ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನಕ್ಕೆ ಪ್ರಣಬ್ ಮುಖರ್ಜಿ ಸೇರಿ ಮೂರು ಪಾತ್ರರಾಗಿದ್ದಾರೆ.
ನವದೆಹಲಿ, ]ಜ.25]: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಮೂವರು ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಹಿಂದಿ ಚಿತ್ರರಂಗದ ಸಾಧಕ ಡಾ. ಭೂಪೇನ್ ಹಜಾರಿಕಾ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶಮುಖ್ ಗೆ ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಾರೆ.
ನಾಳೆ (ಶನಿವಾರ) ಗಣರಾಜ್ಯೋತ್ಸವದಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಈ ಬಾರಿ ಭಾರತ ರತ್ನ ಪುರಸ್ಕಾರ ನೀಡಬೇಕೆಂದು ಒತ್ತಾಯ ಕೇಳಿಬಂದಿದ್ದವು. ಅಷ್ಟೇ ಅಲ್ಲದೇ ರಾಜ್ಯ ಕಾಂಗ್ರೆಸ್ ಹಾಗು ಬಿಜೆಪಿ ನಾಯಕರುಗಳು ಸಹ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಹೇಳಿದ್ದರು.
