Asianet Suvarna News Asianet Suvarna News

ಮೇರಿ ಕೋಮ್ ವಿಶ್ವ ದಾಖಲೆ: 6ನೇ ಚಿನ್ನದ ಪದಕ ಗೆದ್ದ ಬಾಕ್ಸಿಂಗ್ ತಾರೆ!

ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಮೇರಿ ಕೋಮ್ ಹೊಸ ದಾಖಲೆ! ಭಾರತದ ಬಾಕ್ಸಿಂಗ್‌ ತಾರೆ ಎಂ.ಸಿ. ಮೇರಿ ಕೋಮ್‌  ದಾಖಲೆಯ ಚಿನ್ನದ ಪದಕ! 8 ಕೆಜಿ ಲೈಟ್‌ ಫ್ಲೈವೇಟ್‌ ವಿಭಾಗದ ಫೈನಲ್‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಮೇರಿ ಕೋಮ್! ಪ್ರತಿಸ್ಪರ್ಧಿ ಉಕ್ರೇನ್‌ನ ಎಚ್ ಓಕೋಟೊ ವಿರುದ್ಧ 5-0 ಅಂತರದ ಗೆಲುವು 

Mary Kom Become First Woman Boxer To Win Six World Championship Gold Medals
Author
Bengaluru, First Published Nov 24, 2018, 5:56 PM IST

ನವದೆಹಲಿ(ನ.24): ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭಾರತದ ಬಾಕ್ಸಿಂಗ್‌ ತಾರೆ ಎಂ.ಸಿ. ಮೇರಿ ಕೋಮ್‌  ದಾಖಲೆಯ ಆರನೇಯ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಇಂದು ನಡೆದ 48 ಕೆಜಿ ಲೈಟ್‌ ಫ್ಲೈವೇಟ್‌ ವಿಭಾಗದ ಫೈನಲ್‌ ಹಣಾಹಣಿಯಲ್ಲಿ ಉಕ್ರೇನ್‌ನ ಎಚ್ ಓಕೋಟೊ ವಿರುದ್ಧ 5-0 ಅಂತರದ ಗೆಲುವು ಸಾಧಿಸುವ ಮೂಲಕ,  ಆರು ಬಾರಿ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ವಿಶ್ವದ ಮೊದಲ ಬಾಕ್ಸಿಂಗ್ ತಾರೆ ಎಂಬ ಗೌರವಕ್ಕೆ ಮೇರಿ ಕೋಮ್ ಪಾತ್ರವಾಗಿದ್ದಾರೆ.

ಮೇರಿ ಕೋಮ್ ಈ ಹಿಂದೆ ಐದು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕದೊಡನೆ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಆಗಿ ಮಿಂಚಿದ್ದರು. ಮೇರಿ ಕೋಮ್‌ 2010ರಲ್ಲಿ ಕೊನೆಯದಾಗಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಚಿನ್ನ ಗೆದ್ದಿದ್ದರು.

ಇನ್ನು ಮೇರಿ ಕೋಮ್ ಅವರ ಈ ಅಭೂತಪೂರ್ವ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
 

Follow Us:
Download App:
  • android
  • ios