ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದ ಮೋದಿ- ಉದ್ಧವ್| ಪೊಲೀಸ್ ಮಹಾ ನಿರ್ದೇಶಕರ ರಾಷ್ಟ್ರೀಯ ಸಮಾವೇಶದಲ್ಲಿ ಮೋದಿ ಭಾಗಿ| ಪುಣೆ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಬರಮಾಡಿಕೊಂಡ ಸಿಎಂ ಉದ್ಧವ್ ಠಾಕ್ರೆ| ಅಮಿತ್ ಶಾ, ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತ|

ಪುಣೆ(ಡಿ.07): ಮಹಾರಾಷ್ಟ್ರ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಹಾಗೂ ಪ್ರಧಾನಿ ಮೋದಿ ಪರಸ್ಪರ ಮುಖಾಮುಖಿಯಾಗಿದ್ದಾರೆ. ಪುಣೆಯ ವಿಮಾನ ನಿಲ್ದಾಣದಲ್ಲಿ ಇಬ್ಬರೂ ಪರಸ್ಪರ ಕೈಕುಲುಕುತ್ತಿರುವ ದೃಶ್ಯ ವೈರಲ್ ಆಗಿದೆ.

ಎಲ್ಲಾ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಪುಣೆಗೆ ಭೇಟಿ ನೀಡಿದ್ದರು. ಈ ವೇಳೆ ಸಿಎಂ ಉದ್ಧವ್ ಠಾಕ್ರೆ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡರು.

ಕಿರಿಯ ಠಾಕ್ರೆಯಿಂದ ಹಿರಿಯಣ್ಣ ಮೋದಿಗೆ ಸ್ವಾಗತ!

Scroll to load tweet…

ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಹಾಗೂ ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು.

ನೂತನ ಸಿಎಂ ಉದ್ಧವ್ ಠಾಕ್ರೆ ಅಭಿನಂದಿಸಿ ಪ್ರಧಾನಿ ಮೋದಿ ಟ್ವಿಟ್!

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಒಟ್ಟಾಗಿ ಹೋರಾಡಿದ್ದ ಬಿಜೆಪಿ-ಶಿವಸೇನೆ, ಅಧಿಕಾರ ಹಂಚಿಕೆಯಲ್ಲಾದ ವೈಮನಸ್ಸಿನಿಂದಾಗಿ ಮೈತ್ರಿ ಕಡಿದುಕೊಂಡಿದ್ದವು. ಕಾಂಗ್ರೆಸ-ಎನ್‌ಸಿಪಿ ಜೊತೆ ಸೇರಿ ಶಿವಸೇನೆಯ ಉದ್ಧವ್ ಠಾಕ್ರೆ ಸರ್ಕಾರ ರಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಡಿಸೆಂಬರ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