Asianet Suvarna News Asianet Suvarna News

ಬಿಜೆಪಿ ಸಂಸ್ಥಾಪನಾ ದಿನ: ಖುದ್ದು ಅಡ್ವಾಣಿಯೇ ಬರೆದ್ರಾ ಬ್ಲಾಗ್?

ಬಿಜೆಪಿಯ ಸಂಸ್ಥಾಪನಾ ದಿನದಂದು ಐದು ವರ್ಷದ ನಂತರ ಲಾಲ್ ಕೃಷ್ಣ ಅಡ್ವಾಣಿ ಬರೆದಿರುವ ಬ್ಲಾಗ್‌ ಖುದ್ದು ಅವರೇ ಬರೆದಿದ್ದಾ ಅಥವಾ ಬೇರೆಯವರ ಸಹಾಯದಿಂದ ಬರೆಸಿದ್ದಾ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಜೋರಾಗಿಯೇ ನಡೆಯುತ್ತಿದೆ. ಏನಿದರ ಸತ್ಯಾಸತ್ಯತೆ? ಈ ಸುದ್ದಿ ಓದಿ. 

Who penned down blog of LK Advani on the day of BJP establishment day
Author
Bengaluru, First Published Apr 16, 2019, 3:54 PM IST

ಬೆಂಗಳೂರು (ಏ. 16): ಬಿಜೆಪಿಯ ಸಂಸ್ಥಾಪನಾ ದಿನದಂದು ಐದು ವರ್ಷದ ನಂತರ ಲಾಲ್ ಕೃಷ್ಣ ಅಡ್ವಾಣಿ ಬರೆದಿರುವ ಬ್ಲಾಗ್‌ ಖುದ್ದು ಅವರೇ ಬರೆದಿದ್ದಾ ಅಥವಾ ಬೇರೆಯವರ ಸಹಾಯದಿಂದ ಬರೆಸಿದ್ದಾ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಜೋರಾಗಿಯೇ ನಡೆಯುತ್ತಿದೆ. 

ಅನೇಕರು ಹೇಳುವ ಪ್ರಕಾರ ಲೇಖನದ ಭಾಷೆ ನೋಡಿದರೆ ಅಡ್ವಾಣಿ ಆಪ್ತ ಮುಂಬೈನ ಸುಧೀಂದ್ರ ಕುಲಕರ್ಣಿ ಬರೆದಿರುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ರಾಷ್ಟ್ರೀಯತೆ ಚರ್ಚೆ ಬಗ್ಗೆ ಅಡ್ವಾಣಿ ಹಾಗೆಲ್ಲ ಬರೆದಿರಲು ಸಾಧ್ಯವಿಲ್ಲ ಎನ್ನುತ್ತವೆ ಬಿಜೆಪಿ ಮೂಲಗಳು. ಆದರೆ ಇದನ್ನು ಯಾರಿಂದಲೂ ಪ್ರಮಾಣೀಕರಿಸುವುದು ಸಾಧ್ಯವಿಲ್ಲ.

ಮತದಾನ ಮಾಡುವ ಗ್ರಾಹಕರಿಗೆ ಹೀರೋ ಮೋಟಾರ್‌ನಿಂದ ಭರ್ಜರಿ ಗಿಫ್ಟ್!

5 ವರ್ಷಗಳ ಬಳಿಕ ತಮ್ಮ ಬ್ಲಾಗ್‌ನಲ್ಲಿ ಮೊದಲ ಬಾರಿ ಲೇಖನ ಬರೆದಿರುವ ಅಡ್ವಾಣಿ, ‘ದೇಶದ್ರೋಹ’ ಕುರಿತಾಗಿಯೂ ಮಹತ್ವದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ‘ರಾಜಕೀಯವಾಗಿ ನಮ್ಮನ್ನು ಒಪ್ಪದವರನ್ನು ನಾವೆಂದೂ ‘ದೇಶವಿರೋಧಿ’ ಎಂದಾಗಲಿ, ‘ವೈರಿ’ ಎಂದಾಗಲಿ ಪರಿಗಣಿಸಿಲ್ಲ. ಅವರನ್ನು ‘ವಿರೋಧಿಗಳು’ ಎಂದು ಮಾತ್ರ ಪರಿಗಣಿಸಿದ್ದೇವೆ’ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ‘ರಾಷ್ಟ್ರವಾದ’ವನ್ನು ಪ್ರಮುಖ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ. 

