Asianet Suvarna News Asianet Suvarna News

ಬರಲ್ಲ, ಬರಲ್ಲ ಅಂತಾ ಪಾಲಿಟಿಕ್ಸ್ ಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಗಾಂಧಿ!

ಕೊನೆಗೂ ರಾಜಕೀಯಕ್ಕೆ ಅಧಿಕೃತ ಎಂಟ್ರಿ ಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ| ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಹೊಸ ಅಸ್ತ್ರ| ಉತ್ತರ ಪ್ರದೇಶ ಪೂರ್ವ ವಿಭಾಗದ ಪ್ರಧಾನ ಉಸ್ತುವಾರಿ ಕಾರ್ಯದರ್ಶಿಯಾಗಿ ಪ್ರಿಯಾಂಕಾ ನೇಮಕ| ಪ್ರಧಾನಿ ಮೋದಿ ಕ್ಷೇತ್ರವಾದ ವಾರಣಾಸಿಯಲ್ಲಿ ಪ್ರಿಯಾಂಕಾ ಪ್ರಚಾರ| ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕೆಸಿ ವೇಣುಗೋಪಾಲ್ ನೇಮಕ

Priyanka Gandhi Vadra Get Key Position in Congress Party
Author
Bengaluru, First Published Jan 23, 2019, 2:29 PM IST

ನವದೆಹಲಿ(ಜ.23): ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಡಿಯಚ್ಚು, ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೊನೆಗೂ ಸಕ್ರೀಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಲೋಕಸಭೆ ಚುನಾವಣೆ ಘೊಷಣೆಯಾಗುವುದಕ್ಕೆ ಮುನ್ನ ಪಕ್ಷದ ಉಳಿವಿಗಾಗಿ ಹೊಸ ದಾಳ ಉರುಳಿಸಿರುವ ಕಾಂಗ್ರೆಸ್ ವರಿಷ್ಠರು, ಉತ್ತರ ಪ್ರದೇಶ ಪೂರ್ವ ವಿಭಾಗಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಾಂಗ್ರೆಸ್ ಪ್ರಧಾನ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.

ಪ್ರಿಯಾಂಕಾಗೆ ಇದೇ ಮೊದಲ ಬಾರಿಗೆ ಪಕ್ಷದಲ್ಲಿ ಅಧಿಕೃತ ಹುದ್ದೆಯೊಂದು ದೊರೆತಂತಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಏನು ಮ್ಯಾಜಿಕ್ ಮಾಡಲಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ. 

ಪೂರ್ವ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಹೊಣೆ ಹೊತ್ತ ಪ್ರಿಯಾಂಕಾ, ಪ್ರಧಾನಿ ಮೋದಿ ಕ್ಷೇತ್ರವಾದ ವಾರಣಾಸಿಯಲ್ಲಿ ಸಹ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಇದೇ ವೇಳೆ ಕೆಸಿ ವೇಣುಗೋಪಾಲ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇನ್ನು ಜೋತಿರಾದಿತ್ಯ ಸಿಂಧಿಯಾ ಅವರನ್ನು ಉತ್ತರ ಪ್ರದೇಶ ಪಶ್ಚಿಮ ವಿಭಾಗದ ಕಾಂಗ್ರೆಸ್ ಪ್ರಧಾನ ಉಸ್ತುವಾರಿ ಕಾರ್ಯದರ್ಶಯನ್ನಾಗಿ ಹಾಗೂ ಗುಲಾಂ ನಬಿ ಆಜಾದ್ ಅವರನ್ನು ಹರಿಯಾಣದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

Follow Us:
Download App:
  • android
  • ios