Asianet Suvarna News Asianet Suvarna News

ಲೋಕಸಭಾ ಚುನಾವಣೆ 2024: ಚಿಕ್ಕಬಳ್ಳಾಪುರದಲ್ಲಿ ಕೆ.ಸುಧಾಕರ್‌, ರಕ್ಷಾ ರಾಮಯ್ಯ ನಡುವೆ ಬಿಗ್‌ ಫೈಟ್‌...!

ಕಾಂಗ್ರೆಸ್‌ನ ಭದ್ರಕೋಟೆಯಾದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಗೆಲುವು ಸಾಧಿಸಿತ್ತು. ಮರಳಿ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲು ತವಕಿಸುತ್ತಿದೆ. ಇತ್ತ ಬಿಜೆಪಿ ಸಹ ಕ್ಷೇತ್ರವನ್ನು ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದೆ. ಹೀಗಾಗಿ, ಗೆಲ್ಲುವ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅಭ್ಯರ್ಥಿ, ಕಾಂಗ್ರೆಸ್‌ನಿಂದ ಎಂ.ಎಸ್.ರಕ್ಷಾ ರಾಮಯ್ಯ ಅಭ್ಯರ್ಥಿ

Fight between K Sudhakar and Raksha Ramaiah in Chikkaballapur of Lok Sabha Elections 2024 grg
Author
First Published Apr 20, 2024, 1:57 PM IST

ದಯಾಸಾಗರ್

ಚಿಕ್ಕಬಳ್ಳಾಪುರ(ಏ.20): ಮಾಜಿ ಸಚಿವ ಡಾ. ಕೆ.ಸುಧಾಕರ್ ಸ್ಪರ್ಧೆ ಯಿಂದಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಈ ಬಾರಿ ಪ್ರತಿಷ್ಠಿತ ಕ್ಷೇತ್ರಗಳ ಸಾಲಿಗೆ ಸೇರಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ಕಾಂಗ್ರೆಸ್‌ನ ಭದ್ರಕೋಟೆ ಯಾದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಗೆಲುವು ಸಾಧಿಸಿತ್ತು. ಮರಳಿ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲು ತವಕಿಸುತ್ತಿದೆ. ಇತ್ತ ಬಿಜೆಪಿ ಸಹ ಕ್ಷೇತ್ರವನ್ನು ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದೆ. ಹೀಗಾಗಿ, ಗೆಲ್ಲುವ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅಭ್ಯರ್ಥಿ, ಕಾಂಗ್ರೆಸ್‌ನಿಂದ ಎಂವೈಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಅಭ್ಯರ್ಥಿ. 

ಅಬ್ಬರದ ಪ್ರಚಾರ: 

ಎರಡೂ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಡಾ.ಕೆ.ಸುಧಾಕರ್ ಅವರು ತಾವು ಆರೋಗ್ಯ ಸಚಿವರಾಗಿದ್ದಾಗ ಹಾಗೂ ಕೊರೊನಾದಂತಹ ಸಂಕಷ್ಟದ ಸಮಯ ದಲ್ಲಿ ತಾವು ಕೈಗೊಂಡ ಜನಪರ ಕಾರ್ಯಕ್ರ ಮಗಳು ಹಾಗೂ ತಮ್ಮ ಸಾಧನೆಗಳ ಮೇಲೆ ಮತಯಾಚಿಸುತ್ತಿದ್ದಾರೆ. ಜೊತೆಗೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು, ಅವರು ಕೈಗೊಂಡ ಅಭಿವೃದ್ಧಿ ಕಾರ್ಯ ಗಳು, ಯಡಿಯೂರಪ್ಪ, ಬಿ. ವೈ.ವಿಜಯೇಂದ್ರ ಅವರುಗಳ ಸಮರ್ಥ ನಾಯಕತ್ವದಬೆಂಬಲ ಜೊತೆಗೆ, ಒಕ್ಕಲಿಗರ ಪ್ರಾಬಲ್ಯದ ಈ ಕ್ಷೇತ್ರದಲ್ಲಿ ಜೆಡಿಎಸ್ ಮೈತ್ತಿ ಲಾಭವಾಗುವ ನಿರೀಕ್ಷೆಯಲ್ಲಿದ್ದಾರೆ.

ಲೋಕಸಭಾ ಚುನಾವಣೆ ನಂತರ ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ

ಇನ್ನು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯನವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಾಯಕತ್ವ, ಜೊತೆಗೆ, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ತಮ್ಮ ಕೈ ಹಿಡಿಯಲಿವೆ ಎಂಬ ಆಶಾವಾದದಲ್ಲಿ ಇದ್ದಾರೆ.

ಕ್ಷೇತ್ರ ಪರಿಚಯ: 

ಈ ಹಿಂದೆ ಚಿಕ್ಕಬಳ್ಳಾಪುರ, ಅವಿಭಜಿತ ಕೋಲಾರ ಜಿಲ್ಲೆಯ ಭಾಗವಾಗಿತ್ತು. 2007ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಾಗಿ ರೂಪುಗೊಂಡಿತು. 1977ರಲ್ಲಿ ಸ್ವತಂತ್ರವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಈ ಕ್ಷೇತ್ರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಯ ಕೆಲ ಭಾಗಗಳನ್ನೂ ಒಳಗೊಂಡಿದೆ. ಕಾಂಗ್ರೆಸ್-ಜೆಡಿಎಸ್‌ನ ಪಾರುಪತ್ಯವಿದ್ದ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಮೈತ್ರಿಯಿದ್ದರೂ, ಮೋದಿಯ ಆಲೆ, ಒಕ್ಕಲಿಗ ಮತಗಳ ಪ್ರಾಬಲ್ಯ ದಿಂದ ಬಿಜೆಪಿ ಪಕ್ಷ ಮೊದಲ ಬಾರಿಗೆ ಚಿಕ್ಕಬಳ್ಳಾ ಪುರದಲ್ಲಿ ಗೆದ್ದು ಬೀಗಿತ್ತು. ಈಗ ವಿಧಾನಸಭಾ ಕ್ಷೇತ್ರಗಳ ಪೈಕಿ 6 ರಲ್ಲಿ ಕಾಂಗ್ರೆಸ್ ಶಾಸಕರಿದ್ದು, ಕೇವಲ 2 ಕಡೆ ಬಿಜೆಪಿ ಶಾಸಕರಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗ ಮತ್ತು ಪರಿಶಿಷ್ಟ ಸಮುದಾಯದ ಮತ ದಾರರೇ ನಿರ್ಣಾಯಕ, ಆದರೂ, ಸಣ್ಣಪುಟ್ಟ ಸಮುದಾಯದ ಅಭ್ಯರ್ಥಿಗಳಿಗೇ ಕ್ಷೇತ್ರದ ಜನ ಇಲ್ಲಿವರೆಗೆ ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದವರು ಕೇವಲ ಇಬ್ಬರು ಮಾತ್ರ. 

Follow Us:
Download App:
  • android
  • ios