ವಿದ್ಯುತ್ ಬಿಲ್ ಪಾವತಿಗೆ ಅವಧಿ ವಿಸ್ತರಣೆ ಇಲ್ಲ..!
ವಿದ್ಯುತ್ ಗ್ರಾಹಕರು 3 ತಿಂಗಳ ಅವಧಿಗೆ ಬಿಲ್ ಪಾವತಿಸುವುದನ್ನು ಮುಂದೂಡುವ ಕುರಿತು ಬಗ್ಗೆ ಕೇಂದ್ರ ಇಂಧನ ಸಚಿವಾಲಯದಿಂದ ರಾಜ್ಯ ಸರ್ಕಾರ ಅಥವಾ ವಿದ್ಯುತ್ ಸರಬರಾಜು ಕಂಪನಿಗಳಿಗೆ ಯಾವುದೇ ನಿರ್ದೇಶನಗಳಿಲ್ಲ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಪಾವತಿಗೆ ಮುಂದಾಗಬೇಕು ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ.
ಮಂಗಳೂರು(ಏ.05): ವಿದ್ಯುತ್ ಗ್ರಾಹಕರು 3 ತಿಂಗಳ ಅವಧಿಗೆ ಬಿಲ್ ಪಾವತಿಸುವುದನ್ನು ಮುಂದೂಡುವ ಕುರಿತು ಬಗ್ಗೆ ಕೇಂದ್ರ ಇಂಧನ ಸಚಿವಾಲಯದಿಂದ ರಾಜ್ಯ ಸರ್ಕಾರ ಅಥವಾ ವಿದ್ಯುತ್ ಸರಬರಾಜು ಕಂಪನಿಗಳಿಗೆ ಯಾವುದೇ ನಿರ್ದೇಶನಗಳಿಲ್ಲ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಪಾವತಿಗೆ ಮುಂದಾಗಬೇಕು ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ಎಲ್ಲ ವಿದ್ಯುತ್ ಗ್ರಾಹಕರಿಗೆ ಸರಾಸರಿ ಬಿಲ್ ಅಥವಾ ಹಿಂದಿನ ತಿಂಗಳ ಬಿಲ್ ನೀಡುವ ವ್ಯವಸ್ಥೆ ಮಾಡಲಾಗುವುದು. ಹಾಲಿ ತಂತ್ರಾಂಶದಲ್ಲಿರುವ ಗ್ರಾಹಕರಿಗೆ ವಿದ್ಯುತ್ ಬಿಲ್‌ನ್ನು ಇ-ಮೇಲ್ / ಎಸ್‌ಎಂಎಸ್ / ವಾಟ್ಸಾಪ್ ಮುಖಾಂತರ ಕಳುಹಿಸಲಾಗುವುದು.
ಹಚ್ಚೋಣ ಏಕತಾ ದೀಪ: ಇಂದು ರಾತ್ರಿ 9ರಿಂದ 9 ನಿಮಿಷಗಳ ಕಾಲ ಬೆಳಕಿನ ಅಭಿಯಾನ!
ಗ್ರಾಹಕರು ಸಹಾಯವಾಣಿ 1912ಕ್ಕೆ ಕರೆಮಾಡಿ ಅವರ ಅಕೌಂಟ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದಲ್ಲಿ ಬಿಲ್ ವಿವರಗಳನ್ನು ಇ-ಮೇಲ್ / ಎಸ್‌ಎಂಎಸ್ / ವಾಟ್ಸಾಪ್ ಮುಖಾಂತರ ಕಳುಹಿಸಲಾಗುವುದು. ಗ್ರಾಹಕರು ಮೆಸ್ಕಾಂನ ಜಾಲತಾಣ(http://www.mesco.in/ )ನಲ್ಲಿ ನೋಂದಾಯಿಸಿಕೊಂಡು ವಿದ್ಯುತ್ ಬಿಲ್ ವಿವರಗಳನ್ನು ಪಡೆಯಬಹುದು.
ಗ್ರಾಹಕರು ಆನ್‌ಲೈನ್/ಡಿಜಿಟಲ್ ವಿಧಾನಗಳ ಮೂಲಕ ವಿದ್ಯುತ್ ಬಿಲ್ ಪಾವತಿಸಲು ವಿನಂತಿಸಲಾಗಿದೆ. ಮೇ 1ರಿಂದ ಯಥಾಪ್ರಕಾರ ಮಾಪಕ ಓದುವಿಕೆ, ಬಿಲ್ ಹಂಚುವಿಕೆ ಹಾಗೂ ಬಿಲ್ ಸ್ವೀಕೃತಿ ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಮತ್ತು ವಾಸ್ತವಿಕ ಬಳಕೆಯಲ್ಲಿ ಹಾಗೂ ಸರಾಸರಿ ಬಳಕೆಯಲ್ಲಿ ತಪ್ಪು / ವ್ಯತ್ಯಾಸ ಕಂಡುಬಂದಲ್ಲಿ ಮುಂದಿನ ಮಾಹೆಯ ಬಿಲ್‌ನಲ್ಲಿ ಸರಿಪಡಿಸಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.