news
By Suvarna Web Desk | 02:21 PM March 20, 2017
ಟಿವಿ ಪತ್ರಕರ್ತ ರವೀಶ್ ಕುಮಾರ್ ಗೆ ಕುಲದೀಪ್ ನಯ್ಯರ್ ಪ್ರಶಸ್ತಿ

Highlights

ಜಾಗತಿಕ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಟಿವಿ ಪತ್ರಕರ್ತ ರವೀಶ್ ಕುಮಾರ್  ಕುಲದೀಪ್ ನಯ್ಯರ್ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಫಲಕದ ಜೊತೆ 1 ಲಕ್ಷ ನಗದು ಬಹುಮಾನವನ್ನು ಪಡೆದಿದ್ದಾರೆ.

ನವದೆಹಲಿ (ಮಾ.20): ಜಾಗತಿಕ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಟಿವಿ ಪತ್ರಕರ್ತ ರವೀಶ್ ಕುಮಾರ್  ಕುಲದೀಪ್ ನಯ್ಯರ್ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಫಲಕದ ಜೊತೆ 1 ಲಕ್ಷ ನಗದು ಬಹುಮಾನವನ್ನು ಪಡೆದಿದ್ದಾರೆ.

ಗಾಂಧಿ ಶಾಂತಿ ಫೌಂಡೇಶನ್ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಸಮಾರಂಭವನ್ನು ಆಯೋಜಿಸಿದ್ದು ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ರವೀಶ್ ಕುಮಾರ್ ಗೆ ಪ್ರಶಸ್ತಿ ಪ್ರಧಾನ ಮಾಡಿದರು. ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲೇ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ ಎಂದು ಕುಲದೀಪ್ ನಯ್ಯರ್ ತಮಾಷೆ ಮಾಡಿದರು.

ದೇಶೀಯ ಮಾಧ್ಯಮಗಳಲ್ಲಿ ಅಪ್ರತಿಮ ಸಾಧನೆ ಮಾಡಿದವರಿಗೆ ಈ ವರ್ಷದಿಂದ ಕುಲದೀಪ್ ನಯ್ಯರ್ ಪ್ರಶಸ್ತಿಯನ್ನು ಕೊಟ್ಟು ಗೌರವಿಸಲಾಗುತ್ತದೆ.

Show Full Article


Recommended


bottom right ad