ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸೋರಿಗೆ ಗುಂಡಿಕ್ಕಿ ಎಂದ BJP ಶಾಸಕ
ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರನ್ನು ಪೊಲೀಸರು ಗುಂಡು ಹಾರಿಸಿ ಕೊಲ್ಲಬೇಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು(ಏ.21): ಪಾದರಾಯಪುರದಲ್ಲಿ ಕೊರೋನಾ ವಾರಿಯರ್ಸ್‌ಗಳಾದ ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ‘ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರನ್ನು ಪೊಲೀಸರು ಗುಂಡು ಹಾರಿಸಿ ಕೊಲ್ಲಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಪ್ರಕರಣ ಭಾನುವಾರ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದ ಅವರು, ತ್ಯಾಗಮಯಿಗಳ ಮೇಲೆ ದಾಳಿ ಮಾಡುವವರು ಯಾರೇ ಆಗಲಿ, ಅವನನ್ನು ಗುಂಡಿಟ್ಟು ಕೊಂದರೂ ತಪ್ಪಿಲ್ಲ.
ಹೋಂ ಕ್ವಾರಂಟೈನ್‌ಗಳ ಮೇಲೆ ನಿಗಾ ಇಡುವುದಕ್ಕೆ App; ಬೆಳ್ತಂಗಡಿಯಲ್ಲಿ ಮೊದಲ ಪ್ರಯೋಗ
ಇಂಥ ಸಂದರ್ಭಗಳಲ್ಲಿ ಪೊಲೀಸರು ಅವರ ಶಕ್ತಿಯನ್ನು ಉಪಯೋಗಿಸಲು ಅಧಿಕಾರ ನೀಡಿ ಗೃಹಮಂತ್ರಿಗಳೇ ಎಂದಿದ್ದರು. ಶಾಸಕರ ಈ ಹೇಳಿಕೆ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಸೋಮವಾರ ಮತ್ತೆ ಫೇಸ್ಬುಕ್‌ನಲ್ಲಿ ಹರೀಶ್ ಪೂಂಜಾ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.