Asianet Suvarna News Asianet Suvarna News

ಮಹಾರಾಷ್ಟ್ರದಲ್ಲಿ ಬಹುಮತವಿದ್ದರೂ ಸರ್ಕಾರ ರಚಿಸಿಲು ಒದ್ದಾಡುತ್ತಿದೆ ಬಿಜೆಪಿ

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಹಗ್ಗ ಜಗ್ಗಾಟಗಳು ಇನ್ನೂ ಕೂಡ ಮುಕ್ತಾಯವಾಗಿಲ್ಲ. ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶಿವಸೆನಾ ಮುಖಂಡ ಉದ್ದವ್ ಠಾಕ್ರೆ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸುವ ಸಾಧ್ಯತೆ ಇದೆ. 

Amit Shah Likely to Meet Uddhav Thackeray on october 30
Author
Bengaluru, First Published Oct 28, 2019, 11:14 AM IST

ನಾಗಪುರ [ಅ.28]: ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಪ್ರಕಟವಾದರೂ ಸರ್ಕಾರ ರಚನೆಯ ಹಗ್ಗಜಗ್ಗಾಟ ಮಾತ್ರ ಇನ್ನೂ ಮುಕ್ತಾಯವಾಗಿಲ್ಲ. 

ಸರ್ಕಾರ ರಚನೆ ವಿಚಾರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಶಾ ಅಕ್ಟೋಬರ್ 30 ರಂದು ಮುಂಬೈಗೆ ತೆರಳಿ ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಭೇಟಿ ಮಾಡುವ ಸಾಧ್ಯತೆ ಇದ್ದು, ಚರ್ಚೆ ನಡೆಸಲಿದ್ದಾರೆ. 

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಶಿವಸೇನೆ ಪಾತ್ರ ಬಹುಮುಖ್ಯವಾಗಿದೆ. ಇನ್ನು ಶಿವಸೇನೆಯು ಪಕ್ಷದ ಮುಖಂಡ ಉದ್ದವ್ ಠಾಕ್ರೆ ಪುತ್ರರಾದ ಆದಿತ್ಯ ಠಾಕ್ರೆ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಬೇಡಿಕೆ  ಇಟ್ಟಿದೆ.   

50-50ಕ್ಕೆ ಲಿಖಿತ ಭರವಸೆ ಕೊಡಿ: ಅಪನಂಬಿಕೆಯ ಹಗ್ಗದ ಮೇಲೆ ಬಿಜೆಪಿ-ಶಿವಸೇನೆ ಜೋಡಿ!...

ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಅಮಿತ್ ಶಾ ಉದ್ದವ್ ಠಾಕ್ರೆ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ 105 ಸ್ಥಾನಗಳನ್ನು ಪಡೆದುಕೊಂಡಿದ್ದು, ಶಿವಸೇನಾ 56 ಸ್ಥಾನ ಪಡೆದುಕೊಂಡಿದೆ. ಆದರೆ ಶಿವಸೇನಾ ಸರ್ಕಾರ ರಚನೆಯಲ್ಲಿ ಹೆಚ್ಚಿನ ಬೇಡಿಕೆಯನ್ನು ಬಿಜೆಪಿ ಮುಂದಿಟ್ಟಿದೆ. 

Follow Us:
Download App:
  • android
  • ios