Asianet Suvarna News Asianet Suvarna News

ಗಾಂಧಿ ಕಂಡ ಮದ್ಯಮುಕ್ತ ಭಾರತದ ಕನಸು: ರಾಜ್ಯಾದ್ಯಂತ ಬೃಹತ್‌ ಜಾಥಾ

ಗಾಂಧಿ ಕಂಡ ಮದ್ಯಮುಕ್ತ ಭಾರತದ ಕನಸನ್ನು ಜನರಿಗೆ ನೆನಪು ಮಾಡಿಕೊಡುವ ಉದ್ದೇಶದಿಂದ ಅ.2 ಗಾಂಧಿ ಜಯಂತಿಯಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾದ್ಯಂತ ಸಮಾವೇಶಗಳನ್ನು ಆಯೋಜಿಸಿದೆ. ರಾಜ್ಯಾದ್ಯಂತ 37 ಕಡೆಗಳಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಗಳ ಮೂಲಕ ಅ. 2ರಿಂದ 15ರ ವರೆಗೆ ಸಮಾವೇಶಗಳು ನಡೆಯಲಿವೆ.

campaign for non alcohol country gandhi dream
Author
Bangalore, First Published Oct 2, 2019, 11:34 AM IST

ಬೆಳ್ತಂಗಡಿ(ಅ.02): ಮಹಾತ್ಮಾಗಾಂಧೀಜಿ ಅವರ 18 ರಚನಾತ್ಮಕ ಅಂಶಗಳಲ್ಲಿ ಮದ್ಯಪಾನ ನಿಷೇಧವೂ ಒಂದು. ಗಾಂಧಿ ಕಂಡ ಮದ್ಯಮುಕ್ತ ಭಾರತದ ಕನಸನ್ನು ಜನರಿಗೆ ನೆನಪು ಮಾಡಿಕೊಡುವ ಉದ್ದೇಶದಿಂದ ಅ.2 ಗಾಂಧಿ ಜಯಂತಿಯಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾದ್ಯಂತ ಸಮಾವೇಶಗಳನ್ನು ಆಯೋಜಿಸಿದೆ.

ರಾಜ್ಯಾದ್ಯಂತ 37 ಕಡೆಗಳಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಗಳ ಮೂಲಕ ಅ. 2ರಿಂದ 15ರ ವರೆಗೆ ಸಮಾವೇಶಗಳನ್ನು ಏರ್ಪಡಿಸಲಾಗುವುದು. 2 ರಂದು ಮೂಡುಬಿದಿರೆ ತಾಲೂಕಿನ ಪದ್ಮಾವತಿ ಕಲಾಮಂದಿರದಲ್ಲಿ ಬೃಹತ್‌ ಜನಜಾಗೃತಿ ಜಾಥಾ ಮತ್ತು ಸಮಾವೇಶ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು. ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು.

ಪ್ರವಾಸಿ ತಾಣಗಳ ಹೆಲಿ ಟೂರಿಸಂಗೆ ಪ್ರಸ್ತಾವನೆ

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್‌ ಆಳ್ವ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಮೂಲ್ಕಿ, ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್‌, ಮಾಜಿ ಸಚಿವ ಕೆ. ಅಭಯಚಂದ್ರಜೈನ್‌ ಮತ್ತು ಕೆ. ಅಮರನಾಥ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ ಬೆಂಗಳೂರು ಮುಖ್ಯ ಅತಿಥಿಗಳಾಗಿರುವರು.

ಸುಳ್ಯದಲ್ಲಿ ಭೀಕರ ಅಪಘಾತ, ಕೊಡಗಿನ ಕುಟುಂಬದ ನಾಲ್ವರ ದುರ್ಮರಣ

ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ನವೀನ್‌ ಅಮೀನ್‌ ಮತ್ತು ಮೂಡುಬಿದಿರೆ ಕುಲದೀಪ್‌ ಎಂ. ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ ತಾಲೂಕಿನ 3000ಕ್ಕೂ ಮಿಕ್ಕಿದ ವ್ಯಸನಮುಕ್ತರು ಭಾಗವಹಿಸುವರು. ಜಿಲ್ಲೆಯ ವ್ಯಸನಮುಕ್ತ ಸಾಧಕರಿಗೆ ‘ಜಾಗೃತಿ ಮಿತ್ರ’, ಓರ್ವರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ವೇದಿಕೆ ಕಾರ್ಯದರ್ಶಿ ವಿವೇಕ್‌ ವಿ. ಪಾಯಸ್‌ ತಿಳಿಸಿದ್ದಾರೆ.

