ಅವ್ರೂ ಬರ್ಲಿ: ಪ್ರಮಾಣವಚನಕ್ಕೆ ಮೋದಿ, ಶಾಗೂ ಆಮಂತ್ರಣ ಇರ್ಲಿ!

ಕೊನೆಗೂ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ ಅಂತ್ಯ|  ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಮೈತ್ರಿಕೂಟ ಅಸ್ತಿತ್ವಕ್ಕೆ| ಶಿವಸೇನೆಯ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿ| ಶಿವಾಜಿ ಪಾರ್ಕ್‌ನಲ್ಲಿ ಪ್ರಮಾಣವಚನ ಸ್ವೀಕರಿಸಲಿರುವ ಉದ್ಧವ್ ಠಾಕ್ರೆ|  ಠಾಕ್ರೆ ಪ್ರಮಾಣವಚನ ಸಮಾರಂಭಕ್ಕೆ ಮೋದಿ ಹಾಗೂ ಶಾಗೆ ಆಮಂತ್ರಣ| ಸತ್ಯ-ಸುಳ್ಳಿನ ನಡುವಿನ ಕದನ ಇದೀಗ ಮುಗಿದಿದೆ ಎಂದ ಸಂಜಯ್ ರಾವುತ್|

PM Modi and Amit Sha Invited For Uddhav Thackeray Oath Says Shiv Sena

ಮುಂಬೈ(ನ.27): ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದ್ದು, ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಮೈತ್ರಿಕೂಟ ಇಂದು ಸರ್ಕಾರ ರಚಿಸಲಿದೆ.

ಶಿವಸೇನೆಯ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ನಾಳೆ(ನ.28) ಶಿವಾಜಿ ಪಾರ್ಕ್‌ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಹಾಗೂ ಎನ್‌ಸಿಪಿಯಿಂದ ತಲಾ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರೆಯಲಿದೆ.

ಇನ್ನು ಉದ್ಧವ್ ಠಾಕ್ರೆ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಆಹ್ವಾನ ನೀಡಲಾಗಿದೆ. ದೇವೇಂದ್ರ ಫಡ್ನವೀಸ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಿಗೂ ಸಮಾರಂಭಕ್ಕೆ ಶಿವಸೇನೆ ಆಮಂತ್ರಣ ನೀಡಿದೆ.

ಮೊದಲ ಬಾರಿಗೆ ಠಾಕ್ರೆ ಕುಟುಂಬಕ್ಕೆ ಸಿಎಂ ಹುದ್ದೆ, ಸೋನಿಯಾಗೆ ಧನ್ಯವಾದ ಎಂದ ಉದ್ಧವ್!

ಈ ಕುರಿತು ಮಾಹಿತಿ ನೀಡಿರುವ ಶಿವಸೇನಾ ನಾಯಕ ಸಂಜಯ್ ರಾವತ್, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸೇರಿದಂತೆ ನಾವು ಎಲ್ಲರಿಗೂ ಆಹ್ವಾನ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಸೇನೆ ಹಾಗೂ ಮೈತ್ರಿಕೂಟ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿರುವ ರಾವುತ್, ಸತ್ಯ-ಸುಳ್ಳಿನ ನಡುವಿನ ಕದನ ಇದೀಗ ಮುಗಿದಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ತಿಂಗಳಿಗೂ ಅಧಿಕ ಕಾಲ ಜರುಗಿದ ಹಗ್ಗ ಜಗ್ಗಾಟ ಮತ್ತು ರಾಜಕೀಯ ಹೈಡ್ರಾಮಾ ಬಳಿಕ, ಕೊನೆಗೂ ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿದೆ.

ದೆಹಲಿ ಚಾಣಕ್ಯನ ಮಣಿಸಿದ ’ಮಹಾ’ ಚಾಣಾಕ್ಷ ಪವಾರ್‌!

ವಿಧಾನಸಭೆ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಬಿಜೆಪಿ, ಅಧಿಕಾರದಿಂದ ವಂಚಿತವಾಗಿ ವಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗಿ ಬಂದಿರುವುದು ಪ್ರಜಾಪ್ರಭುತ್ವದ ವಿಪರ್ಯಾಸವೇ ಸರಿ.

Latest Videos
Follow Us:
Download App:
  • android
  • ios