news
By Suvarna Web Desk | 03:23 PM March 20, 2017
ಬೆಂಗಳೂರಿನ ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್

Highlights

ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ ನಿರ್ಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ.

ಬೆಂಗಳೂರು(ಮಾ. 20): ನಗರದ ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶಗಳಲ್ಲಿ ಮಧ್ಯಾಹ್ನದಿಂದ ಭಾರೀ ಟ್ರಾಫಿಕ್ ಜಾಮ್ ಆಗಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ ಬಳಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಅಸ್ತವ್ಯವಸ್ತಗೊಂಡಿದೆ. ರಾಜ್ಯದ ವಿವಿಧೆಡೆಯಿಂದ 10 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಇಂದು ಮಧ್ಯಾಹ್ನದಿಂದ ಈ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಬೇಡಿಕೆ ಈಡೇರಿಸುವವರೆಗೂ ತಾವು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ಕಾರ್ಯಕರ್ತೆಯರು ಹೇಳುತ್ತಿದ್ದಾರೆ. ಸಚಿವೆ ಉಮಾಶ್ರೀ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಕೆಗೆ ನಡೆಸಿದ ಪ್ರಯತ್ನ ಫಲ ಕೊಡಲಿಲ್ಲ.

ಎಲ್ಲೆಲ್ಲಿ ಟ್ರಾಫಿಕ್ ಜಾಮ್?
ಆನಂದರಾವ್ ಸರ್ಕಲ್, ಶಿವಾನಂದ ಸರ್ಕಲ್, ಚಾಲುಕ್ಯ ಸರ್ಕಲ್, ಕೆಂಪೇಗೌಡ ಸರ್ಕಲ್ ಮೊದಲಾದ ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶಗಳಲ್ಲಿ ಮಧ್ಯಾಹ್ನದಿಂದಲೂ ಟ್ರಾಫಿಕ್ ಜಾಮ್ ಇದೆ. ರಾತ್ರಿ 9ಗಂಟೆಯಾದರೂ ವಾಹನ ದಟ್ಟನೆ ಕಡಿಮೆಯಾಗಿಲ್ಲ. ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ ನಿರ್ಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ.

Show Full Article


Recommended


bottom right ad