news
By Suvarna Web Desk | 05:08 PM January 12, 2018
ಸಿಎಂ, ದಿನೇಶ್ ಗುಂಡೂರಾವ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Highlights

ವಿಧಾನಸಭೆಯಲ್ಲಿ ನಮಗೆಲ್ಲಾ ವ್ಯಾಕರಣ ಪಾಠ ಹೇಳಿಕೊಡುವ ಸಿದ್ದರಾಮಯ್ಯ ಅವರಿಗೆ ಏಕವಚನ, ಬಹುವಚನದ ವ್ಯಾತ್ಯಾಸವೇ ಗೊತ್ತಿಲ್ಲ.

ಬೆಂಗಳೂರು(ಜ.12): ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ಉಗ್ರಗಾಮಿ ಸಂಘಟನೆ ಎಂದು ಕರೆದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿರುವುದಾಗಿ ಬಿಜೆಪಿ ವಕ್ತಾರ ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ನಮಗೆಲ್ಲಾ ವ್ಯಾಕರಣ ಪಾಠ ಹೇಳಿಕೊಡುವ ಸಿದ್ದರಾಮಯ್ಯ ಅವರಿಗೆ ಏಕವಚನ, ಬಹುವಚನದ ವ್ಯಾತ್ಯಾಸವೇ ಗೊತ್ತಿಲ್ಲ. ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ಉಗ್ರಗಾಮಿ ಸಂಘಟನೆ ಎಂದು ಕರೆದು ಅಪರಾಧ ಎಸಗಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ ಪ್ರಕಾರ ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ದೂರು ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

 

Show Full Article


Recommended


bottom right ad