Asianet Suvarna News Asianet Suvarna News

ರಾಮ ಮಂದಿರಕ್ಕೆ ಸಮಿತಿ: ಸದನದಲ್ಲೇ ಪ್ರಧಾನಿ ಮೋದಿ ಘೋಷಣೆ!

ಲೋಕಸಭೆಯಲ್ಲಿ ರಾಮ ಮಂದಿರ ನಿರ್ಮಾಣ ಘೋಷಣೆ ಮಾಡಿದ ಮೋದಿ| ಮಂದಿರ ನಿರ್ಮಾಣಕ್ಕಾಗಿ ಶೀಘ್ರ ಸಮಿತಿ ರಚನೆ ಎಂದ ಪ್ರಧಾನಿ| ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ಮೋದಿ| ಪ್ರಧಾನಿಯಿಂದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ  ಸಮಿತಿ ರಚನೆಯ ಘೋಷಣೆ| ಉತ್ತರ ಪ್ರದೇಶದಿಂದ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಭೂಮಿ| ಮಂದಿರ ನಿರ್ಮಾಣಕ್ಕೆ ಎಲ್ಲಾ ಸದಸ್ಯರ ಸಹಕಾರ ಕೋರಿದ ಪ್ರಧಾನಿ| 

PM Modi Announces A Trust To Oversee The Construction Of Ram Temple
Author
Bengaluru, First Published Feb 5, 2020, 3:22 PM IST

ನವದೆಹಲಿ(ಫೆ.05): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿ ರಚನೆ ಮಾಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ಮೋದಿ, ಸುಪ್ರೀಂಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಹೇಳಿದರು. 

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದ್ದು, ಮಂದಿರ ನಿರ್ಮಾಣಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಹೆಸರಿನ ಸಮಿತಿಯೊಂದನ್ನು ರಚನೆ ಮಾಡಲಾಗುತ್ತದೆ ಎಂದು ಮೋದಿ ಘೋಷಿಸಿದರು. 

ಟ್ರಸ್ಟ್ ರಚನೆ ಕುರಿತು ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದ್ದು, ಸಮಿತಿ ರಚನೆಗೊಂಡ ಬಳಿಕ ಭೂಮಿಯನ್ನು ಟ್ರಸ್ಟ್'ಗೆ ನೀಡಲಾಗುತ್ತದೆ ಎಂದು ಈ ವೇಳೆ ಪ್ರಧಾನಿ ಸ್ಪಷ್ಟಪಡಿಸಿದರು. 

ಸುಪ್ರೀಂಕೋರ್ಟ್ ಆದೇಶದಂತೆ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಭೂಮಿಯನ್ನು ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಕೊಂಡಿದೆ. ಭಾರತದಲ್ಲಿ ಹಿಂದು, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಬೌದ್ಧರು, ಪಾರ್ಸಿಗಳು ಹಾಗೂ ಜೈನ್ ಹೀಗೆ ಎಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಮೋದಿ ನುಡಿದರು.

ಸಿಎಎ ಜಾರಿ ಸಿದ್ಧ, 3 ತಿಂಗಳಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬದ್ಧ: ಅಮಿತ್ ಶಾ!

ಇದೇ ವೇಳೆ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಪ್ರಧಾನಿ ಮೋದಿ ಮನವಿ ಮಾಡಿದರು.

ಫೆಬ್ರವರಿ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ ಮಾಡಿ

Follow Us:
Download App:
  • android
  • ios