Asianet Suvarna News Asianet Suvarna News

ಡಿಕೆ ಶಿವಕುಮಾರ್‌ಗೆ ಮತ್ತೆ ಆಘಾತ: ನ್ಯಾಯಾಂಗ ಬಂಧನ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಸಂಪಾದನೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್​ಗೆ ಕೋರ್ಟ್ ಮತ್ತೆ ಆಘಾತ ನೀಡಿದೆ. ಡಿಕೆಶಿ ತಿಹಾರ್ ಜೈಲು ವಾಸ ಮುಂದುವರಿದಿದೆ.

ED Court extends the judicial custody of Karnataka Congress leader DK Shivakumar till 15th October
Author
Bengaluru, First Published Oct 1, 2019, 3:04 PM IST

ನವದೆಹಲಿ, (ಅ.01): ಕರ್ನಾಟಕ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

"

 ಅವರಿಗೆ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ.)ದ ವಿಶೇಷ ಕೋರ್ಟ್​ ವಿಸ್ತರಿಸಿದೆ. ಅಲ್ಲದೆ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ನಿಗದಿಪಡಿಸಿದೆ. ಹೀಗಾಗಿ ಡಿಕೆಶಿ ಅಕ್ಟೋಬರ್ 15ರವರೆಗೆ ತಿಹಾರ್​ ಜೈಲಿನಲ್ಲೇ ಇರಬೇಕಾಗಿದೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮತ್ತೆ 14 ದಿನ ಡಿಕೆಶಿಗೆ ಜೈಲೇ ಗತಿ..!

ಇಂದು (ಮಂಗಳವಾರ) ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್​ಕುಮಾರ್ ಕುಹರ್​ ಅವರು ಡಿ.ಕೆ.ಶಿವಕುಮಾರ್​ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದರು.

ಇಡಿ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನಿಗಾಗಿ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿರುವುದನ್ನು ಇಲ್ಲಿ ಸ್ಮರಿಸಬಹದು.

ಅಕ್ಟೋಬರ್ 01ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

Follow Us:
Download App:
  • android
  • ios