Asianet Suvarna News Asianet Suvarna News

ಶ್ರೀರಂಗಪಟ್ಟಣ ದಸರಾ, ಸಂಸದೆ ಸುಮಲತಾ ಸೇರಿ ಜನಪ್ರತಿನಿಧಿಗಳು ಗೈರು

ಮಂಡ್ಯದ ಶ್ರೀರಂಗಪಟ್ಟಣ ದಸರಾಗೆ ಜನಪ್ರತಿನಿಧಿಗಳು ಗೈರಾಗಿದ್ದು ಇದು ಜನರ ಆಕ್ರೊಶಕ್ಕೆ ಕಾರಣವಾಯಿತು. ಸಂಭ್ರಮದಿಂದ ನಡೆದ ದಸರಾ ಆಚರಣೆಗೆ ಸಂಸದೆ ಸುಮಲತಾ ಸೇರಿದಂತೆ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಗೈರಾಗಿದ್ದರು.

Dasara Celebrations in mandya politicians including mp sumalath were absent
Author
Bangalore, First Published Oct 4, 2019, 3:14 PM IST

ಮಂಡ್ಯ(ಅ.04): ಶ್ರೀರಂಗಪಟ್ಟಣ ದಸರಾಗೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗುರುವಾರ ವಿದ್ಯುಕ್ತ ಚಾಲನೆ ನೀಡಿದರು.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಿರಂಗೂರು ವೃತ್ತದ ಬನ್ನಿ ಮಂಟಪದ ಬಳಿ ವೇದಿಕೆಯನ್ನು ನಿರ್ಮಿಸಲಾಗಿತ್ತು. ಸಂಜೆ 4 ಗಂಟೆಗೆ ಅಭಿಜಿನ್‌ ಮುಹೂರ್ತ ಹಾಗೂ ಮಕರ ಲಗ್ನದಲ್ಲಿ ಅಭಿಮನ್ಯು ಹೊತ್ತಿದ್ದ ಅಂಬಾರಿಯೊಳಗಿದ್ದ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಬಳಿಕ ಜಾನಪದ ಕಲಾತಂಡಗಳೊಂದಿಗೆ ದಸರಾ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮಂಡ್ಯ: ಅಪ್ರಾಪ್ತೆಗೆ ತಾಳಿ ಕಟ್ಟಿದ ವಿವಾಹಿತ

ಇದಕ್ಕೂ ಮುನ್ನ ವೇದ ಭ್ರಹ್ಮ ಡಾ.ಭಾನುಪ್ರಕಾಶ್‌ ಶರ್ಮ ನೇತೃತ್ವದ ತಂಡ ಗಣಪತಿ ಪೂಜೆ, ಪುಣ್ಯಾಹಮ, ಬನ್ನಿಪೂಜೆ, ಶ್ರೀಚಾಮುಂಡೇಶ್ವರಿ ಅಷ್ಟೋತ್ತರ ಪೂಜೆ, ಕುಂಕುಮಾರ್ಚನೆ, ಬಲಿಪ್ರದಾನ, ನಂದಿ ಕಂಬ ಪೂಜೆ ನೆರವೇರಿಸಿದರು. ಚಾಮುಂಡೇಶ್ವರಿ ವಿಗ್ರಹವಿದ್ದ ಅಂಬಾರಿಯನ್ನು ಹೊತ್ತು ಅಭಿಮನ್ಯು ಜೊತೆ ವಿಜಯಾ ಹಾಗೂ ಕಾವೇರಿ ಸಾಗುವ ಮೂಲಕ ಸಾಥ್‌ ನೀಡಿದವು.

ಹಾರ, ತುರಾಯಿಯೊಂದಿಗೆ ಬಂದ ಬಿಜೆಪಿ ಕಾರ್ಯಕರ್ತರು ಅಳ್ತಾ ಹೋದ್ರು..!

ಶ್ರೀರಂಗನಾಥಸ್ವಾಮಿ, ದೇವಾಲಯ, ಶ್ರೀ ನಿಮಿಷಾಂಬ ದೇವಾಲಯ, ಆದಿಚುಂಚನಗಿರಿಯ ಶ್ರೀ ಕಾಲಭೈರವೇಶ್ವರ ದೇವಾಲಯ, ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ದೇಗುಲ, ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ದೇಗುಲ, ಚೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತೋಟಗಾರಿಕೆ ಇಲಾಖೆಯ ಕಾವೇರಿ ಕೂಗು, ಸ್ವಚ್ಛತೆ ಕುರಿತ ನಿರ್ಮಿಸಲಾಗಿದ್ದ ಸ್ತಬ್ಧ ಚಿತ್ರಗಳು ವಿಶೇಷವಾಗಿ ಗಮನಸೆಳೆದವು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌ .ಅಶೋಕ್‌, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌, ಜಿಪಂ ಸಿಇಒ ಯಾಲಕ್ಕೀಗೌಡ, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಬನ್ನಿಮಂಟಪದಿಂದ ಆರಂಭಗೊಂಡ ದಸರಾ ಮೆರವಣಿಗೆ ಕಿರಂಗೂರು ಗ್ರಾಮದ ಮೂಲಕ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಬುರಾಯನಕೊಪ್ಪಲು ಮಾರ್ಗವಾಗಿ ಶ್ರೀರಂಗಪಟ್ಟಣದ ಕುವೆಂಪು ವೃತ್ತಕ್ಕೆ ಆಗಮಿಸಿ ಖಾಸಗಿ ಬಸ್‌ ನಿಲ್ದಾಣದಿಂದ ಜಾಮಿಯಾ ಮಸೀದಿ ಪ್ರವೇಶಿಸಿತು. ನಂತರ ಪುರಸಭೆ ವೃತ್ತದ ಮೂಲಕ ಪಟ್ಟಣದ ರಾಜಬೀದಿಯನ್ನು ಪ್ರವೇಶಿಸಿ ಶ್ರೀರಂಗನಾಥ ದೇವಾಲಯದಲ್ಲಿ ಮೆರಣಿಗೆ ಅಂತ್ಯಗೊಂಡಿತು. ಜನರ ವೀಕ್ಷಣೆಗೆ ಅನುಕೂಲವಾಗುವಂತೆ ಜಾಮೀಯಾ ಮಸೀದಿ, ತಾಲೂಕು ಕಚೇರಿ ಮುಂಭಾಗ ವೇದಿಕೆ ನಿರ್ಮಿಸಲಾಗಿತ್ತು. ಜನರು ಕುಳಿತು ಆಕರ್ಷಕ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಂಡರು.

