Asianet Suvarna News Asianet Suvarna News

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

ಕರ್ನಾಟಕ ಕಾಂಗ್ರೆಸ್‌ಗೆ ಮತ್ತೊಂದು ಬಿಗ್ ಶಾಕ್ | ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ನಾಯಕ| ರಾಜೀನಾಮೆ ಪತ್ರವನ್ನು ಉಪರಾಷ್ಟ್ರಪತಿಗೆ ಸಲ್ಲಿಕೆ| ಕೇವಲ ರಾಜ್ಯಸಭೆಗೆ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ರಾಜೀನಾಮೆ.

Congress Rajya Sabha Member kc ramamurthy resigns His Post
Author
Bengaluru, First Published Oct 16, 2019, 2:34 PM IST

ಬೆಂಗಳೂರು, (ಅ.16):  ಕರ್ನಾಟಕ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

"

ಕೇವಲ ರಾಜ್ಯಸಭೆಗೆ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ಕೆ.ಸಿ.ರಾಮಮೂರ್ತಿ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆ ಸದಸ್ಯಕ್ಕೆ ರಾಜೀನಾಮೆ ಪತ್ರವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ನೀಡಿದ್ದಾರೆ.

ಶಾಸಕ ಸ್ಥಾನಕ್ಕೆ JDS ಶಾಸಕ ಸಾ ರಾ ಮಹೇಶ್ ರಾಜೀನಾಮೆ!?

ನಿವೃತ್ತ ಐಪಿಎಸ್ ಅಧಿಕಾರಿಯಾಗಿದ್ದ ರಾಮಮೂರ್ತಿ ಅವರು 2016 ಜೂನ್‌ನಲ್ಲಿ ಕರ್ನಾಟಕ ಕಾಂಗ್ರೆಸ್‌ ರಾಜ್ಯಸಭೆ ಸದಸ್ಯರಾಗಿ ನೇಮಕಗೊಂಡಿದ್ದರು. ಇನ್ನು ಇವರ ಅವಧಿ 2022ರ ವರೆಗೂ ಇತ್ತು. ಆದ್ರೆ ಇದೀಗ ದಿಢೀರ್ ರಾಜೀನಾಮೆ ನೀಡಿದ್ದು ಭಾರೀ ಕುತೂಹಲ ಮೂಡಿಸಿದೆ.

ರಾಜೀನಾಮೆ ಬಗ್ಗೆ ಸುವರ್ಣನ್ಯೂಸ್​ಗೆ ಪ್ರತಿಕ್ರಿಯಿಸಿರುವ ಕೆ.ಸಿ.ರಾಮಮೂರ್ತಿ, ಕಾಂಗ್ರೆಸ್​​ ಪಕ್ಷದಲ್ಲಿ ಈಗ ನಾನು ನಿಂತ ನೀರಾಗಿದ್ದೆ. ರಾಷ್ಟ್ರದ ಅಭಿವೃದ್ಧಿ ಕಾರ್ಯದಲ್ಲಿ ಕೈಜೋಡಿಸುವ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಯಾರನ್ನೋ ವಿರೋಧಿಸಲು ಅಥವಾ ಯಾರನ್ನೋ ಬೆಂಬಲಿಸಲು ರಾಜೀನಾಮೆ ಕೊಟ್ಟಿಲ್ಲ. ರಾಜ್ಯ ಅಥವಾ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯನಾಗಿ ಇರುತ್ತೇನೆ. ಯಾವ ಪಕ್ಷದಲ್ಲಿ ಸಕ್ರಿಯನಾಗಿರುತ್ತೇನೆ ಅನ್ನೋದು ಮುಂದೆ ತಿಳಿಯಲಿದೆ ಎಂದು ಹೇಳಿದರು.

ರಾಷ್ಟ್ರದ ಅಭಿವೃದ್ಧಿ ಕಾರ್ಯದಲ್ಲಿ ಕೈಜೋಡಿಸುತ್ತೇನೆ ಎಂದು ಹೇಳಿಕೆಯನ್ನು ನೋಡಿದ್ರೆ, ಎಲ್ಲೋ ಒಂದು ಕಡೆ ಆಡಳಿತ ಪಕ್ಷ ಬಿಜೆಪಿ ಸೇರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

 

Follow Us:
Download App:
  • android
  • ios