Asianet Suvarna News Asianet Suvarna News

ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕೈ-ಕಮಲ ಸಾಮರಸ್ಯ

ದೇಶದ ಪಂಚರಾಜ್ಯಗಳಲ್ಲಿ ಚುನಾವಣೆ ನಡೆದಿದ್ದು ಕಾಂಗ್ರೆಸ್ ಭರ್ಜರಿ ಜಯ ಗಳಿಸಿ ಮೂರು ರಾಜ್ಯಗಳಲ್ಲಿ ಅಧಿಕಾರ ಸ್ವೀಕಾರ ಮಾಡಿದೆ. ಬದ್ಧವೈರಿಗಂತೆ ವರ್ತಿಸುವ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಮಧ್ಯ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಾಮರಸ್ಯವನ್ನು ತೋರಿಸಿದ್ದಾರೆ. 

In Rajasthan Leaders Keep Alive Politics on Harmony
Author
Bengaluru, First Published Dec 18, 2018, 12:36 PM IST

ಜೈಪುರ : ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಭದ್ರಕೋಟೆಗಳೇ ಕಾಂಗ್ರೆಸ್ ವಶವಾಗಿವೆ. ಛತ್ತೀಸ್ ಗಢ, ಮಧ್ಯ ಪ್ರದೇಶ, ರಾಜಸ್ಥಾನಗಳಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರ ಸ್ವೀಕಾರ ಮಾಡಿವೆ.

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಮುಖ್ಯಮಂತ್ರಿಯಾಗಿದ್ದು, ರಾಜಸ್ಥಾನದಲ್ಲಿ ಶೋಖ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಹಾಗೂ ಸಚಿನ್ ಪೈಲಟ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎಂದಿಗೂ ಕೂಡ ವೈರಿಗಳಂತೆ ವರ್ತಿಸುವ 2 ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಕಾಂಗ್ರೆಸ್ ಮುಖಂಡರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಒಂದಾಗಿದ್ದಾರೆ. 

ರಾಜಸ್ತಾನ ಮಾಜಿ ಸಿಎಂ ವಸುಂಧರಾ ರಾಜೇ ಈ ಪರಿ ಅಭಿನಂದಿಸಿದ್ದು ಯಾರನ್ನು?

ಜೈಪುರದ ಅಲ್ಬರ್ಟ್ ಹಾಲ್ ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಕಾಂಗ್ರೆಸ್  ಮುಖಂಡ ಅಶೋಕ್ ಗೆಹ್ಲೋಟ್  ಅಧಿಕಾರ ಸ್ವೀಕರಿಸಿದ್ದು,  ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಪಾಲ್ಗೊಂಡು ಅಭಿನಂದಿಸಿದ್ದಾರೆ.  ಅಲ್ಲದೇ ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಪೈಲಟ್ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೂ ರಾಜೆ ತಮ್ಮ ಅಭಿನಂದನೆ ತಿಳಿಸಿದ್ದಾರೆ. 

ರಾಜಸ್ಥಾನ ಬಿಜೆಪಿ ನಾಯಕಿ ವಸುಂಧರಾ ರಾಜೇ, ಸಮಾರಂಭಕ್ಕೆ ಆಗಮಿಸಿದ್ದ ಕಾಂಗ್ರೆಸ್ ಸಂಸದ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾಗೂ ಅಭಿನಂದನೆ ತಿಳಿಸುವ ಮೂಲಕ ಸಾಮರಸ್ಯ ಮೆರೆದಿದ್ದಾರೆ.  ಇಬ್ಬರೂ ರಾಜಮನೆತನಕ್ಕೆ ಸೇರಿದವರಾಗಿದ್ದು, ವಸುಂಧರಾ ರಾಜೇ ಜ್ಯೋತಿರಾದಿತ್ಯ ಸಿಂಧಿಯಾರ ಅತ್ತೆ. 

'ಕೈ' ನಾಯಕರ ಗೆಲುವನ್ನು ಸಂಭ್ರಮಿಸಿದ ಬಿಜೆಪಿ ಲೀಡರ್ ಶಿವರಾಜ್ ಸಿಂಗ್ ಚೌಹಾಣ್!

ಇನ್ನು ಮಧ್ಯ ಪ್ರದೇಶದಲ್ಲಿಯೂ ಕಮಲನಾಥ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪಾಲ್ಗೊಂಡಿದ್ದರು.  ಈ ಮೂಲಕ ರಾಜಕೀಯದಲ್ಲಿ ಬದ್ಧ ವೈರಿಗಳಂತೆ ಇದ್ದರೂ ತಮ್ಮ ಆತ್ಮೀಯತೆಯನ್ನು ಮರೆಯದೇ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಸಾಮರಸ್ಯ ಮೆರೆದಿದ್ದಾರೆ. 

Follow Us:
Download App:
  • android
  • ios