Asianet Suvarna News Asianet Suvarna News

ಪ್ರಜ್ವಲ್‌ ರೇವಣ್ಣನಿಂದ 400 ಮಹಿಳೆಯರ ಮೇಲೆ ಅತ್ಯಾಚಾರ: ರಾಹುಲ್‌ ಗಾಂಧಿ ಆರೋಪ

ಶಿವಮೊಗ್ಗದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿ ಪರವಾಗಿ ಮತ ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
 

Rahul Gandhi Prajwal Revanna mass raped 400 women slams PM over poll support SAN
Author
First Published May 2, 2024, 5:14 PM IST | Last Updated May 2, 2024, 5:14 PM IST

ಶಿವಮೊಗ್ಗ (ಮೇ.2): ಆಪಾದಿತ ಲೈಂಗಿಕ ಹಗರಣ ಪ್ರಕರಣದಲ್ಲಿ ಗುರಿಯಾಗಿರುವ ಜೆಡಿಎಸ್‌ ನಾಯಕ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. "ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿದ್ದಾರೆ. ಇದು ಲೈಂಗಿಕ ಹಗರಣವಲ್ಲ ಸಾಮೂಹಿಕ ಅತ್ಯಾಚಾರ. ಕರ್ನಾಟಕದ ಜನರ ಮುಂದೆ ಪ್ರಧಾನಿ ಈ ಸಾಮೂಹಿಕ ಅತ್ಯಾಚಾರಿಯನ್ನು ಬೆಂಬಲಿಸಿ ಮತ ಕೇಳುತ್ತಿದ್ದರು. ಈ ಸಾಮೂಹಿಕ ಅತ್ಯಾಚಾರಿಗೆ ಮತ ನೀಡಿ, ಅದು ಅವರಿಗೆ ಸಹಾಯ ಮಾಡುತ್ತದೆ ಎನ್ನುವುದಾಗಿ ಮೋದಿ ಹೇಳಿದ್ದರು ಎಂದು ರಾಹುಲ್ ಗಾಂಧಿ ಕರ್ನಾಟಕದ ಶಿವಮೊಗ್ಗದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಗುಡುಗಿದ್ದಾರೆ.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

33 ವರ್ಷದ ಸಂಸದರು ಭಾಗಿಯಾಗಿದ್ದಾರೆ ಎನ್ನಲಾದ ಹಲವು ಸ್ಪಷ್ಟ ವಿಡಿಯೋ ತುಣುಕುಗಳು ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಭಾರೀ ಪ್ರಮಾಣದಲ್ಲಿ ವೈರಲ್‌ ಆಗಿವೆ.ಏಪ್ರಿಲ್ 26 ರಂದು ಮತದಾನ ನಡೆದ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಅವರು ಎನ್‌ಡಿಎ ಅಭ್ಯರ್ಥಿಯಾಗಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜೆಡಿ(ಎಸ್) ಎನ್‌ಡಿಎ ಜೊತೆ ಸೇರಿತ್ತು.

"ಪ್ರಧಾನಿ ಭಾರತದ ಪ್ರತಿಯೊಬ್ಬ ಮಹಿಳೆಯನ್ನು ಅವಮಾನಿಸಿದ್ದಾರೆ. ಪ್ರಧಾನಿ, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ಲಾ ಬಿಜೆಪಿ ನಾಯಕರು ದೇಶದ ಪ್ರತಿಯೊಬ್ಬ ಮಹಿಳೆಯ ಕ್ಷಮೆಯಾಚಿಸಬೇಕು" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ವಿಶ್ವದ ಯಾವುದೇ ನಾಯಕ ಕೂಡ ಸಾಮೂಹಿಕ ಅತ್ಯಾಚಾರಿಯ ಪರವಾಗಿ ಮತ ಕೇಳುವ ಸಾಹಸ ಮಾಡುತ್ತಿರಲಿಲ್ಲ ಎಂದೂ ಅವರು ಹೇಳಿದ್ದಾರೆ.

Prajwal Revanna Case: ಪೆನ್‌ಡ್ರೈವ್ ಕೇಸ್ ಹೆಸರಲ್ಲಿ ರಾಜಕಾರಣ! ಹೇಗೆ ನಡೆಯಲಿದೆ ವಿಚಾರಣೆ? ಎತ್ತ ಸಾಗುತ್ತಿದೆ ಪ್ರಕರಣ?

"ಪ್ರಧಾನಿ ಸಾಮೂಹಿಕ ಅತ್ಯಾಚಾರಿಗಾಗಿ ಮತ ಯಾಚಿಸಿದ್ದಾರೆ ಎಂಬುದು ವಿಶ್ವಾದ್ಯಂತ ಸುದ್ದಿಯಾಗಿದೆ. ಇದು ಬಿಜೆಪಿಯ ಸಿದ್ಧಾಂತವಾಗಿದೆ. ಅವರು ಮೈತ್ರಿ ಮಾಡಿಕೊಳ್ಳಲು ಮತ್ತು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ" ಎಂದು ಕಾಂಗ್ರೆಸ್ ನಾಯಕ ಟೀಕೆ ಮಾಡಿದ್ದಾರೆ.

ದೇವೇಗೌಡರ ಕುಟುಂಬ ಸದಸ್ಯರು ಹಾಸನಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ ಆಕ್ರೋಶ

Latest Videos
Follow Us:
Download App:
  • android
  • ios