Asianet Suvarna News Asianet Suvarna News

ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಕಟ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೊನೆಯ ಪಂದ್ಯವನ್ನು ಹೊರತುಪಡಿಸಿ ಉಳಿದೆಲ್ಲಾ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ತೋರಿದ್ದ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮತ್ತೋರ್ವ ಕರ್ನಾಟಕದ ಪ್ರತಿಭೆ ಕರುಣ್ ನಾಯರ್ ಆಯ್ಕೆಗಾರರ ಮನಗೆಲ್ಲುವಲ್ಲಿ ಮತ್ತೊಮ್ಮೆ ವಿಫಲವಾಗಿದ್ದಾರೆ. 

Cricket India recall Rohit Sharma, Murali Vijay for Australia Tests
Author
Mumbai, First Published Oct 27, 2018, 1:14 PM IST

ಮುಂಬೈ[ಅ.27]: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ 4 ಟೆಸ್ಟ್ ಪಂದ್ಯಗಳ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ, ಮುರುಳಿ ವಿಜಯ್ ಹಾಗೂ ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ಪಾರ್ಥಿವ್ ಪಟೇಲ್ ತಂಡಕ್ಕೆ ಕಮ್’ಬ್ಯಾಕ್ ಮಾಡಿದ್ದಾರೆ.

ಸೀಮಿತ ಓವರ್’ಗಳ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ರೋಹಿತ್ ಶರ್ಮಾಗೆ ಟೆಸ್ಟ್ ತಂಡದಲ್ಲಿ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಇಂಗ್ಲೆಂಡ್ ಪ್ರವಾಸದಲ್ಲಿ ಕಳಪೆ ಪ್ರದರ್ಶನ ತೋರಿ ತಂಡದಿಂದ ಹೊರಬಿದ್ದಿದ್ದ ಮುರುಳಿ ವಿಜಯ್ ಅವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇನ್ನು ಅನುಭವಿ ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ಪಾರ್ಥಿವ್ ಪಟೇಲ್ ಕೂಡಾ ತಂಡ ಕೂಡಿಕೊಂಡಿದ್ದಾರೆ. ರಿಶಭ್ ಪಂತ್ ಕೂಡಾ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದು, ದಿನೇಶ್ ಕಾರ್ತಿಕ್ ಅವರನ್ನು ಕೈಬಿಡಲಾಗಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೊನೆಯ ಪಂದ್ಯವನ್ನು ಹೊರತುಪಡಿಸಿ ಉಳಿದೆಲ್ಲಾ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ತೋರಿದ್ದ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮತ್ತೋರ್ವ ಕರ್ನಾಟಕದ ಪ್ರತಿಭೆ ಕರುಣ್ ನಾಯರ್ ಆಯ್ಕೆಗಾರರ ಮನಗೆಲ್ಲುವಲ್ಲಿ ಮತ್ತೊಮ್ಮೆ ವಿಫಲವಾಗಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ಮಯಾಂಕ್ ಅಗರ್’ವಾಲ್ ಕೂಡಾ ಆಸೀಸ್ ಸರಣಿಗೆ ಆಯ್ಕೆಯಾಗಿಲ್ಲ. ಇನ್ನುಳಿದಂತೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ಆರ್. ಅಶ್ವಿನ್, ಜಡೇಜಾ, ಕುಲ್ದೀಪ್ ಕೂಡಾ ಸ್ಥಾನ ಪಡೆದಿದ್ದಾರೆ.

ಇನ್ನು ಭಾರತ ತಂಡವು ಟೆಸ್ಟ್ ಸರಣಿಗೂ ಮುನ್ನ 3 ಟಿ20 ಪಂದ್ಯಗಳನ್ನು ಆಡಲಿದ್ದು ನವೆಂಬರ್ 21ರಿಂದ ಚುಟುಕು ಕ್ರಿಕೆಟ್ ಸರಣಿ ಆರಂಭವಾಗಲಿದೆ. ಈ ಟಿ20 ಸರಣಿಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಕ್ರಿಕೆಟಿಗರಾದ ಮನೀಶ್ ಪಾಂಡೆ ಹಾಗೂ ಕೆ.ಎಲ್ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟಿ20 ಸರಣಿಗೆ ಟೀಂ ಇಂಡಿಯಾ ಹೀಗಿದೆ..

ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಹೀಗಿದೆ..

ವಿರಾಟ್ ಕೊಹ್ಲಿ[ನಾಯಕ], ಮುರುಳಿ ವಿಜಯ್, ಕೆ.ಎಲ್ ರಾಹುಲ್, ಪೃಥ್ವಿ ಶಾ, ಪಾರ್ಥಿವ್ ಪಟೇಲ್, ಅಜಿಂಕ್ಯ ರಹಾನೆ, ಹನುಮಾ ವಿಹರಿ, ರೋಹಿತ್ ಶರ್ಮಾ, ರಿಶಭ್ ಪಂತ್, ಆರ್. ಅಶ್ವಿನ್, ಆರ್. ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್. 

 

Follow Us:
Download App:
  • android
  • ios