Asianet Suvarna News Asianet Suvarna News

ರಾಜ್ಯದ ಮತದಾರರ ಮರ್ಯಾದೆ ದೇಶದಲ್ಲಿ ಉಳಿಸಬೇಕಿದೆ ಎಂದ ಮಾಜಿ ಸಚಿವ

ಜನ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸುವ ವಿಶ್ವಾಸವಿದೆ| ಉಪಚುನಾವಣೆ ಅಖಾಡದಲ್ಲಿ ಮಾಜಿ ಸಚಿವ ತನ್ವೀರ್ ಸೇಠ್ ಕೊರತೆ ಕಾಣುತ್ತಿದೆ| ಅವರ ಸಲಹೆ ಪಡೆದು ಬೆಂಬಲಿಗರೊಂದಿಗೆ ಸಾಮೂಹಿಕ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದೇನೆ ಎಂದ ಮಾಜಿ ಸಚಿವ ಯು.ಟಿ. ಖಾದರ್|

Former Minister U T Khadar Talked About ByElection
Author
Bengaluru, First Published Nov 21, 2019, 10:57 AM IST

ಮೈಸೂರು(ನ.21): ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆಯನ್ನು ಇಡೀ ದೇಶವೇ ನೋಡುತ್ತಿದೆ. ಸುಪ್ರೀಂ  ಕೋರ್ಟ್ 17 ಜನರನ್ನ ನೀವು ಶಾಸಕರಾಗಲು ಅರ್ಹರಲ್ಲ ಅಂತ ಹೇಳಿ ಜನರ ಮುಂದೆ ಕಳುಹಿಸಿದ್ದಾರೆ. ಇದೀಗ ರಾಜ್ಯದ ಮತದಾರರ ಮರ್ಯಾದೆ ದೇಶದಲ್ಲಿ ಉಳಿಸಬೇಕಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ. 

ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಉಪಚುನಾವಣೆ ಅಖಾಡದಲ್ಲಿ ಮಾಜಿ ಸಚಿವ ತನ್ವೀರ್ ಸೇಠ್ ಕೊರತೆ ಕಾಣುತ್ತಿದೆ. ಆದ್ರು ಅವರ ಸಲಹೆ ಪಡೆದು ಬೆಂಬಲಿಗರೊಂದಿಗೆ ಸಾಮೂಹಿಕ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ. 
ಮಾಜಿ ಸಚಿವ ತನ್ವೀರ್ ಸೇಠ್ ಮೇಲೆ ಯುವಕನೊಬ್ಬ ಮಟನ್ ಕತ್ತರಿಸುವ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರ ಗಾಯಗೊಂಡಿರುವ ಶಾಸಕರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಕಾಂಗ್ರೆಸ್- ಜೆಡಿಎಸ್ ಸರ್ಕಾರದಲ್ಲಿ ಪತನಕ್ಕೆ ಎಲ್ಲ 17 ಜನ ಶಾಸಕರು ಕಾರಣವಾಗಿದ್ದರು ಎಂದು ಹೇಳಲಾಗುತ್ತಿದೆ. 17 ಜನ ಕಾಂಗ್ರೆಸ್- ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದರಿಂದ ಮೈತ್ರಿ ಸರ್ಕಾರ ಪತನಗೊಂಡಿತ್ತು. ಬಳಿಕ ಬಿ. ಎಸ್. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.
 

Follow Us:
Download App:
  • android
  • ios