news
By Suvarna Web Desk | 11:31 AM February 17, 2017
ಸ್ಟೀಲ್ ಫ್ಲೈಓವರ್ ಅಕ್ರಮದ ಬಗ್ಗೆ ಲೋಕಾಯುಕ್ತಕ್ಕೆ ಸಂಸದರ ದೂರು

Highlights

, ಸ್ಟೀಲ್ ಫ್ಲೈಓವರ್ ನಿರ್ಮಾಣ ವಿಚಾರದಲ್ಲಿ ಸರ್ಕಾರ ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ತನ್ನ ಸ್ವಂತ ಲಾಭಕ್ಕಾಗಿ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ಹೊರಟಿದೆ

ಬೆಂಗಳೂರು(ಫೆ.17): ಮೇಕ್ರಿ ಸರ್ಕಲ್ ಬಳಿ ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಹೊರಟಿರುವ ಸ್ಟೀಲ್ ಫ್ಲೈಓವರ್ ಅಕ್ರಮದಿಂದ ಕೂಡಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಲೋಕಾಯುಕ್ತ ನ್ಯಾಯಮೂರ್ತಿಯವರಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಲೋಕಾಯುಕ್ತ ನ್ಯಾಯಮೂರ್ತಿಗಳಾದ ವಿಶ್ವನಾಥ್ ಶೆಟ್ಟಿ ಅವರನ್ನು ಭೇಟಿ ಮಾಡಿದ ಸಂಸದರು, ಸ್ಟೀಲ್ ಫ್ಲೈಓವರ್ ನಿರ್ಮಾಣ ವಿಚಾರದಲ್ಲಿ ಸರ್ಕಾರ ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ತನ್ನ ಸ್ವಂತ ಲಾಭಕ್ಕಾಗಿ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ಹೊರಟಿದ್ದು, ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.

Show Full Article


Recommended


bottom right ad