ಸಮಾವೇಶದಲ್ಲಿ ಮದ್ಯಪಾನದ ದುರಂತಗಳ ಕುರಿತು ಅರಿವು ಮೂಡಿಸುವಿಕೆ, ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು, ವಿಚಾರ ಸಂಕಿರಣ, ಪಾನಮುಕ್ತರಿಗೆ ಅಭಿನಂದನೆ, ನವಜೀವನ ಸಾಧಕರಿಗೆ ಸನ್ಮಾನ, ಹೀಗೆ ಸಮಾಜದ ಗಣ್ಯರನ್ನು ಈ ಚಳುವಳಿಯತ್ತ ಗಮನ ಸೆಳೆಯುವುದು ಹಾಗೂ ಮದ್ಯಮುಕ್ತ ಭಾರತಕ್ಕಾಗಿ ಆಗ್ರಹಿಸಲಾಗುವುದು.

ಕರಿದ ಅಡುಗೆ ಎಣ್ಣೆ ಕೊಡಿ, ಬಯೋ ಡೀಸೆಲ್‌ ಒಯ್ಯಿರಿ!

ಈ ಬಾರಿ ವಿಶೇಷವಾಗಿ ಮಹಾತ್ಮಗಾಂಧೀಜಿ ಅವರ 150ನೇ ಜನ್ಮ ಜಯಂತಿ. ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯು ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಮುಖ್ಯವಾಗಿ 30 ಜಿಲ್ಲೆಗಳಲ್ಲಿ ‘ಗಾಂಧಿ ಸ್ಮತಿ’ ವಿಚಾರ ಸಂಕಿರಣ ಆಯೋಜಿಸಿ ಮದ್ಯಮುಕ್ತ ಸಮಾಜ ನಿರ್ಮಾಣಕ್ಕೆ ಗಾಂಧಿ ವಿಚಾರ ಧಾರೆಗಳ ಕುರಿತಂತೆ ಕಾರ್ಯಾಗಾರ, ಜನಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮ, ಪಾನಮುಕ್ತರ ಸಮಾವೇಶ, ಮಹಿಳಾ ಸಮಾವೇಶ, ವ್ಯಸನಮುಕ್ತರಿಗೆ ಅಭಿನಂದನೆ, ಶಾಲಾ ಮಕ್ಕಳಿಗೆ ತಾಲೂಕು/ಜಿಲ್ಲಾ ಮಟ್ಟದ ಚರ್ಚಾಗೋಷ್ಠಿ, ಸಾಧಕ ವ್ಯಸನ ಮುಕ್ತರಿಗೆ ’ಜಾಗೃತಿಅಣ್ಣ’ ಮತ್ತು’ಜಾಗೃತಿ ಮಿತ್ರ’ ಪ್ರಶಸ್ತಿ, ಗ್ರಾಮ ಮಟ್ಟದಲ್ಲಿ ಪ್ರೇರಕರ ತರಬೇತಿ, ಹೀಗೆ ವಿವಿಧ ಕಾರ್ಯಕ್ರಮಗಳ ಮೂಲಕ ಲಕ್ಷಾಂತರ ಜನರಿಗೆ ಗಾಂಧೀಜಿಯ ವಿಚಾರ ಧಾರೆಗಳನ್ನು ಹಾಗೂ ವ್ಯಸನಮುಕ್ತ ಭಾರತದ ಕನಸು ಕಂಡಿರುವ ಮಹಾತ್ಮಗಾಂಧೀಜಿ ಅವರ ಕನಸಿನ ಭಾರತ ನಿರ್ಮಿಸುವ ದೃಷ್ಟಿಯಲ್ಲಿ ಪ್ರಯತ್ನಿಸಲಾಗುವುದು.