ರೇವಣ್ಣ ಕರ್ನಾಟಕದ ಕುರಿಯನ್: ಪುಟ್ಟರಾಜು

ಸಂಸದೆ, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಗೈರು

ಪಾರಂಪರಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದಲ್ಲಿ ಜಿಲ್ಲೆಯ ಸಂಸದೆ ಎ.ಸುಮಲತಾ , ಶಾಸಕ ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಸ್ಥಳೀಯ ಜಿಪಂ ಸದಸ್ಯರು, ತಾ.ಪಂ ಸದಸ್ಯರು ಹಾಗೂ ಪುರಸಭೆ ಸದಸ್ಯರು ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಸ್ಥಳೀಯರ ಆಕ್ಷೇಪ:

ಸ್ಥಳೀಯ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅವರನ್ನು ಕಡೆಗಣಿಸುವ ಮೂಲಕ ಸ್ಥಳೀಯ ಜನಪ್ರತಿನಿಧಿಗಳ ಗೈರು ಹಾಜರಿಯಲ್ಲಿ ದಸರಾ ಆಚರಣೆ ಮಾಡುತ್ತಿರುವುದರಿಂದ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಾಪಂ ಅಧ್ಯಕ್ಷೆ ಮಂಜುಳಾ ಬಸವರಾಜು, ತಾಪಂ ಸದಸ್ಯ ವಿಜಯಲಕ್ಷ್ಮಿ ಮಾತ್ರ ಭಾಗವಹಿಸಿದ್ದರು. ಕಳೆದ ಬಾರಿ ಕಲಾತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀರಂಗಪಟ್ಟಣ ದಸರಾ ಆಚರಣೆಗೆ ಮೆರಗು ತಂದಿತ್ತು. ಆದರೆ, ಈ ಬಾರಿ ಸ್ಥಳೀಯ ಕೇವಲ ಬೆರಳೆಣಿಕೆಯಷ್ಟುಸ್ಥಳೀಯ ಕಲಾವಿದರು ಮಾತ್ರ ಭಾಗಿಯಾಗಿದ್ದರು. ಆದರೆ ಈ ಬಾರಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಿದವು.

ವೈಭವದ ಮೆರವಣಿಗೆ:

ದಸರಾ ಮೆರವಣಿಗೆಯಲ್ಲಿ ಸೋಮನ ಕುಣಿತ, ಜಾನಪದ ಕಂಸಾಳೆ, ಯಕ್ಷಗಾನ, ಕೋಲಾಟ, ಕರಗದ ಕೋಲಾಟ, ಕಂಸಾಳೆ, ಡೊಳ್ಳು ಕುಣಿತ, ಪೂಜಾ ಕುಣಿತ, ನಂದಿ ಧ್ವಜ, ಒನಕೆ ಪ್ರದರ್ಶನ, ಗಾರುಡಿ ಗೊಂಬೆ, ಗೊರವನ ಕುಣಿತ, ಕೊಂಬು ಕಹಳೆ ತಂಡ, ತಮಟೆ, ನಗಾರಿ, ದೊಣ್ಣೆ ವರಸೆ, ಡೊಳ್ಳು ಕುಣಿತ, ಕೀಲುಕುದುರೆ, ಯಕ್ಷಗಾನ, ಶ್ರೀ ಶಬರಿ ಚಂಡೆ ಬಳಗದಿಂದ ಚಂಡೆ, ಬೀಸು ಕಂಸಾಳೆ, ಮಿರರ್‌ ಮ್ಯಾನ್‌, ವೀರಗಾಸೆ, ಗಾರುಡಿಗೊಂಬೆ, ದಾಂಡ್ಯ ನೃತ್ಯ, ಪಾಳೆಗಾರೆ ಮತ್ತು ಹುಲಿವೇಷ, ಮರಗಾಲು ಕುಣಿತ, ದೊಣ್ಣೆ ವರಸೆ, ನಾಸಿಕ್‌ ಬ್ಯಾಂಡ್‌, ಕಾಡುಜನರ ಕೊರವಂಜಿ ಕುಣಿತ ಸೇರಿದಂತೆ ಹಲವಾರು ಜಾನಪದ ಕಲಾತಂಡಗಳ ಮೆರವಣಿಗೆ ಪರಂಪರೆ ನೆನಪಿನೊಂದಿಗೆ ಸಂಸ್ಕೃತಿಯನ್ನು ಮುನ್ನಡೆಸುತ್ತಿರುವಂತೆ ಕಂಡುಬಂದವು.

Follow Us:
Download App:
  • android
  • ios