Asianet Suvarna News Asianet Suvarna News

ಎರಡು ತಿಂಗಳ ಬಳಿಕ ಜಮ್ಮು ಮತ್ತು ಕಾಶ್ಮೀರ ಪ್ರವಾಸಿಗರಿಗೆ ಮುಕ್ತ!

ಎರಡು ತಿಂಗಳ ಬಳಿಕ ಜಮ್ಮು ಮತ್ತು ಕಾಶ್ಮೀರ ಪ್ರವಾಸಿಗರಿಗೆ ಮುಕ್ತ| ಬುಧವಾರದಿಂದಲೇ ಕಾರ್ಯಾರಂಭಿಸಿದ ಪ್ರೌಢಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು

Jammu And Kashmir Reopens To Tourists After 2 Months
Author
Bangalore, First Published Oct 11, 2019, 8:28 AM IST

ಶ್ರೀನಗರ[ಅ.11]: 370ನೇ ವಿಧಿ ರದ್ದುಗೊಳಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಗುರುವಾರ ತೆರವುಗೊಳಿಸಲಾಗಿದೆ.

ಎರಡು ತಿಂಗಳ ಬಳಿಕ ಕಾಶ್ಮೀರ ಕಣಿವೆ ಈಗ ಪ್ರವಾಸಿಗರಿಗೆ ಮುಕ್ತವಾಗಿದೆ ಎಂದು ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಅವರು ಪ್ರಕಟಿಸಿದ್ದಾರೆ. ಭದ್ರತೆ ಮತ್ತು ಸದ್ಯದ ಪರಿಸ್ಥಿತಿಯ ಬಗ್ಗೆ ರಾಜ್ಯಪಾಲರು ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದರು.

ಇದೇ ವೇಳೆ ಪ್ರೌಢಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಬುಧವಾರದಿಂದಲೇ ಕಾರ್ಯಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ ಮತ್ತೆ ಎಲ್ಲರಿಗೂ ಮುಕ್ತ: ಆರ್ಟಿಕಲ್ 370 ರದ್ದಾದ 2 ತಿಂಗಳ ನಂತರ ಕಣಿವೆ ರಾಜ್ಯ ಹೇಗಿದೆ?

ರಾತ್ರೋರಾತ್ರಿ ಪ್ರವಾಸಿಗರನ್ನು ಕಾಶ್ಮೀರದಿಂದ ಹೊರಹಾಕಿದ್ದರು!

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪ್ರವಾಸಿಗರಿಗೆ ಮತ್ತು ಅಮರನಾಥ ಯಾತ್ರಿಕರಿಗೆ ಉಗ್ರರಿಂದ ಅಪಾಯ ಇರುವ ಸುಳಿವು ನೀಡಿ ಕಳೆದ ಆಗಸ್ಟ್‌ 2ರಂದು ಅಮರನಾಥ ಯಾತ್ರಿಕರು ಮತ್ತು ಪ್ರವಾಸಿಗರು ಕಾಶ್ಮೀರವನ್ನು ಕೂಡಲೇ ತೊರೆದು ವಾಪಸಾಗಬೇಕೆಂದು ಅಲ್ಲಿನ ರಾಜ್ಯ ಸರ್ಕಾರ ದಿಢೀರ್‌ ಸೂಚನೆ ನೀಡಿತ್ತು. ನಂತರ ಕಣಿವೆ ರಾಜ್ಯದಲ್ಲಿದ್ದ ಪ್ರವಾಸಿಗರನ್ನು ಮೂರು ದಿನದಲ್ಲಿ ಸಂಪೂರ್ಣವಾಗಿ ಹೊರ ಕಳಿಸಲಾಗಿತ್ತು.

ಅದಕ್ಕೂ ಮುನ್ನ ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ಹೆಚ್ಚುವರಿ ಸೇನೆಯನ್ನು ಜಮಾವಣೆ ಮಾಡಿದಾಗಲೇ 20000 ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಹಾಗೂ 2 ಲಕ್ಷ ಕಾರ್ಮಿಕರು ರಾಜ್ಯ ತೊರೆದಿದ್ದರು.

ನಂತರ ಆಗಸ್ಟ್‌ 5ರಂದು ಕೇಂದ್ರ ಸರ್ಕಾರ ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರವನ್ನು ಮೂರು ಭಾಗ ಮಾಡಿತು. ಜೊತೆಗೆ ಹೊರಗಿನ ಯಾರೂ ರಾಜ್ಯ ಪ್ರವೇಶಿಸದಂತೆ ನಿಷೇಧ ಹೇರಿತು. ವಿಶೇಷ ಸ್ಥಾನಮಾನ ಹಿಂಪಡೆತದಿಂದ ಅಲ್ಲಿ ಹಿಂಸಾಚಾರ ಉಂಟಾಗಬಹುದು, ಗಲಭೆ ಎದ್ದು ಉದ್ವಿಗ್ನ ಪರಿಸ್ಥಿತಿ ತಲೆದೋರಬಹುದೆಂದು ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿತ್ತು.

ಕಣಿವೆಯಲ್ಲಿ ನಡೆಯುತ್ತಿರುವುದು ಧರ್ಮಯುದ್ಧ: ಇಮ್ರಾನ್ ಇವಾಗ ತೆಪ್ಪಗಿದ್ದರೆ ಚೆಂದ!

Follow Us:
Download App:
  • android
  • ios