news
By Suvarna Web Desk | 03:46 PM March 20, 2017
ಉಪಹಾರ್ ದುರಂತ: ಗೋಪಾಲ್ ಅನ್ಸಾಲ್ ಶರಣಾಗತಿ

Highlights

ಉಪಹಾರ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲೀಫ್ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್ ಅನ್ಸಾಲ್ ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗಿದ್ದಾರೆ.

ನವದೆಹಲಿ (ಮಾ.20): ಉಪಹಾರ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲೀಫ್ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್ ಅನ್ಸಾಲ್ ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗಿದ್ದಾರೆ.

ರಾಷ್ಟ್ರಪತಿಯವರಿಗೆ ದಯಾ ಮನವಿ ಸಲ್ಲಿಸಿದ್ದರಿಂದ ಶರಣಾಗಲು ಹೆಚ್ಚಿನ ಸಮಯಾವಕಾಶ ನೀಡಬೇಕೆಂದು ಗೋಪಾಲ್ ಅನ್ಸಾಲ್ ಸುಪ್ರೀಂಕೋರ್ಟ್ ನಲ್ಲಿ ಮರು ಅರ್ಜಿ ಸಲ್ಲಿಸಿದ್ದರು. ಆದರೆ ಮುಖ್ಯ ನ್ಯಾ. ಖೇಹರ್ ಮತ್ತು ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಈ ಅರ್ಜಿಯನ್ನು ನಿರಾಕರಿಸಿದ್ದು ಇಂದು ಸಂಜೆಯೊಳಗೆ ಶರಣಾಗಬೇಕು ಮತ್ತು ಒಂದು ವರ್ಷ ಜೈಲು ಶಿಕ್ಷೆಯನ್ನು ಪೂರೈಸಬೇಕು ಎಂದು ಅನ್ಸಾಲ್ ಗೆ ಸೂಚಿಸಿತು.

Show Full Article


Recommended


bottom right ad