Asianet Suvarna News Asianet Suvarna News

ಜೆಡಿಎಸ್‌'ನಲ್ಲಿ ಇದೇ ಮೊದಲ ಬಾರಿ ಪ್ರಚಾರ ಸಮಿತಿ

ಇತ್ತೀಚೆಗೆ ಪಕ್ಷದ ಹಿರಿಯ ನಾಯಕ ಬಸವರಾಜ್‌ ಹೊರಟ್ಟಿಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಪಕ್ಷದ ಬಲವರ್ಧನೆಗೆ ಸಂಬಂಧಪಟ್ಟಂತೆ ಪತ್ರವೊಂದನ್ನು ಬರೆದಿದ್ದು, ಅದರಲ್ಲಿನ ಅಂಶಗಳ ಬಗ್ಗೆಯೂ ಚರ್ಚಿಸಲಾಯಿತು. ಅವರು ನೀಡಿರುವ ಸಲಹೆಗಳನ್ನು ಸಭೆಯು ಅಂಗೀಕರಿಸಿದೆ. ಅಲ್ಲದೇ, ಪಕ್ಷವನ್ನು ಸದೃಢಗೊಳಿಸಲು 224 ಕ್ಷೇತ್ರದಲ್ಲಿ ಬೂತ್‌ ಮಟ್ಟದ ಸಮಿತಿ ರಚನೆ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಶಾಸಕ ಸಿ.ಬಿ.ಸುರೇಶ್‌ ಬಾಬು ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗುವುದು. ಪಕ್ಷದ ಸದಸ್ಯರು ಸಮಿತಿಯ ಸದಸ್ಯರಾಗಿದ್ದು, ಅವರಿಗೆ ಅಗತ್ಯ ಇರುವ ಸಹಕಾರವನ್ನು ವಿಧಾನಸಭಾ ಕ್ಷೇತ್ರದ ಜಿಲ್ಲಾಧ್ಯಕ್ಷರು ನೀಡಲಿದ್ದಾರೆ. ಎಲ್ಲರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

JDS to form publicity committee for first time

ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌-ಬಿಜೆಪಿಗೆ ಸರಿಸಮಾನವಾಗಿ ಸ್ಪರ್ಧಿಸುವ ಚಿಂತನೆಯಲ್ಲಿರುವ ಜೆಡಿಎಸ್‌, ಪಕ್ಷದ ಸಾಧನೆಗಳನ್ನು ಜನತೆಗೆ ಪರಿಣಾಮಕಾರಿಯಾಗಿ ಮುಟ್ಟಿಸುವ ಉದ್ದೇಶದಿಂದ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಲು ಇದೇ ಮೊದಲ ಬಾರಿಗೆ ಪ್ರತ್ಯೇಕ ಪ್ರಚಾರ ಸಮಿತಿ ರಚನೆಗೆ ಮುಂದಾಗಿದೆ.

ನಗರದ ಶೇಷಾದ್ರಿಪುರಂನಲ್ಲಿನ ಜೆಡಿಸ್‌ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಪ್ರಚಾರ ಸಮಿತಿ ರಚನೆ ಸೇರಿದಂತೆ ಪಕ್ಷವನ್ನು ಬಲಗೊಳಿಸುವುದು, 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಹಾಗೂ ಮುಂದಿನ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ರೂಪಿಸಬೇಕಾದ ರಣತಂತ್ರಗಳ ಕುರಿತು ಚರ್ಚಿಸಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್‌ ಸದಸ್ಯ ರಮೇಶ್‌ ಬಾಬು ಅವರು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿರುವ ಸಾಧನೆ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿದ್ದ ಸಮಯದಲ್ಲಿನ ಸಾಧನೆಗಳನ್ನು ಜನರಿಗೆ ತಲುಪಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕುರಿತು ಚರ್ಚಿಸಲಾಗಿದೆ. ಇದಕ್ಕಾಗಿ ಪ್ರತ್ಯೇಕ ಪ್ರಚಾರ ಸಮಿತಿ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ಒಂದು ವಾರದಲ್ಲಿ ಸಮಿತಿ ರಚನೆಯ ಬಗ್ಗೆ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ಹೇಳಿದರು.