’ಕನಕಪುರ ಬಂಡೆ’ಗೆ ಕಡಿವಾಣ ಹಾಕುವವರು ಯಾರು?

‘ವಾಕ್‌ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವು ಭಾರತೀಯ ಪ್ರಜಾಸತ್ತೆಯ ತಿರುಳು. ಆರಂಭದಿಂದಲೂ ರಾಜಕೀಯವಾಗಿ ನಮ್ಮನ್ನು ಒಪ್ಪದವರನ್ನು ಬಿಜೆಪಿಯು ಎಂದೂ ವೈರಿಗಳು ಎಂದು ಪರಿಗಣಿಸಿಲ್ಲ. ಕೇವಲ ವಿರೋಧಿಗಳು ಎಂದು ಪರಿಗಣಿಸಿದ್ದೇವಷ್ಟೇ. ಅಂತೆಯೇ ಭಾರತೀಯ ರಾಷ್ಟ್ರೀಯವಾದದ ಪರಿಕಲ್ಪನೆಯ ಪ್ರಕಾರ ನಮ್ಮನ್ನು ರಾಜಕೀಯವಾಗಿ ಒಪ್ಪದವರನ್ನು ಎಂದೂ ‘ದೇಶವಿರೋಧಿಗಳು’ ಎಂದು ಪರಿಗಣಿಸಿಲ್ಲ. ಪಕ್ಷವು ಪ್ರತಿ ನಾಗರಿಕರ ರಾಜಕೀಯ ಹಾಗೂ ವೈಯಕ್ತಿಕ ವಾಕ್‌ ಸ್ವಾತಂತ್ರ್ಯಕ್ಕೆ ಬದ್ಧವಾಗಿರುತ್ತದೆ’.

ತಪ್ಪಿದ ಬಿಜೆಪಿ ಟಿಕೆಟ್ : ಮೊದಲ ಬಾರಿ ಮೌನ ಮುರಿದ ಬಿಜೆಪಿ ಭೀಷ್ಮ

‘ಸತ್ಯ, ರಾಷ್ಟ್ರನಿಷ್ಠೆ ಹಾಗೂ ಲೋಕತಂತ್ರ (ಆಂತರಿಕ ಪ್ರಜಾಸತ್ತೆ) ಎಂಬ 3 ಅಂಶಗಳು ಪಕ್ಷಕ್ಕೆ ನನ್ನ ಮಾರ್ಗದರ್ಶನ ಮಾಡಿದವು. ಈ ಎಲ್ಲ ಮೌಲ್ಯಗಳು ಸಾಂಸ್ಕೃತಿಕ ರಾಷ್ಟ್ರವಾದ ಹಾಗೂ ಸು-ರಾಜ್ಯಕ್ಕೆ (ಉತ್ತಮ ಆಡಳಿತ) ಕಾರಣೀಭೂತವಾಗುತ್ತವೆ. ತುರ್ತುಸ್ಥಿತಿಯ ವಿರುದ್ಧದ ಹೋರಾಟವು ಈ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ’ ಎಂದು ಅಡ್ವಾಣಿ ಹೇಳಿದ್ದಾರೆ.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ 

ರಾಜಕಾರಣದ ಸುದ್ದಿಗಾಗಿ ಇಂಡಿಯಾ ಗೇಟ್ ಕ್ಲಿಕ್ ಮಾಡಿ 

Follow Us:
Download App:
  • android
  • ios