Asianet Suvarna News Asianet Suvarna News

ಇಂಡೋ-ಕಿವೀಸ್ ಕ್ರಿಕೆಟ್: ಅಂತಿಮ 2 ಏಕದಿನ, ಟಿ20 ಸರಣಿಯಿಂದ ಕೊಹ್ಲಿಗೆ ರೆಸ್ಟ್!

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಗೆಲುವಿನ ಬೆನ್ನಲ್ಲೇ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಬಿಸಿಸಿಐ ದಿಢೀರ್ ನಿರ್ಧಾರದ ಹೆಚ್ಚಿನ ಮಾಹಿತಿ ಇಲ್ಲಿದೆ.
 

Virat Kohli rested for last 2 ODI and t20 series against New Zealand cricket series
Author
Bengaluru, First Published Jan 23, 2019, 7:21 PM IST

ನೇಪಿಯರ್(ಜ.23): ನ್ಯೂಜಿಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಶುಭಾರಂಭ ಮಾಡಿದ ಟೀಂ ಇಂಡಿಯಾ ಇದೀಗ 2ನೇ ಪಂದ್ಯದತ್ತ ಚಿತ್ತ ಹರಿಸಿದೆ. ಇದರ ಬೆನ್ನಲ್ಲೇ ಬಿಸಿಸಿಐ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದೆ. ನ್ಯೂಜಿಲೆಂಡ್ ವಿರುದ್ಧದ ಅಂತಿಮ 2 ಏಕದಿನ ಹಾಗೂ 3 ಪಂದ್ಯಗಳ ಟಿ20 ಸರಣಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಿದೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಹಾಗೂ ತಾಯಿಯನ್ನ ನಿಂದಿಸಿದ ಪಾಕ್ ನಾಯಕ!

ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಇನ್ನುಳಿದ 4 ಪಂದ್ಯಗಳಲ್ಲಿ 2 ಪಂದ್ಯಕ್ಕೆ ಮಾತ್ರ ಕೊಹ್ಲಿ ಲಭ್ಯರಿದ್ದಾರೆ. ಬಳಿಕ ತವರಿಗೆ ಮರಳಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸತತ ಪಂದ್ಯದಿಂದ ಕೊಹ್ಲಿ ಬಳಲಿದ್ದಾರೆ. ಇಷ್ಟೇ ಅಲ್ಲ, 2019ರ ವಿಶ್ವಕಪ್ ದೃಷ್ಟಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಿದೆ.

ಇದನ್ನೂ ಓದಿ: ಆಸಿಸ್ ವಿರುದ್ಧದ ಗೆಲುವು- ಆಯ್ಕೆ ಸಮಿತಿಗೆ ಬಿಸಿಸಿಐ ಭರ್ಜರಿ ಗಿಫ್ಟ್!

ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.  ಕೊಹ್ಲಿ ಬದಲಿ ಆಟಗಾರನಾಗಿ ಬಿಸಿಸಿಐ ಯಾರನ್ನೂ ಆಯ್ಕೆ ಮಾಡಿಲ್ಲ.  ನ್ಯೂಜಿಲೆಂಡ್ ವಿರುದ್ದದ ಸರಣಿ ಬಳಿಕ ತವರಿನಲ್ಲಿ ಭಾರತ  ಹಾಗೂ ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಬಳಿಕ ಐಪಿಎಲ್ ಟೂರ್ನಿ ಆರಂಭವಾಗಲಿದೆ. 
 

Follow Us:
Download App:
  • android
  • ios