ಇತ್ತೀಚೆಗೆ ಪಕ್ಷದ ಹಿರಿಯ ನಾಯಕ ಬಸವರಾಜ್‌ ಹೊರಟ್ಟಿಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಪಕ್ಷದ ಬಲವರ್ಧನೆಗೆ ಸಂಬಂಧಪಟ್ಟಂತೆ ಪತ್ರವೊಂದನ್ನು ಬರೆದಿದ್ದು, ಅದರಲ್ಲಿನ ಅಂಶಗಳ ಬಗ್ಗೆಯೂ ಚರ್ಚಿಸಲಾಯಿತು. ಅವರು ನೀಡಿರುವ ಸಲಹೆಗಳನ್ನು ಸಭೆಯು ಅಂಗೀಕರಿಸಿದೆ. ಅಲ್ಲದೇ, ಪಕ್ಷವನ್ನು ಸದೃಢಗೊಳಿಸಲು 224 ಕ್ಷೇತ್ರದಲ್ಲಿ ಬೂತ್‌ ಮಟ್ಟದ ಸಮಿತಿ ರಚನೆ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಶಾಸಕ ಸಿ.ಬಿ.ಸುರೇಶ್‌ ಬಾಬು ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗುವುದು. ಪಕ್ಷದ ಸದಸ್ಯರು ಸಮಿತಿಯ ಸದಸ್ಯರಾಗಿದ್ದು, ಅವರಿಗೆ ಅಗತ್ಯ ಇರುವ ಸಹಕಾರವನ್ನು ವಿಧಾನಸಭಾ ಕ್ಷೇತ್ರದ ಜಿಲ್ಲಾಧ್ಯಕ್ಷರು ನೀಡಲಿದ್ದಾರೆ. ಎಲ್ಲರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಪಕ್ಷವು ಪೂರ್ಣ ಪ್ರಮಾಣದ ಸಮಿತಿಗಳು ರಚನೆ ಮಾಡಿಲ್ಲ. ಮುಂದಿನ 15 ದಿನದಲ್ಲಿ ಸಂಪೂರ್ಣ ಸಮಿತಿಗಳು ರಚನೆಯಾಗಲಿವೆ. ಸಮಿತಿಗಳ ರಚನೆಯ ಅಧಿಕಾರವನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಹಳೆ ಮೈಸೂರು ಭಾಗದಲ್ಲಿ 113 ಕ್ಷೇತ್ರಗಳು, ಮುಂಬೈ-ಕರ್ನಾಟಕ ಭಾಗದಲ್ಲಿ 56 ಕ್ಷೇತ್ರಗಳು, ಹೈದರಾಬಾದ್‌-ಕರ್ನಾಟಕ ಭಾಗದಲ್ಲಿ 40 ಕ್ಷೇತ್ರಗಳು, ಕರಾವಳಿ ಭಾಗದಲ್ಲಿ 15 ಕ್ಷೇತ್ರಗಳಲ್ಲಿ ಪಕ್ಷವು ಸ್ಪರ್ಧಿಸಲಿದೆ. ಮುಂದಿನ ಮೂರು ತಿಂಗಳಲ್ಲಿ ಪಕ್ಷವು ಮೂರು ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಪರಿಶಿಷ್ಟವರ್ಗ ಸಮಾವೇಶಗಳನ್ನು ನಡೆಸಲಾಗುವುದು ಎಂದರು. ಜೆಡಿಎಸ್‌ ಕೋರ್‌ ಕಮಿಟಿ ಸದಸ್ಯರ ಸಂಖ್ಯೆಯನ್ನು 15ರಿಂದ 17ಕ್ಕೆ ವಿಸ್ತರಿಸಲಾಗಿದೆ.

ಪ್ರತಿ ಜಿಲ್ಲೆಯಲ್ಲಿ ಸಮಾವೇಶ: ಕುಮಾರ ಪಥ' ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಲು ಕೋರ್‌ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಚುನಾವಣೆಗೆ ಸರ್ಕಾರದಿಂದ ಹಣ ಸಂಗ್ರಹ: ಎಚ್‌ಡಿಕೆ ಆರೋಪ

ಬೆಂಗಳೂರು: ಸರ್ಕಾರವು ಹಲವು ಯೋಜನೆಗಳ ಹೆಸರಲ್ಲಿ ಜನರ ತೆರಿಗೆ ಹಣವನ್ನು ಅನಗತ್ಯವಾಗಿ ಖರ್ಚು ಮಾಡುತ್ತಿದ್ದು, ಪ್ರತಿ ಯೋಜನೆಯಲ್ಲಿಯೂ ಕಮಿಷನ್‌ ಹೊಡೆದು ಮುಂದಿನ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಗುರುವಾರ ನಗರದಲ್ಲಿನ ಮಾಜಿ ಶಾಸಕ ಎಚ್‌.ಸಿ. ನೀರಾವರಿ ನೇತೃತ್ವದಲ್ಲಿ ನಡೆದ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೀರಾವರಿ ಯೋಜನೆಗಳೂ ಸೇರಿದಂತೆ ಹಲವು ಯೋಜನೆಗಳಲ್ಲಿ ಸರ್ಕಾರ ಕಮಿಷನ್‌ ಹೊಡೆಯುತ್ತಿದೆ. ಯೋಜನೆಗಳಿಂದ ರಾಜ್ಯದ ಜನತೆಗೆ ಅನುಕೂಲವಾಗುತ್ತದೆಯೇ ಎಂಬುದರ ಕುರಿತು ಅಲೋಚನೆ ಕೂಡ ಸರ್ಕಾರಕ್ಕೆ ಇಲ್ಲವಾಗಿದೆ. ಯೋಜನೆಗಳ ಹೆಸರಲ್ಲಿ ಜನರ ತೆರಿಗೆ ಹಣವನ್ನು ಅನಗತ್ಯವಾಗಿ ವೆಚ್ಚ ಮಾಡುತ್ತಿದೆ ಎಂದು ಕಿಡಿಕಾರಿದರು.
ಕನಿಷ್ಠ ಡಿಪಿಆರ್‌ ಕೂಡ ಸಿದ್ಧಪಡಿಸದೆ ಯೋಜನೆಗಳಿಗೆ ಕೋಟ್ಯಂತರ ರು. ಖರ್ಚು ಮಾಡಲಾಗುತ್ತಿದೆ. ಪ್ರತಿ ಯೋಜನೆಯಲ್ಲಿ ಕಮಿಷನ್‌ ಹೊಡೆಯಲಾಗುತ್ತಿದೆ. ಇದು 2018ರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹ ಮಾಡುವ ತಂತ್ರ ಎಂದು ವಾಗ್ದಾಳಿ ನಡೆಸಿದರು.

Follow Us:
Download App:
  • android
  • ios