ವೈಜಾಕ್ ಗ್ಯಾಸ್ ದುರಂತ, ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ಕರೆದ ಪ್ರಧಾನಿ!
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಿಷ ಅನಿಲ ಸೋರಿಕೆ ಪ್ರಕರಣ| ವಿಷಾನಿಲ ಸೋರಿಕೆಯಿಂದ ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥ| ವಿಪತ್ತು ನಿರ್ವಹಣಾ ಪ್ರಾಧಿಕಾರd ತುರ್ತು ಸಭೆ ಕರೆದ ಪ್ರಧಾನಿ!
ವಿಶಾಖಪಟ್ಟಣಂ(ಮೇ.07): ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ ದುರಂತ ಹಿನ್ನೆಲೆಯಲ್ಲಿ ಪಿಎಂ ಮೋದಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆ ಕರೆದಿದ್ದಾರೆ.
"
ಇಂದು ನಸುಕಿನ ಜಾವ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡುತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ಸೋರಿಕೆಯಾಗಿತ್ತು. ಇದರಿಂದ ಇನಬ್ಬರು ಮಕ್ಕಳು ಸೇರಿ ಒಟ್ಟು 11 ಮಂದಿ ಮೃತಪಟ್ಟಿದ್ದರು. ಅಲ್ಲದೇ ಇನ್ನೂರಕ್ಕು ಅಧಿಕ ಮಂದಿ ಆಸ್ಪತ್ರೆ ಸೇರಿದ್ದರು.
ಈ ಕುರಿತು ಇಂದು ಬೆಳಗ್ಗೆ ಗೃಹ ಸಚಿವಾಲಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಜೊತೆ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಾ ಭಾಗಿಯಾಗಿದ್ದರು. ಸದ್ಯ ಅಲ್ಲಿನ ಪರಿಸ್ಥಿತಿಯನ್ನು ನಿಗಾ ವಹಿಸಲಾಗುತ್ತಿದೆ. ಗೃಹ ಸಚಿವ ಅಮಿತಾ ಶಾ ಕೂಡ ಘಟನೆ ತೀರಾ ದುರದೃಷ್ಟಕರ ಎಂದಿದ್ದಾರೆ.
"
ವಿಷಾನಿಲ ಸೋರಿಕೆ, 8 ಸಾವು, 200ಕ್ಕೂ ಹೆಚ್ಚು ಮಂದಿ ಗಂಭೀರ!
ಪ್ರಧಾನಿ ನೃರೇದ್ರ ಮೋದಿ ಕೂಡಾ ಈ ಸಂಬಂಧ ಟ್ವೀಟ್ ಮಾಡಿ ವಿಶಾಖಪಟ್ಟಣಂನ ಫ್ಯಾಕ್ಟರಿಯ ಸುತ್ತಮುತ್ತ ನಿವಾಸಿಗಳ ಸುರಕ್ಷತೆಗೆ ನಾನು ಈ ಸಂದರ್ಭದಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಮೋದಿ ಹೇಳಿದ್ದಾರೆ. ಅಲ್ಲದೇ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ ಹಾಗೂ ಎಲ್ಲಾ ರೀತಿಯ ನೆರವು ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