ಎಂಟಿಬಿ ಗೆದ್ರೆ ಬರೀ ಸಚಿವ, ನಾನು ಗೆದ್ದರೆ ಸಿದ್ದು ಸಿಎಂ!| ನಾನು ಗೆದ್ದರೆ ಬಿಜೆಪಿ ಸರ್ಕಾರ ಪತನ: ಪದ್ಮಾವತಿ

ಸೂಲಿಬೆಲೆ[ನ.21]: ಮತ​ದಾ​ರರು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್‌ ಅವ​ರ​ನ್ನು ಗೆಲ್ಲಿಸಿದರೆ, ಅವ​ರು ಮಂತ್ರಿಯಾಗಬಹುದು. ಆದರೆ, ನನಗೆ ಮತ ಹಾಕಿ ಗೆಲ್ಲಿಸಿದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮಾವತಿ ಸುರೇಶ್‌ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಹೊಸಕೋಟೆ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕೋ? ಎಂಟಿಬಿ ಸಚಿವರಾಗಬೇಕೋ? ಎಂಬುದನ್ನು ಯೋಚನೆ ಮಾಡಿ. ನನ್ನ ಗೆಲುವಿನೊಂದಿಗೆ ಈ ಸರ್ಕಾರ ಪತನವಾಗುತ್ತದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ. ಹೊಸಕೋಟೆ ಕ್ಷೇತ್ರ ಬೆಂಗಳೂರಿನಂತೆ ಅಭಿವೃದ್ಧಿ ಆಗುತ್ತದೆ ಎಂದರು.

ಸಿದ್ದರಾಮಯ್ಯ ಅವ​ರ ಕೊಡುಗೆ ಮುಂದಿಟ್ಟುಕೊಂಡು ನಾವು ಮತ ಯಾಚಿ​ಸು​ತ್ತಿ​ದ್ದೇ​ವೆ. ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹೊಸಕೋಟೆಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಪದ್ಮಾ​ವತಿ ಸುರೇಶ್‌ ಹೇಳಿದರು.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

ನವೆಂಬರ್ 21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: