ಶೃಂಗೇರಿ ವಿದ್ಯಾರ್ಥಿನಿ ಗ್ಯಾಂಗ್ ರೇಪ್, ಕೊಲೆ : ದೋಷಿಗಳಿಗೆ ಗಲ್ಲು

ಚಿಕ್ಕಮಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಲಾಗಿದೆ. 

Chikkamagaluru sessions court orders to hang Rape and murder convicts of Sringeri

ಚಿಕ್ಕಮಗಳೂರು [ಜ.09] : ದೇಶದಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ಸಮೀಪಿಸುತ್ತಿರುವ ಬೆನ್ನಲ್ಲೇ, ಮಲೆನಾಡನ್ನೇ ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣವೊಂದರ  ಬಗ್ಗೆ ಇಲ್ಲಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಇಂದು ದೋಷಿಗಳಿಗೆ ಗಲ್ಲು ಶಿಕ್ಷೆ ಪ್ರಕಟಿಸಿದೆ.

ಶೃಂಗೇರಿಯ ಮೆಣಸೆ ಗ್ರಾಮದಲ್ಲಿ ವಿದ್ಯಾರ್ಥಿನಿ ಮೇಲೆ 2016ರ ಫೆಬ್ರವರಿ 16 ರಂದು ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸಂತೋಷ್, ಪ್ರದೀಪ್ ಎಂಬ ಇಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. 

ಜಿಲ್ಲಾ ಸತ್ರ ನ್ಯಾಯಾಲಯ ಪ್ರಕರಣ ಸಂಬಂಧ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದು, ಇಂದು ಪ್ರಕಟಿಸಿದೆ. ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಮಹತ್ವದ ತೀರ್ಪು ನೀಡಿದ್ದಾರೆ.

 ನಾಲ್ಕು ವರ್ಷಗಳ ಹಿಂದೆ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ವಿಚಾರಣೆ ಬಳಿಕ ಇದೀಗ ಮಹತ್ವದ ತೀರ್ಪು ಹೊರಬಿದ್ದಿದೆ.

ಸೋನಿಯಾರಂತೆ ದೋಷಿಗಳನ್ನು ಕ್ಷಮಿಸಿ: ನಿರ್ಭಯಾ ತಾಯಿಗೆ ವಕೀಲೆಯ ಸಲಹೆ...

ಅತ್ಯಾಚಾರಾ ಎಸಗಿದ್ದಕ್ಕೆ 25 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 25 ಸಾವಿರ ರು. ದಂಡ ವಿಧಿಸಲಾಗಿದೆ. ಸಾಕ್ಷ್ಯ ನಾಶಕ್ಕಾಗಿ 7 ವರ್ಷ ಕಠಿಣ ಶಿಕ್ಷೆ, 5 ಸಾವಿರ ದಂಡ ವಿಧಿಸಲಾಗಿದೆ.  ಆಕೆಯ ಆಭರಣಗಳನ್ನು ಕೊಂಡೊಯ್ದಿದ್ದಕ್ಕೆ 6 ತಿಂಗಳ ಕಠಿಣ ಶಿಕ್ಷೆ ಹಾಗೂ 1 ಸಾವಿರ ರು. ದಂಡ ವಿಧಿಸಲಾಗಿದೆ. ಇನ್ನು ಕೊಲೆ ಪ್ರಕರಣ ಸಂಬಂಧ ಮರಣ ದಂಡನೆ ವಿಧಿಸಲಾಗಿದೆ. 

ಫೆ.1ರಂದೂ ಗಲ್ಲು ಶಿಕ್ಷೆ ಅನುಮಾನ, 3 ದೋಷಿಗಳ ಮುಂದಿವೆ ಇನ್ನೂ ಹಲವು ಅವಕಾಶ!...

ಕಾಲೇಜು ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಅಡ್ಡಗಟ್ಟಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ ಬಳಿಕ ಶವವನ್ನು ಪಾಳು ಬಾವಿಗೆ ಎಸೆದಿದ್ದರು.

ಸದ್ಯ ದೇಶದಲ್ಲಿ 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಸುಪ್ರೀಂಕೋರ್ಟ್ ಪ್ರಕಟಿಸಿದೆ. ಆದರೆ ವಿವಿಧ ಕಾರಣಗಳಿಂದ ಗಲ್ಲು ಪ್ರಕ್ರಿಯೆ ಮುಂದೆ ಹೋಗುತ್ತಿದ್ದು, ಫೆಬ್ರವರಿಯಲ್ಲಿ ಬಹುತೇಕ ಫಿಕ್ಸ್ ಆದಂತಾಗಿದೆ.

Latest Videos
Follow Us:
Download App:
  • android
  • ios