Asianet Suvarna News Asianet Suvarna News

ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿದ್ದು ರಾಹುಲ್ ಗಾಂಧಿ: ಸಿಧು!

ಕರ್ತಾರ್ ಪುರ್ ಕಾರಿಡಾರ್ ಯೋಜನೆ ಅಡಿಗಲ್ಲು ಸಮಾರಂಭ! ‘ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿದ್ದು ರಾಹುಲ್ ಗಾಂಧಿ’! ಪಾಕ್ ಭೇಟಿಯ ಹಿಂದಿನ ಸತ್ಯ ಬಿಚ್ಚಿಟ್ಟ ನವಜೋತ್ ಸಿಂಗ್ ಸಿಧು! ಸಿಧು ಪಾಕ್ ಭೇಟಿಯನ್ನು ವಿರೋಧಿಸಿದ್ದರಾ ಸಿಎಂ ಅಮರೀಂದರ್ ಸಿಂಗ್?

Navjot Sidhu Says Rahul Gandhi Sent Him To Pakistan
Author
Bengaluru, First Published Nov 30, 2018, 9:53 PM IST

ಅಮೃತಸರ್(ನ.30): ಇತ್ತೀಚೆಗೆ ನಡೆದ ಕರ್ತಾರ್ ಪುರ್ ಕಾರಿಡಾರ್ ಯೋಜನೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲು ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ತೆರಳಿದ್ದರ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಆದೇಶವೇ ಕಾರಣವೆನ್ನುವುದು ಈಗ ಬಹಿರಂಗವಾಗಿದೆ. 

ಸಿಧು ಸ್ವತಃ ಈ ಕುರಿತು ಹೇಳಿಕೆ ನೀಡಿದ್ದು ‘ರಾಹುಲ್ ಗಾಂಧಿ ನನ್ನನ್ನು ಕರ್ತಾರ್ ಪುರ ಕಾರಿಡಾರ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಾಕ್ ಗೆ ತೆರಳುವಂತೆ ಹೇಳಿದ್ದರು’ ಎಂದು ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರಿಗೆ ಸಿಧು ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದ್ದು, ಈ ಸಂಬಂಧ ಅವರು ಸಿಧು ಪಾಕ್ ಭೇಟಿಯನ್ನು ಮಾನ್ಯ ಮಾಡಲು ನಿರಾಕರಿಸಿದ್ದರು.

ಅಮೃತಸರ್ ನಲ್ಲಿ ನಡೆದ ಧಾರ್ಮಿಕ ಸಭೆ ಮೇಲೆ ಪಾಕ್ ಐಎಸ್ ಐ ಪ್ರಚೋದಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಈ ದಾಳಿಉಯಲ್ಲಿ ಮೂವರು ಸಾವನ್ನಪ್ಪಿದ್ದರು. ಹೀಗಾಗಿ ತಮ್ಮ ಸಂಪುಟ ಸಹೋದ್ಯೋಗಿಯಾಗಿರುವ ಸಿಧು ಪಾಕ್ ಭೇಟಿಯನ್ನು ತಡೆಯಲು ಅವರು ಪ್ರಯತ್ನಿಸಿದ್ದರು.

‘ರಾಹುಲ್ ಗಾಂಧಿ ನನ್ನ ನಾಯಕ. ಅವರೇ ನನ್ನನ್ನು ಪಾಕಿಸ್ತಾನಕ್ಕೆ ಕಳಿಸಿದ್ದರು’ ಎಂದು ಸಿಧು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಸಿಧು ಪಾಕ್ ಭೇಟಿಯನ್ನು 50-100 ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾಗಿ ಸಹ ಅವರು ಸಮರ್ಥನೆ ನೀಡಿದ್ದಾರೆ.

Follow Us:
Download App:
  • android
  • ios