ಏರ್ಪೋರ್ಟ್‌ ಬಳಿ 120 ಅಡಿ ಅತ್ತರಕ್ಕೆ ಕೆಂಪೇಗೌಡ ಪ್ರತಿಮೆ ನಿರ್ಮಾಣ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ 80 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. 

Kempegowda Statue To Built near Bangalore Airport

ಬೆಂಗಳೂರು (ಜ.09):  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ 80 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಮತ್ತು ಥೀಮ್‌ ಪಾರ್ಕ್ ನಿರ್ಮಾಣ ಸಂಬಂಧ ಶೀಘ್ರದಲ್ಲಿಯೇ ಅಂತಿಮ ರೂಪರೇಷೆ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ಮೇರೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ, ಫಿಲ್ಮ್‌ಸಿಟಿ ನಿರ್ಮಾಣ, ರೋರಿಚ್‌ ಎಸ್ಟೇಟ್‌ ಅಭಿವೃದ್ಧಿ ಕುರಿತು ಬುಧವಾರ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅಶ್ವತ್ಥನಾರಾಯಣ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕೆಂಪೇಗೌಡರ 46 ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸುವುದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಿಸುವ ಕುರಿತು ಚರ್ಚೆ ನಡೆದಿದೆ ಎಂದು ಹೇಳಿದರು.

ಕೆಂಪೇಗೌಡ ಏರ್‌ಪೋರ್ಟ್ ರಾಡಾರ್‌ನಿಂದ ವಾಯುಪಡೆ ವಿಮಾನಗಳ ಮೇಲೆ ಕಣ್ಗಾವಲು!.

80 ಅಡಿ ಎತ್ತರದ ಪ್ರತಿಮೆ ನಿರ್ಮಿಸಲು ನಿರ್ಧರಿಸಲಾಗಿದೆ. 40 ಅಡಿ ಅಡಿಪಾಯ, 80 ಅಡಿ ಪ್ರತಿಮೆ ಸ್ಥಾಪಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಕಂಚಿನ ಪ್ರತಿಮೆಯೇ ಅಥವಾ ಬೇರೆ ಪ್ರತಿಮೆಯೇ ಎನ್ನುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಸ್ಥಳದ ಬಗ್ಗೆಯೂ ಅಂತಿಮಗೊಂಡಿಲ್ಲ. ಮುಖ್ಯಮಂತ್ರಿ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. 20 ಎಕರೆ ಪ್ರದೇಶದಲ್ಲಿ ಥೀಮ್‌ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟಅಧಿಕಾರಿಗಳು, ಐಡೆಕ್‌ ಸಂಸ್ಥೆಯವರ ಜತೆ ಚರ್ಚೆ ನಡೆಸಲಾಗಿದೆ. ಯೋಜನೆಗಳ ರೂಪರೇಷೆ ಬಗ್ಗೆ ಚರ್ಚಿಸಲಾಗಿದೆ. ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ವಿವರಿಸಿದರು.

Latest Videos
Follow Us:
Download App:
  • android
  • ios