news
By Suvarna Web Desk | 06:12 PM August 12, 2017
'ಅಬ್ ಕಿ ಬಾರ್ ಭಾಜಪ ಸರ್ಕಾರ್'; ಕರ್ನಾಟಕಕ್ಕೆ ಅಮಿತ್ ಶಾ ಮಂತ್ರ

Highlights

ಮುಂಬರುವ ಚುನವಣಾ ಹಿನ್ನಲೆಯಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ 3 ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ರಾಜಧಾನಿಗೆ ಆಗಮಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಅವರಿಗೆ ಹುರಿದುಂಬಿಸಿದ್ದಾರೆ.

ನವದೆಹಲಿ (ಆ.12): ಮುಂಬರುವ ಚುನವಣಾ ಹಿನ್ನಲೆಯಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ 3 ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ರಾಜಧಾನಿಗೆ ಆಗಮಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಅವರಿಗೆ ಹುರಿದುಂಬಿಸಿದ್ದಾರೆ.

ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾರನ್ನು ನೂರಾರು ಕಾರ್ಯಕರ್ತರು ಆತ್ಮೀಯವಾಗಿ ಬರ ಮಾಡಿಕೊಂಡರು. “ನಾನು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನನ್ನು ಭೇಟಿ ಮಾಡಲು ಬಯಸುತ್ತೇನೆ. ಬಿಎಸ್’ವೈ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಮುಂದಿನ ದಿನಗಳಲ್ಲಿ  ಅಬ್ ಕಿ ಬಾರ್ ಬಾಜಪ ಸರ್ಕಾರ್, ಭಾರತ್ ಮಾತಾ ಕಿ ಜೈ ಎಂದು ಹೇಳುವ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಪಕ್ಷ ನಡೆದುಕೊಂಡ ರೀತಿಯ ಬಗ್ಗೆ ನಮಗೆ ಹೆಮ್ಮೆಯಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದೆ. ಕರ್ನಾಟಕದ ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತಾರೆ ಎನ್ನುವ ನಂಬಿಕೆ ನಮಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ನಿರ್ಮಾಣ ಮಾಡುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಬಿಎಸ್’ವೈ ಹಾಗೂ ಈಶ್ವರಪ್ಪ ನಡುವಿನ ಬ್ರಿಗೇಡ್ ಕಿತ್ತಾಟದ ಬಗ್ಗೆ ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಮಾತನಾಡಿ, ಇವೆಲ್ಲಾ ಈಗ ಹಳೆಯ ವಿಚಾರ. ಈಗ ಪಕ್ಷದ ನಾಯಕತ್ವ ಒಗ್ಗೂಡಿದೆ.  ಮಿಷನ್ 150 ಯೇ ನಮ್ಮೆಲ್ಲರ ಗುರಿ ಎಂದಿದ್ದಾರೆ.

Show Full Article


Recommended


bottom right ad