗೂ ತಮಗೂ ಸಂಬಂಧವಿಲ್ಲ ಎಂದು ತಿಳಿಸಿದೆ. "ಭಾರತದ ವೈವಿಧ್ಯತೆಯನ್ನು ವಿವರಿಸಲು  ಸ್ಯಾಮ್ ಪಿತ್ರೋಡಾ ಅವರು ಪಾಡ್‌ಕ್ಯಾಸ್ಟ್‌ನಲ್ಲಿ ಚಿತ್ರಿಸಿದ ಸಾದೃಶ್ಯಗಳು ಅತ್ಯಂತ ದುರದೃಷ್ಟಕರ ಮತ್ತು ಸ್ವೀಕಾರಾರ್ಹವಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ಸಾದೃಶ್ಯಗಳಿಂದ ಸಂಪೂರ್ಣವಾಗಿ ದೂರವಿರುತ್ತದೆ" ಎಂದು ಪಕ್ಷದ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದರು.

Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Follow Us:
Download App:
  • android
  • ios