ಸ್ವಸ್ಥ ಸಮಾಜ ನಿರ್ಮಾಣದ ಆಶಯ: ಮದ್ಯ ಮತ್ತು ಮಾದಕ ವ್ಯಸನದ ವಿರುದ್ಧ ಕಳೆದ ಎರಡುವರೆ ದಶಕಗಳಿಂದ ಜಾಗೃತಿ ಮತ್ತು ಮನಪರಿವರ್ತನಾ ಕಾರ್ಯಕ್ರಮವನ್ನು ಏರ್ಪಡಿಸುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸ್ವಸ್ಥ ಸಮಾಜ ನಿರ್ಮಾಣದ ಆಶಯದೊಂದಿಗೆ ಹುಟ್ಟಿದ ಸಂಸ್ಥೆಯಾಗಿದೆ. ದ.ಕ. ಜಿಲ್ಲೆಯ ಬೆಳ್ತಂಗಡಿಯಲ್ಲಿ ಆರಂಭಗೊಂಡು ಇದೀಗ ರಾಜ್ಯಮಟ್ಟದಲ್ಲಿಯೇ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತನ್ನದೇ ಆದ ಜಿಲ್ಲಾ ಶಾಖೆಗಳನ್ನು ಹೊಂದಿದ್ದು ಸಮಾಜದ ಗಣ್ಯರ ಮೇಲ್ವಿಚಾರಣೆಯಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಕೆಲಸ ನಿರ್ವಹಿಸುತ್ತಿದೆ.

96,000ಕ್ಕೂ ಮಿಕ್ಕಿದ ವ್ಯಸನಿಗಳಿಗೆ ಮನಪರಿವರ್ತನೆ

ಪ್ರತೀ ವರ್ಷ ಕನಿಷ್ಠ 150 ಮದ್ಯವರ್ಜನ ಶಿಬಿರಗಳನ್ನು ತಲಾ 8 ದಿನಗಳ ಕಾಲ ನಡೆಸಿ ಹತ್ತು ಸಾವಿರಕ್ಕೂ ಮಿಕ್ಕಿದ ವ್ಯಸನಿಗಳಿಗೆ ಚಟದಿಂದ ಮುಕ್ತಿಹೊಂದಲು ಪ್ರೇರಣೆ, ಚಿಕಿತ್ಸೆ, ಸಲಹೆ ನೀಡುತ್ತಿದೆ. ಇದುವರೆಗೆ 1408 ಮದ್ಯವರ್ಜನ ಶಿಬಿರಗಳ ಮೂಲಕ 96,000ಕ್ಕೂ ಮಿಕ್ಕಿದ ವ್ಯಸನಿಗಳಿಗೆ ಮನಪರಿವರ್ತನೆ ಮಾಡಲಾಗಿದೆ.

ಬೀದಿ ನಾಟಕಗಳ ಮೂಲಕ ಜಾಗೃತಿ:

ಗ್ರಾಮ ಸಮೀಕ್ಷೆ, ಹಕ್ಕೊತ್ತಾಯ ಮಂಡನೆ, ಧಾರ್ಮಿಕ ಕಾರ್ಯಕ್ರಮಗಳು, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಗ್ರಾಮ ಸ್ವಾಸ್ಥ್ಯ ಕಾರ್ಯಕ್ರಮ, ಜಾಗೃತಿ ಸಮಾವೇಶಗಳು, ಮಾದಕ ವಸ್ತು ವಿರೋಧಿ ದಿನಾಚರಣೆಗಳು, ಪಾನಮುಕ್ತರ ಅಭಿನಂದನಾ ಕಾರ್ಯಕ್ರಮಗಳು, ಬೀದಿ ನಾಟಕ, ಕಿರುಚಿತ್ರಗಳ ಪ್ರದರ್ಶನ, ಜನಪ್ರತಿನಿಧಿಗಳೊಂದಿಗೆ ಸಭೆ,  ಹೀಗೆ ವಿಶೇಷ ವಿಭಿನ್ನ ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗದ ಜನರನ್ನು ವ್ಯಸನದಿಂದ ಮುಕ್ತಿಹೊಂದಲು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರಲಾಗುತ್ತಿದೆ.

ಪ್ರಸ್ತುತ ಮದ್ಯವರ್ಜನ ಶಿಬಿರಗಳಿಗೆ ಮಹಿಳೆಯರೇ ಸ್ವಯಂ ಸೇವಕರಾಗಿ ಮುಂದೆ ಬಂದು ವ್ಯಸನಿಗಳನ್ನು ಶಿಬಿರಕ್ಕೆ ಸೇರಿಸುತ್ತಿದ್ದಾರೆ. ವೇದಿಕೆಯ ಕಾರ್ಯಚಟುವಟಿಕೆಗಳನ್ನು ಗಮನಿಸಿದ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ವೇದಿಕೆಯೊಂದಿಗೆ ಸಹಕರಿಸುತ್ತಿದ್ದಾರೆ.

Follow Us:
Download App:
  • android
  • ios