Asianet Suvarna News Asianet Suvarna News

ರಾಯಚೂರು: ಆರ್‌ಟಿಪಿಎಸ್‌ನ ಐದು ಘಟಕಗಳು ಸ್ಥಗಿತ

ಆರ್‌ಟಿಪಿಎಸ್‌ನ ಐದು ಘಟಕಗಳು ಕಾರ್ಯಸ್ಥಗಿತ| ಯುನಿಟ್ 3, 5 ,8 ಮಾತ್ರ ಕಾರ್ಯಾರಂಭ ಮಾಡುತ್ತಿವೆ| ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ತಗ್ಗಿದೆ| ಬೇಡಿಕೆ ಇಳಿಕೆ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಇಳಿಕೆ ಮಾಡಲಾಗಿದೆ| 1720 ಮೆಗಾ ವ್ಯಾಟ್ ಸಾಮರ್ಥ್ಯದ ಕೇಂದ್ರದಿಂದ ಈಗ ಕೇವಲ 399 ಮೆ.ವ್ಯಾಟ್ ಮಾತ್ರ ಉತ್ಪಾದನೆ ಮಾಡಲಾಗುತ್ತಿದೆ| 

Five Units of RTPS Shut Down in Raichur
Author
Bengaluru, First Published Oct 7, 2019, 12:32 PM IST

ರಾಯಚೂರು(ಅ.7): ಶಕ್ತಿನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರ(ಆರ್‌ಟಿಪಿಎಸ್‌) ನ ಐದು ಘಟಕಗಳು ಕಾರ್ಯಸ್ಥಗಿತಗೊಳಿಸಿವೆ. ಸದ್ಯ ವಿದ್ಯುತ್ ಕೇಂದ್ರದಲ್ಲಿ ಒಟ್ಟು ಎಂಟು ಘಟಕಗಳಲ್ಲಿದ್ದು ಅದರಲ್ಲಿ ಐದು ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಯುನಿಟ್ 3, 5 ,8 ಮಾತ್ರ ಕಾರ್ಯಾರಂಭ ಮಾಡುತ್ತಿವೆ. ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ವಿದ್ಯುತ್ ಬೇಡಿಕೆ ತಗ್ಗಿದೆ. ಬೇಡಿಕೆ ಇಳಿಕೆ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಇಳಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. 1720 ಮೆಗಾ ವ್ಯಾಟ್ ಸಾಮರ್ಥ್ಯದ ಕೇಂದ್ರದಿಂದ ಈಗ ಕೇವಲ 399 ಮೆ.ವ್ಯಾಟ್ ಮಾತ್ರ ಉತ್ಪಾದನೆ ಮಾಡಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

6504 ಮೆ.ವ್ಯಾ ರಾಜ್ಯದ ವಿದ್ಯುತ್ ಬೇಡಿಕೆ ಇದ್ದು, ಎಲ್ಲಾ ಮೂಲಗಳಿಂದ 6503 ಮೆ.ವ್ಯಾಟ್ ಉತ್ಪಾದನೆ ಮಾಡಲಾಗುತ್ತಿದೆ. ಐದು ಘಟಕಗಳನ್ನು ಸ್ಥಗಿತಗೊಳಿಸಿದ್ದರಿಂದ ಜಲ ವಿದ್ಯುತ್ ಸ್ಥಾವರಗಳಿಂದ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 
 

Follow Us:
Download App:
  • android
  • ios