Asianet Suvarna News Asianet Suvarna News

ಐಐಎಸ್ಸಿಯಲ್ಲಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ದೇಶದ ಪ್ರತಿಷ್ಠಿತ ಸಂಸ್ಥೆಯಾದ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಅದೇ ಸಂಸ್ಥೆಯ ಸೆಕ್ಯುರಿಟಿ ಗಾರ್ಡ್‌ನಿಂದ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೆಕ್ಯುರಿಟಿ ಗಾರ್ಡ್ ಗೌತಮ್‌ರಾಜ್ ಬಂಧಿತನಾಗಿದ್ದು, ಬಳಿಕ ನ್ಯಾಯಾಲಯದಲ್ಲಿ ಜಾಮೀನು ಪಡೆದು ಆತ ಹೊರ ಬಂದಿದ್ದಾನೆ. ಕೆಲ ದಿನಗಳ ಹಿಂದೆ ಗ್ರಂಥಾಲಯದಲ್ಲಿ ವಿದ್ಯಾರ್ಥಿನಿ ಅಧ್ಯಯನದಲ್ಲಿ ನಿರತರಾಗಿದ್ದ ಘಟನೆ ನಡೆದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಐಐಎಸ್‌ಸಿ ಸಂಸ್ಥೆಯು, ಆರೋಪಿಯನ್ನು ಕೆಲಸದಿಂದ ತಕ್ಷಣವೇ ವಜಾಗೊಳಿಸಿದ್ದು ಮಾತ್ರವಲ್ಲದೆ ಈ ಬಗ್ಗೆ ಸದಾಶಿವನಗರ ಠಾಣೆಗೂ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Student Sexually Harassed in IISC

ಬೆಂಗಳೂರು : ದೇಶದ ಪ್ರತಿಷ್ಠಿತ ಸಂಸ್ಥೆಯಾದ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಅದೇ ಸಂಸ್ಥೆಯ ಸೆಕ್ಯುರಿಟಿ ಗಾರ್ಡ್‌ನಿಂದ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸೆಕ್ಯುರಿಟಿ ಗಾರ್ಡ್ ಗೌತಮ್‌ರಾಜ್ ಬಂಧಿತನಾಗಿದ್ದು, ಬಳಿಕ ನ್ಯಾಯಾಲಯದಲ್ಲಿ ಜಾಮೀನು ಪಡೆದು ಆತ ಹೊರ ಬಂದಿದ್ದಾನೆ. ಕೆಲ ದಿನಗಳ ಹಿಂದೆ ಗ್ರಂಥಾಲಯದಲ್ಲಿ ವಿದ್ಯಾರ್ಥಿನಿ ಅಧ್ಯಯನದಲ್ಲಿ ನಿರತರಾಗಿದ್ದ ಘಟನೆ ನಡೆದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಐಐಎಸ್‌ಸಿ ಸಂಸ್ಥೆಯು, ಆರೋಪಿಯನ್ನು ಕೆಲಸದಿಂದ ತಕ್ಷಣವೇ ವಜಾಗೊಳಿಸಿದ್ದು ಮಾತ್ರವಲ್ಲದೆ ಈ ಬಗ್ಗೆ ಸದಾಶಿವನಗರ ಠಾಣೆಗೂ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

22 ವರ್ಷದ ವಿದ್ಯಾರ್ಥಿನಿಯು ಗುರುವಾರ ಮಧ್ಯಾಹ್ನ 12.30 ಗಂಟೆಯಲ್ಲಿ ಗ್ರಂಥಾಲಯದಲ್ಲಿ ಅಧ್ಯಯನದಲ್ಲಿ ನಿರತರಾಗಿದ್ದರು. ಅಲ್ಲಿಗೆ ಬಂದ ಆರೋಪಿ ಮಾತನಾಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಹೊರಗೆ ಕರೆದು, ಬಳಿಯೇ ಇರುವ ಕೊಠಡಿಗೆ ಕರೆದೊಯ್ದಿದ್ದಾನೆ. ಕೊಠಡಿಯಲ್ಲಿ ಆತನ ವರ್ತನೆಯಿಂದ ಅನುಮಾನಗೊಂಡ ವಿದ್ಯಾರ್ಥಿನಿ, ಕೊಠಡಿ ಲೈಟ್ ಆನ್ ಮಾಡುವಂತೆ ಸೂಚಿಸಿದ್ದರು. ಆ ವೇಳೆ ವಿದ್ಯಾರ್ಥಿನಿಯ ಕೈಗಳನ್ನು ಬಿಗಿಯಾಗಿ ಹಿಡಿದುಕೊಂಡ ಸೆಕ್ಯುರಿಟಿ ಗಾರ್ಡ್, ಆಕೆಯನ್ನು ಚುಂಬಿಸುವಂತೆ ಒತ್ತಾಯಿಸಿದ್ದ.

ಈ ವರ್ತನೆಯಿಂದ ಭಯಗೊಂಡ ಆಕೆ, ಜೋರಾಗಿ ರಕ್ಷಣೆಗೆ ಕೂಗಿಕೊಳ್ಳುತ್ತಿದ್ದಂತೆ ಆತ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಸಂಸ್ಥೆಯ ಆಂತರಿಕ ಸಮಿತಿಗೆ ಅವರು ದೂರು ಸಲ್ಲಿಸಿದ್ದರು. ಬಳಿಕ ಅದೇ ಸಂಸ್ಥೆಯಲ್ಲಿ ಓದುತ್ತಿರುವ ತನ್ನ ಸೋದರನಿಗೂ ತಿಳಿಸಿದ್ದರು. ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ ಐಐಎಸ್‌ಸಿ ಮುಖ್ಯಸ್ಥರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow Us:
Download App:
  • android
  • ios