Asianet Suvarna News Asianet Suvarna News

ಕೆಂಪಾದವು ದೆಹಲಿ ರಸ್ತೆಗಳು: ರಾಜಧಾನಿಗೆ ರೈತರ ಮುತ್ತಿಗೆ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈತ ಶಕ್ತಿ ಅನಾವರಣ! ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ! ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ ಹಿಡಿದು ರೈತರ ಪ್ರತಿಭಟನೆ! ವಿವಿಧ ರಾಜ್ಯಗಳಿಂದ ಬಂದಿರುವ ಲಕ್ಷಾಂತರ ರೈತರಿಂದ ತುಂಬಿ ಹೋದ ನವದೆಹಲಿ! ಸಂಸತ್ತಿನ ಕಡೆಗೆ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

Thousands Of Farmers March To Parliament
Author
Bengaluru, First Published Nov 30, 2018, 2:15 PM IST

ನವದೆಹಲಿ(ನ.30): ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕವೂ ಒಳಗೊಂಡಂತೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರ ದಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಸಂಸತ್ತಿನ ಕಡೆಗೆ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ ಹೊರಟಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಗಾಗಿ 3,500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

"

ಪ್ರತಿಭಟನೆಗೆ ಕರ್ನಾಟಕ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ದಹಲಿಗೆ ರೈತರು ಆಗಮಿಸಿದ್ದಾರೆ.

ನಿನ್ನೆ ಮಧ್ಯಾಹ್ನ ರಾಮ್ ಲೀಲಾ ಮೈದಾನ ಸೇರಿದ್ದ ರೈತ ಸಮುದಾಯ, ಅಯೋಧ್ಯೆ ಬೇಡ, ಸಾಲ ಮನ್ನಾ ಬೇಕು ಎಂಬ ಘೋಷಣೆಗಳನ್ನು ಕೂಗುವ ಮೂಲಕ, ತಮ್ಮ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವ ಯತ್ನ ಮಾಡಿತು.

ರೈತರು, ಕೃಷಿ ಕಾರ್ಮಿಕರು ಸೇರಿದಂತ ಒಟ್ಟು 207 ರೈತ ಸಂಘಟನೆಗಳು, ತಮ್ಮ ಬೇಡಿಕೆಗಾಗಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಹಕಾರ ಸಮಿತಿ ಬ್ಯಾನರ್ ಅಡಿ ಒಟ್ಟುಗೂಡಿವೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತ ನದಿ ಜೋಡಣೆ ಕೃಷಿ ಸಂಘಟನೆಯ 1200 ಸದಸ್ಯರು, ಆತ್ಮಹತ್ಯೆಗ ಶರಣಾದ ಇಬ್ಬರು ರೈತರ ತಲೆಬುರುಡೆ ಹೊತ್ತು ಮೆರವಣಿಗೆ ನಡೆಸಿದರು.

Follow Us:
Download App:
  • android
  • ios