news
By Suvarna Web Desk | 07:47 PM August 12, 2017
ರೈತರ ಸಾಲ ಮನ್ನಾ ಮಾಡಲು ಲೋಕಸಭೆಗೆ ಮುತ್ತಿಗೆ ಹಾಕಿ: ಸಿಎಂ

Highlights

ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಪಡೆದಿರುವ ಸಾಲವನ್ನು ನಮ್ಮ ಸರ್ಕಾರ ಮನ್ನಾ ಮಾಡಿದೆ. ಇದರಿಂದ ಸುಮಾರು 22.22 ಲಕ್ಷ ರೈತರ 8,165 ಕೋಟಿ ಸಾಲ ಮನ್ನಾ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡುವಂತೆ ಪ್ರಧಾನಿ ಮೋದಿ ಮೇಲೆ ಒತ್ತಡ ಹಾಕಿ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ರಾಯಚೂರು ಸಮಾವೇಶದಲ್ಲಿಂದು ಹೇಳಿದ್ದಾರೆ.

ರಾಯಚೂರು (ಆ.12): ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಪಡೆದಿರುವ ಸಾಲವನ್ನು ನಮ್ಮ ಸರ್ಕಾರ ಮನ್ನಾ ಮಾಡಿದೆ. ಇದರಿಂದ ಸುಮಾರು 22.22 ಲಕ್ಷ ರೈತರ 8,165 ಕೋಟಿ ಸಾಲ ಮನ್ನಾ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡುವಂತೆ ಪ್ರಧಾನಿ ಮೋದಿ ಮೇಲೆ ಒತ್ತಡ ಹಾಕಿ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ರಾಯಚೂರು ಸಮಾವೇಶದಲ್ಲಿಂದು ಹೇಳಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳಿಂದ ರೈತರು ಪಡೆದಿರುವ ಸಾಲ ಮನ್ನಾ ಮಾಡುವಂತೆ ಪ್ರಧಾನಿ ಮೇಲೆ ಒತ್ತಡ ಹೇರಲು ಲೋಕಸಭೆಗೆ ಮುತ್ತಿಗೆ ಹಾಕಿ. ಸಾಲ ಮನ್ನಾ ವಿಚಾರದಲ್ಲಿ ಪ್ರಧಾನಿಯನ್ನು ಭೇಟಿಯಾದಾಗ ಯಡಿಯೂರಪ್ಪ, ಅನಂತ್ ಕುಮಾರ್ ಸ್ಥಳದಲ್ಲಿಯೇ ಇದ್ದರೂ ಬಾಯಿ ಬಿಡಲಿಲ್ಲ. ಯಡಿಯೂರಪ್ಪನವರೇ, ನೀವು ಹಸಿರು ಟವೆಲ್ ಹಾಕಿಕೊಂಡು ನಾನು ರೈತನ ಮಗ ಎಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದೀರಿ. ರೈತರ ಮೇಲೆ ಪ್ರಮಾಣ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೀರಿ. ಆದರೆ ಮೂರೇ ತಿಂಗಳಲ್ಲಿ ಹಾವೇರಿ ಗೊಬ್ಬರ ಬೀಜ ಕೇಳಿದ ರೈತರನ್ನು ಕೊಂದು ಹಾಕಿದೀರಿ. ರೈತರು, ಬಡವರ ಬಗ್ಗೆ ಮಾತನಾಡಲು ನಿಮಗೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಯವರಿಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿಯವರು ಜನರನ್ನು ದಾರಿ ತಪ್ಪಿಸುವ, ಮರಳು ಮಾಡುವ ಸುಳ್ಳು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ 60 ವರ್ಷದಲ್ಲಿ ಏನೂ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಈ ದೇಶದಲ್ಲಿ ನೀರಾವರಿ ಯೋಜನೆಗಳಾಗಿದ್ದರೆ ಕೈಗಾರಿಕೆಗಳು ಸ್ಥಾಪನೆಯಾಗಿದ್ದರೆಶಿಕ್ಷಣದ ಪ್ರಮಾಣ ಶೇ.76 ಕ್ಕೆ ಹೋಗಿದ್ದರೆ, ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿದ್ದರೆ ಅದಕ್ಕೆ ಕಾಂಗ್ರೆಸ್  ಕಾರಣವೇ ಹೊರತು ಬಿಜೆಪಿ ಅಲ್ಲ ಎಂದಿದ್ದಾರೆ.  

(ಸಾಂದರ್ಭಿಕ ಚಿತ್ರ)

Show Full Article


Recommended


bottom right ad