ಈ ಮೂರು ದಾಖಲೆಗಳ ಮೇಲೆ ನಿಂತಿದೆ ಫಡ್ನವೀಸ್ ಸರ್ಕಾರದ ಭವಿಷ್ಯ!
ಈ ಮೂರು ದಾಖಲೆಗಳ ಮೇಲೆ ನಿಂತಿದೆ ಫಡ್ನವೀಸ್ ಸರ್ಕಾರದ ಭವಿಷ್ಯ!| ಸುಪ್ರೀಂ ಚಾಟಿಗೆ ಫಡ್ನವೀಸ್ ಸುಸ್ತು| ದಾಖಲೆ ಇಲ್ಲದಿದ್ದರೆ ಸರ್ಕಾರ ಉಳಿಯಲ್ಲ
ಮುಂಬೈ[ನ.24]: ಮಹಾರಾಷ್ಟ್ರದ ರಾಜಕೀಯ ಸಂಗ್ರಾಮ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಭಾನುವಾರದಂದು ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದೆ.
ನ್ಯಾಯಮೂರ್ತಿ ಎನ್.ವಿ ರಮಣ, ಜಸ್ಟೀಸ್ ಅಶೋಕ್ ಹಾಗೂ ಜಸ್ಟೀಸ್ ಸಂಜೀವ್ ಖನ್ನಾರಿದ್ದ ತ್ರಿಸದಸ್ಯ ಪೀಠ ಮಹಾರಾಷ್ಟ್ರದಲ್ಲಿ ಕೇಂದ್ರದಿಂದ ರಾಷ್ಟ್ರಪತಿ ಆಡಳಿತ ಹಿಂಪಡೆಯಲು, ರಾಜ್ಯಪಾಲರಿಗೆ ನೀಡಲಾದ ಮನವಿ ಪತ್ರ ಹಾಗೂ ಶಾಸಕರ ಸಮರ್ಥನೆ ಪತ್ರವನ್ನು ಸಲ್ಲಿಸುವಂತೆ ಸೂಚಿಸಿದೆ.
ಫಡ್ನವೀಸ್ ಸರ್ಕಾರಕ್ಕೆ 1 ದಿನದ ಜೀವದಾನ, ತಕ್ಷಣ ಬಹುಮತ ಸಾಬೀತು ಇಲ್ಲ: ಸುಪ್ರೀಂ
ಈ ಮೂರು ದಾಖಲೆಗಳ ಮೇಲೆ ನಿಂತಿದೆ ಫಡ್ನವೀಸ್ ಸರ್ಕಾರದ ಭವಿಷ್ಯ
*ರಾಷ್ಟ್ರಪತಿ ಆಳ್ವಿಕೆ ಹಿಂಪಡೆಯಲು ನೀಡಲಾದ ಶಿಫಾರಸು ಪತ್ರ
*ಸರ್ಕಾರ ರಚಿಸಲು ಅವಕಾಶ ಕೋರಲು ಶಾಸಕರು ನೀಡಿರುವ ಸಮರ್ಥನೆ ಪತ್ರವನ್ನು ದೇವೇಂದ್ರ ಫಡ್ನವೀಸ್ ಬಳಿ ಕೇಳಿದೆ.
*ರಾಜ್ಯಪಾಲರಿಗೆ ಸರ್ಕಾರ ರಚಿಸಲು ಕೋರಿ ದೇವೇಂದ್ರ ಫಡ್ನವೀಸ್ ಸಲ್ಲಿಸಿದ ಮನವಿ ಪತ್ರ
ಸುಪ್ರೀಂಗೆ ಈ ದಾಖಲೆಗಳನ್ನು ಕೇಂದ್ರ ಸರ್ಕಾರ ಸಲ್ಲಿಸಲಿದೆ. ಈ ದಾಖಲೆಗಳನ್ನು ಪರಿಶೀಲಿಸಿದ ಬಳಿಕವಷ್ಟೇ ಸುಪ್ರೀಂ ಕೋರ್ಟ್ ಈ ಪ್ರಕರಣ ಸಂಬಂಧ ತೀರ್ಪು ನೀಡಲಿದೆ. ಇನ್ನು ಸೋಮವಾರ ಬೆಳಗ್ಗೆ 10.30ರ ವೇಳೆಗೆ ಪ್ರಕರಣದ ವಿಚಾರಣೆ ನಡೆಯಲಿದೆ.
2022ರಲ್ಲಿ ರಾಷ್ಟ್ರಪತಿ ಸ್ಥಾನಕ್ಕೆ ಶರದ್ ಪವಾರ್ NDA ಅಭ್ಯರ್ಥಿ: RSS ಚಿಂತಕನ ಭವಿಷ್ಯ!
ಪ್ರಕರಣ ಸುಪ್ರೀಂ ಅಂಗಳ ತಲುಪಿದ್ದು ಹೇಗೆ?
ದಿಢೀರ್ ರಾಷ್ಟ್ರಪತಿ ಆಡಳಿತ ತೆರವುಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟ ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಮೂರು ಪಕ್ಷಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆದಿದ್ದು, ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ.
ಮಹಾರಾಷ್ಟ್ರ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ: ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು