Asianet Suvarna News Asianet Suvarna News

ಕಾಶ್ಮೀರಿಗಳಿಗೆ ಭದ್ರತೆ ನೀಡಿ: 11 ರಾಜ್ಯಗಳಿಗೆ ಸುಪ್ರೀಂ ಸೂಚನೆ!

ಪುಲ್ವಾಮಾ ಭಯೋತ್ಪಾದಕ ದಾಳಿ ಹಿನ್ನೆಲೆ| ವಿವಿಧ ರಾಜ್ಯಗಳಲ್ಲಿ ಕಾಶ್ಮೀರಿ ಪ್ರಜೆಗಳ ಮೇಲೆ ಹಲ್ಲೆ ಪ್ರಕರಣ| ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಸುಪ್ರೀಂ ಕೋರ್ಟ್ ಆದೇಶ| 11 ರಾಜ್ಯಗಳಿಗೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್| ಕಾಶ್ಮೀರಿಗಳ ಭದ್ರತೆ ಆಯಾ ರಾಜ್ಯ ಸರ್ಕಾರದ್ದೇ ಹೊಣೆ ಎಂದ ಸುಪ್ರೀಂ|

Prevent Kashmiris Top Court To States
Author
Bengaluru, First Published Feb 22, 2019, 2:08 PM IST

ನವದೆಹಲಿ(ಫೆ.22): ಪುಲ್ವಾಮಾ ಉಗ್ರ ದಾಳಿ ಬೆನ್ನಲ್ಲೇ ದೇಶದ ವಿವಿಧ ರಾಜ್ಯಗಳಲ್ಲಿನ ಕಾಶ್ಮೀರಿಗಳ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು 11 ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

11 ರಾಜ್ಯಗಳ ಡಿಜಿಪಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಚ್ ನಿರ್ದೇಶನ ನೀಡಿದ್ದು, ಆಯಾ ರಾಜ್ಯಗಳಲ್ಲಿರುವ ಕಾಶ್ಮೀರಿಗಳ ಭದ್ರತೆ ಆಯಾ ರಾಜ್ಯ ಸರ್ಕಾರದ್ದೇ ಆಗಿರುತ್ತದೆ ಎಂದು ಆದೇಶಿಸಿದೆ.

ಯಾವುದೇ ಕಾಶ್ಮೀರಿ ಮೇಲೆ ಹಲ್ಲೆ, ಬೆದರಿಕೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಗಳಿಂದ ರಕ್ಷಿಸುವುದು ರಾಜ್ಯ ಸರ್ಕಾರಗಳ ಹೊಣೆಯಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಸುಪ್ರೀಂ ಆದೇಶ ಸ್ವಾಗತಿಸಿದ ಒಮರ್ ಅಬ್ದುಲ್ಲಾ:

ಕಾಶ್ಮೀರಿಗರ ಭದ್ರತೆ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ. ಈ ಕ್ಲಿಷ್ಟಕರ ಸಂದರ್ಭದಲ್ಲಿ ಕಾಶ್ಮೀರಿಗಳ ಭದ್ರತೆ ಕುರಿತು ಚಿಂತಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದ ಎಂದು ಒಮರ್ ಟ್ವೀಟ್ ಮಾಡಿದ್ದಾರೆ.  

Follow Us:
Download App:
  • android
  • ios